Sowjanya Murder Case: ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನಕಾರಿ ವರದಿಗೆ ಕೋರ್ಟ್ ತಡೆ

ಮಂಗಳೂರು, ಜುಲೈ 22: 2012ರಲ್ಲಿ ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಮತ್ತು ಅವರು ನಡೆಸುತ್ತಿರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ನಿರ್ಬಂಧಕಾಜ್ಞೆ ಆದೇಶ ಹೊರಡಿಸಿದೆ

ಆರು ಜನ ವ್ಯಕ್ತಿಗಳು ಮತ್ತು 54 ವೆಬ್ ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳಿಗೆ ಈ ನಿರ್ಬಂಧಕಾಜ್ಞೆಯನ್ನು ವಿಧಿಸಲಾಗಿದೆ.

Court Stay On Defamation Report Against Sri Kshetra Dharmasthala

2012ರ ಅಕ್ಟೋಬರ್12 ರಂದು ಧರ್ಮಸ್ಥಳ ನೇತ್ರಾವತಿಯ ಬಳಿಯ ಮಣ್ಣ ಸಂಕ ಬಳಿ ಸೌಜನ್ಯನ ಮೃತದೇಹ ಪತ್ತೆಯಾಗಿತ್ತು. ಬಳಿಕ ಅತ್ಯಾಚಾರವಾಗಿ ಕೊಲೆಯಾಗಿರೋದು ಧೃಡವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋರಾಟದ ನೇತೃತ್ವವನ್ನು ವಹಿಸಿಕೊಂಡಿರುವ ಮಹೇಶ್ ಶೆಟ್ಟಿ ತಿಮರೋಡಿ, ಜಗದೀಶ್, ಪ್ರಭಾ ಬೆಳೆಹೊಂಗಳ, ಸೋಮನಾಥ ನಾಯಕ್, ಬಿಎಂ ಭಟ್, ವಿಠಲ್ ಗೌಡ ಮತ್ತು ಇತರರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬಸ್ಥರ ವಿರುದ್ಧ ಹೇಳಿಕೆಗಳನ್ನು ನೀಡಿರುವ ಆರೋಪ ಕೇಳಿ ಬಂದಿತ್ತು.

ಈ ಹಿನ್ನಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಸಂಬಂಧಪಟ್ಟವರು ಸಿಟಿ ಸಿವಿಲ್ ನ್ಯಾಯಾಲಯ ದಾವೆಯನ್ನು ದಾಖಲಿಸಿದ್ದರು. ಈ ವಿಚಾರವನ್ನು ಕೈಗೆ ತೆಗೆದುಕೊಂಡ ನ್ಯಾಯಾಲಯ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನ, ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ, ಮತ್ತು ಅವರ ಸಂಸ್ಥೆ, ಕುಟುಂಬಸ್ಥರ ಮೇಲೆ ಆರು ಮಂದಿ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಹೇಳಿಕೆ ನೀಡದಂತೆ ನ್ಯಾಯಾಲಯ ಆದೇಶಿಸಿದೆ.

ಅಲ್ಲದೇ ಈಗಾಗಲೇ ಮಾಧ್ಯಮಗಳು, ಫೇಸ್ ಬುಕ್, ವಾಟ್ಸಪ್, ಟ್ವಿಟ್ಟರ್, ಇನ್ ಸ್ಟಾಗ್ರಾಂ, ಯೂಟ್ಯೂಬ್‌ಗಳಲ್ಲಿ ಪ್ರಸಾರವಾಗಿರುವ ಇವರ ಹೇಳಿಕೆಗಳನ್ನು ಅಳಿಸಿ ಹಾಕಬೇಕೆಂದು ನ್ಯಾಯಾಲಯ ಆದೇಶಿಸಿದೆ ಎಂದು ವರದಿಯಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ಪುತ್ತೂರು ಮೂಲದ ನ್ಯಾಯವಾದಿ ರಾಜೇಶ್ ಹಿಲ್ಯಾರುಷ ಮತ್ತು ಮಂಗಳೂರಿನ ಮಯೂರ ಕೀರ್ತಿ ನ್ಯಾಯಾಲಯದಲ್ಲಿ ವಾದಿಸಿದ್ದರು.‌

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+