ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರಿನಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ವ್ಯಕ್ತಿ ಬಂಧನ

|
Google Oneindia Kannada News

ಮಂಗಳೂರು, ಜೂನ್ 20: ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಕ್ರಿಕೆಟ್ ಪಂದ್ಯದ ಬೆಟ್ಟಿಂಗ್ ನಡೆಸುತ್ತಿದ್ದ ಬುಕ್ಕಿಯೊಬ್ಬನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಈತ ಮೊಬೈಲ್ ಆಪ್ ಮೂಲಕ ಬೆಟ್ಟಿಂಗ್ ನಡೆಸುತ್ತಿದ್ದ ಎಂದು ಆರೋಪಿಸಲಾಗಿದ್ದು, ನಗರದ ಬರ್ಕೆ ಪೊಲೀಸರು ನಿನ್ನೆ ರಾತ್ರಿ ಬಂಧಿಸಿದ್ದಾರೆ. ಬಂಧಿತನನ್ನು ಬೋಳೂರು ಮಿಶನ್ ಕಾಂಪೌಂಡ್ ನಿವಾಸಿ ಸುದೇಶ್ (26) ಎಂದು ಗುರುತಿಸಲಾಗಿದೆ.

 ಮಂಗಳೂರಿನಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ; ಇಬ್ಬರ ಬಂಧನ ಮಂಗಳೂರಿನಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ; ಇಬ್ಬರ ಬಂಧನ

ಆರೋಪಿಯು ನಿನ್ನೆ ನಡೆದ ವಿಶ್ವಕಪ್ ಕ್ರಿಕೆಟ್‌ನ ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯಕ್ಕೆ ಸಂಬಂಧಿಸಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಬೆಟ್ಟಿಂಗ್ ನಡೆಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿಯನ್ನು ಆಧರಿಸಿ ಪೊಲೀಸರು ದಾಳಿ ನಡೆಸಿ ಆರೋಪಿ ಸುದೇಶ್ ‌ನನ್ನು ಬಂಧಿಸಿದ್ದಾರೆ.

Cricket betting Bookie arrested in Mangaluru

ಬಂಧಿತ ಆರೋಪಿಯಿಂದ ಕ್ರಿಕೆಟ್ ಬೆಟ್ಟಿಂಗ್ ‌ಗೆ ಬಳಸುತ್ತಿದ್ದ ಎರಡು ಮೊಬೈಲ್ ಫೋನ್‌ಗಳು ಹಾಗೂ ಬೆಟ್ಟಿಂಗ್ ಮೂಲಕ ಸಾರ್ವಜನಿಕರಿಂದ ಸಂಗ್ರಹಿಸಿದ 90 ಸಾವಿರ ರೂಪಾಯಿ ನಗದು ಸೇರಿದಂತೆ ಒಟ್ಟು 1.15 ಲಕ್ಷ ರೂಪಾಯಿ ಸೊತ್ತನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

English summary
Mangaluru police arrested person for accepting bets for world cup cricket. Arrested bookie identified as Sudesh (26).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X