• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಂಗಳೂರು; ಗುಂಡು ಹಾರಿಸಿ ಬೀದಿ ನಾಯಿ ಹತ್ಯೆ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಜುಲೈ 02; ಬೀದಿ ನಾಯಿಗೆ ಗುಂಡು ಹಾರಿಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮಂಗಳೂರು ನಗರದ ಕದ್ರಿ ಶಿವಭಾಗ್ ಎಂಬಲ್ಲಿ ನಡೆದಿದೆ. ನಾಯಿಯ ಮರಣೋತ್ತರ ಪರೀಕ್ಷೆಯಲ್ಲಿ ಗುಂಡು ಪತ್ತೆಯಾಗಿದ್ದು, ಸ್ಥಳೀಯ ವ್ಯಕ್ತಿಯ ಮೇಲೆ ಸಂಶಯ ವ್ಯಕ್ತಪಡಿಸಲಾಗಿದೆ.

ಗುಂಡೇಟು ತಿಂದ ನಾಯಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಜನರು ಶಕ್ತಿನಗರದ ಆನಿಮಲ್ ಕೇರ್ ಟ್ರಸ್ಟ್‌ಗೆ ಮಾಹಿತಿ ನೀಡಿದ್ದಾರೆ. ಆನಿಮಲ್ ಕೇರ್ ಟ್ರಸ್ಟ್‌ನ ಸದಸ್ಯರು ಸ್ಥಳಕ್ಕೆ ಬಂದ ಸಂದರ್ಭದಲ್ಲಿ ‌ಬುಲೆಟ್ ಗಾಯ ನಾಯಿಯ ಬೆನ್ನ ಹಿಂಭಾಗದಲ್ಲಿ ಕಂಡುಬಂದಿದೆ.

 ನಾಯಿ ಸಾಕುವುದು ಶೋಕಿಯಲ್ಲ ! ಅದರ ಕಕ್ಕವನ್ನ ಎತ್ತುವುದು ಇಲ್ಲಿ ಶಿಷ್ಟಾಚಾರ !! ನಾಯಿ ಸಾಕುವುದು ಶೋಕಿಯಲ್ಲ ! ಅದರ ಕಕ್ಕವನ್ನ ಎತ್ತುವುದು ಇಲ್ಲಿ ಶಿಷ್ಟಾಚಾರ !!

ಗುಂಡು ಹಾರಿಸಿದ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಆನಿಮಲ್ ಕೇರ್ ಟ್ರಸ್ಟ್‌ನ ಸುಮಾ ರಮೇಶ್ ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ವ್ಯಕ್ತಿಗಾಗಿ ಹುಡುಕಾಟ ನಡೆಸಿದ್ದಾರೆ.

ವಿಡಿಯೋ; ಪುತ್ತೂರಿನಲ್ಲಿ ಮಾಸ್ಕ್ ಧರಿಸಿ ಪೇಟೆಗೆ ಬಂದ ನಾಯಿ! ವಿಡಿಯೋ; ಪುತ್ತೂರಿನಲ್ಲಿ ಮಾಸ್ಕ್ ಧರಿಸಿ ಪೇಟೆಗೆ ಬಂದ ನಾಯಿ!

ಕದ್ರಿ ಶಿವಭಾಗ್‌ನ ಜುವೈಲರಿ ಮಳಿಗೆ ಹಿಂಭಾಗದ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಅದೇ ರಸ್ತೆಯಲ್ಲಿ ಯಾವಾಗಲೂ ನಾಯಿ ಅಡ್ಡಾಡುತಿತ್ತು. ಯಾರಿಗೂ ತೊಂದರೆ ಕೊಡದೇ ನಿರುಪದ್ರವಿಯಾಗಿತ್ತು.

ಮಂಗಳೂರು; ಬೈಕ್‌ಗೆ ನಾಯಿ ಕಟ್ಟಿ ಎಳೆದುಕೊಂಡು ಹೋದ ಪಾಪಿಗಳು ಮಂಗಳೂರು; ಬೈಕ್‌ಗೆ ನಾಯಿ ಕಟ್ಟಿ ಎಳೆದುಕೊಂಡು ಹೋದ ಪಾಪಿಗಳು

ಆದರೆ ನಾಯಿಯನ್ನು ಗುಂಡು ಹೊಡೆದವರು ಯಾರು?, ಯಾಕಾಗಿ ಹತ್ಯೆ ಮಾಡಲಾಗಿದೆ? ಎಂಬುದು ಪೊಲೀಸರ ತನಿಖೆ ಬಳಿಕ ಬಯಲಿಗೆ ಬರಲಿದೆ.

English summary
A stray dog was found shot dead in the Mangaluru city. The incident took place near Shivbagh. Animal care trust filed complaint in police station.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X