ಕಟೀಲು ದುರ್ಗಾಪರಮೇಶ್ವರಿ ಅವಹೇಳನ: ಫೇಸ್ಬುಕ್ ಅಧಿಕಾರಿ ಜೊತೆ ಚರ್ಚೆ
ಮಂಗಳೂರು, ಜೂನ್ 6: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿಯ ಬಗ್ಗೆ ಫೇಸ್ಬುಕ್ಕಿನಲ್ಲಿ ಅವಹೇಳನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈ ಹಿಂದೆ ಮಾಹಿತಿ ಕೇಳಿದ್ದ ಹಿನ್ನೆಲೆಯಲ್ಲಿ ಫೇಸ್ಬುಕ್ ಅಧಿಕಾರಿ ಸೋಹೆಬ್ ಶುಕ್ರವಾರ ನಗರಕ್ಕೆ ಆಗಮಿಸಿದ್ದು, ಇಲ್ಲಿ ಪೊಲೀಸ್ ಆಯುಕ್ತರು ಹಾಗೂ ಇತರ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.
ಫೇಸ್ಬುಕ್ಕಿನಲ್ಲಿ ಪ್ರಕಟವಾಗುತ್ತಿರುವ ಅವಹೇಳನಕಾರಿ ಸುದ್ದಿಗಳಿಂದ ಜಿಲ್ಲೆಯಲ್ಲಿ ಉಂಟಾಗಿರುವ ಸಂಚಲನ,ಪ್ರತಿಭಟನೆ, ಹೋರಾಟದ ಬಗ್ಗೆ ಫೇಸ್‍ಬುಕ್ ಅಧಿಕಾರಿಗೆ ಪೊಲೀಸರು ಮನವರಿಕೆ ಮಾಡಿಕೊಟ್ಟಿದ್ದಾರೆ. ಪೊಲೀಸ್ ಆಯುಕ್ತ ಚಂದ್ರಶೇಖರ್ ಅವರನ್ನು ಸೋಹೆಬ್ ಭೇಟಿ ಮಾಡಿದ್ದು, ಮಾಹಿತಿ ಪಡೆದುಕೊಂಡಿದ್ದಾರೆ. ಬಂದರು ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶಾಂತರಾಮ್ ಅವರನ್ನು ಭೇಟಿ ಮಾಡಿ ಸಮಗ್ರ ಮಾಹಿತಿ ಕಲೆ ಹಾಕಿದ್ದಾರೆ.[ಆರು ತಿಂಗಳ ಅವಧಿಯಲ್ಲಿ ಬರೋಬ್ಬರಿ 1,088 ಯಕ್ಷಗಾನ ಪ್ರದರ್ಶನ !]

ಕಟೀಲು ದೇವಿಯ ಅವಹೇಳನ ಪ್ರಕರಣಕ್ಕೆ ಸಂಬಂಧಿಸಿ ಸೂಕ್ತ ದಾಖಲೆಗಳನ್ನು ನೀಡುವಂತೆ ಅಧಿಕಾರಿ ಸೋಹೆಬ್ ಅವರಲ್ಲಿ ಆಗ್ರಹಿಸಲಾಗಿದೆ. ಇಲ್ಲದೇ ಹೋದಲ್ಲಿ ಕಾನೂನು ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಸಿದ್ದಾರೆ. ಈ ಅವಹೇಳನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೂರಕ ದಾಖಲೆಗಳನ್ನು ನೀಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುವುದಾಗಿ ಸೋಹೆಬ್ ಭರವಸೆ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.












Click it and Unblock the Notifications