ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು ವಿಶ್ವವಿದ್ಯಾಲಯಕ್ಕೂ ಕೊರೊನಾ ಲಗ್ಗೆ: ಸ್ನಾತಕೋತ್ತರ ತರಗತಿಗಳು ರದ್ದು

|
Google Oneindia Kannada News

ಮಂಗಳೂರು, ಮಾರ್ಚ್ 25: ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ನಾತಕೋತ್ತರ ತರಗತಿಗಳನ್ನು ರದ್ದು ಮಾಡಲಾಗಿದೆ.

ವಿಶ್ವವಿದ್ಯಾನಿಲಯದ ಕೆಲವು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆ ವಿಶ್ವವಿದ್ಯಾನಿಲಯದ ಪ್ರದೇಶವನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಣೆ ಮಾಡಲಾಗಿದೆ.

ತೀರ್ಥಹಳ್ಳಿ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ತೀರ್ಥಹಳ್ಳಿ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್

ಇನ್ನು ವಿದ್ಯಾರ್ಥಿಗಳಲ್ಲಿ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡ ಹಿನ್ನೆಲೆ, ಇತರ ವಿದ್ಯಾರ್ಥಿಗಳಿಗೆ ಕೊರೊನಾ ಹರಡದಂತೆ ತಡೆಯಲು ಒಂದು ವಾರಗಳ ಕಾಲ‌ ಸ್ನಾತಕೋತ್ತರ ತರಗತಿಗಳನ್ನು ರದ್ದುಗೊಳಿಸಲಾಗಿದೆ.

Covid-19 Positive For Mangalore University Students: Postgraduate Classes Canceled

ಈ ಬಗ್ಗೆ ಮಾತನಾಡಿರುವ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಸುಬ್ರಹ್ಮಣ್ಯ ಯಡಪಡಿತ್ತಾಯ ಅವರು, ""ವಿದ್ಯಾರ್ಥಿಗಳಲ್ಲಿ ಕೊರೊನಾ ಪ್ರಕರಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಒಂದು ವಾರಗಳ ಕಾಲ ತರಗತಿಗಳನ್ನು ರದ್ದುಗೊಳಿಸಲಾಗಿದೆ. ವಿಶ್ವವಿದ್ಯಾನಿಲಯವನ್ನು ಕಂಟೈನ್ಮೆಂಟ್ ಝೋನ್ ಮಾಡಲಾಗಿದ್ದು, ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನಲ್ಲೇ ಇರುವಂತೆ ವ್ಯವಸ್ಥೆ ಮಾಡಲಾಗಿದೆ. ಅವರ ಆರ್​ಟಿ-ಪಿಸಿಆರ್ ತಪಾಸಣೆಯನ್ನು ಆರೋಗ್ಯ ಇಲಾಖೆ ನಡೆಸುತ್ತಿದೆ'' ಎಂದು ಮಾಹಿತಿ ನೀಡಿದರು.

English summary
Postgraduate classes in Mangalore University have been canceled due to coronavirus infection reported.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X