ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು ಆಸ್ಪತ್ರೆಯಿಂದ ರಾತ್ರೋರಾತ್ರಿ ಎಸ್ಕೇಪ್ ಆದ ಕೊರೊನಾ ಶಂಕಿತ!

|
Google Oneindia Kannada News

ಮಂಗಳೂರು, ಮಾರ್ಚ್ 9: ಕೊರೊನಾ ಸೋಂಕು ತಗುಲಿರುವ ಶಂಕೆ ಹಿನ್ನಲೆಯಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬ ರಾತ್ರೋರಾತ್ರಿ ಎಸ್ಕೇಪ್ ಆಗಿದ್ದಾನೆ.

ನಿನ್ನೆ (ಭಾನುವಾರ, ಮಾರ್ಚ್ 8) ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೊರೊನಾ ಸೋಂಕು ಶಂಕಿತ ಪ್ರಯಾಣಿಕನೋರ್ವ ಬಂದಿಳಿದಿದ್ದ. ದುಬೈನಿಂದ ಮಂಗಳೂರಿಗೆ ಬಂದಿದ್ದ ಆ ವ್ಯಕ್ತಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿತ್ತು.

SARS, MERS ಮಹಾಮಾರಿಗಳಿಗೆ ಬಗ್ಗದ ಭಾರತ ಕೊರೊನಾ ಗುಮ್ಮನಿಗೆ ಜಗ್ಗಿತೇ?SARS, MERS ಮಹಾಮಾರಿಗಳಿಗೆ ಬಗ್ಗದ ಭಾರತ ಕೊರೊನಾ ಗುಮ್ಮನಿಗೆ ಜಗ್ಗಿತೇ?

ದುಬೈನಿಂದ ಮಂಗಳೂರಿಗೆ ಬಂದಿದ್ದ ಆ ವ್ಯಕ್ತಿಗೆ ಜ್ವರ ಮತ್ತು ನೆಗಡಿ ಇತ್ತು. ಹೀಗಾಗಿ, ಆತನನ್ನು ಆರೋಗ್ಯಾಧಿಕಾರಿಗಳು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಬಳಿಕ ಆತನ ರಕ್ತದ ಮಾದರಿಯನ್ನು ಲ್ಯಾಬ್ ಗೆ ರವಾನಿಸಿದ್ದರು. ಕೊರೊನಾ ಶಂಕೆ ಇದ್ದಿದ್ರಿಂದ ಆತನನ್ನು ಪ್ರತ್ಯೇಕ ವಾರ್ಡ್ ನಲ್ಲಿ ಇರಿಸಲಾಗಿತ್ತು.

Coronavirus Suspect Escaped From Mangaluru Wenlock Hospital

ಬ್ಲಡ್ ರಿಪೋರ್ಟ್ ಬರುವ ಮುನ್ನವೇ ಆ ವ್ಯಕ್ತಿ ಆಸ್ಪತ್ರೆಯಿಂದ ರಾತ್ರೋರಾತ್ರಿ ಎಸ್ಕೇಪ್ ಆಗಿದ್ದಾನೆ. ವೈದ್ಯರು ನೀಡಿದ ಸಲಹೆಯನ್ನು ಧಿಕ್ಕರಿಸಿ ಆ ಪ್ರಯಾಣಿಕ ಆಸ್ಪತ್ರೆಯಿಂದ ಪರಾರಿ ಆಗಿದ್ದಾನೆ. ಈ ಸಂಬಂಧ ಆರೋಗ್ಯಾಧಿಕಾರಿಗಳು ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ.

'ನಮಸ್ತೆ' ಹೇಳಿ.. ಡೆಡ್ಲಿ ಕೊರೊನಾ ವೈರಸ್ ನ ದೂರ ತಳ್ಳಿ!'ನಮಸ್ತೆ' ಹೇಳಿ.. ಡೆಡ್ಲಿ ಕೊರೊನಾ ವೈರಸ್ ನ ದೂರ ತಳ್ಳಿ!

ಕೂಡಲೆ ಎಚ್ಚೆತ್ತ ಪೊಲೀಸ್ ಅಧಿಕಾರಿಗಳು ಆತನ ಹಿನ್ನಲೆಯನ್ನು ಪಡೆದುಕೊಂಡು ಆ ವ್ಯಕ್ತಿಯ ಮನೆಗೆ ಭೇಟಿ ಕೊಟ್ಟಿದ್ದಾರೆ. ಸದ್ಯದಲ್ಲೇ ಮತ್ತೆ ಆ ವ್ಯಕ್ತಿಯನ್ನ ಆಸ್ಪತ್ರೆಗೆ ಕರೆತರಲಾಗುವುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

English summary
Coronavirus Suspect escaped from Mangaluru Wenlock Hospital.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X