ಗುಪ್ತಾಂಗದಲ್ಲಿ ಚಿನ್ನ ಅಡಗಿಸಿ ಸಾಗಾಟಕ್ಕೆ ಯತ್ನಿಸಿದ ವ್ಯಕ್ತಿ ಬಂಧನ
ಮಂಗಳೂರು, ಜುಲೈ 26: ಗುಪ್ತಾಂಗದಲ್ಲಿ ಚಿನ್ನವನ್ನು ಅಡಗಿಸಿಟ್ಟುಕೊಂಡು ಅಕ್ರಮ ಸಾಗಾಟಕ್ಕೆ ಯತ್ನಿಸಿದ ವ್ಯಕ್ತಿಯೊಬ್ಬನನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈನಿಂದ ಬಂದಿಳಿದ ಪ್ರಯಾಣಿಕರೊಬ್ಬರ ನಡವಳಿಕೆ ಮೇಲೆ ಕರ್ತವ್ಯದಲ್ಲಿದ್ದ ಕಸ್ಟಮ್ ಅಧಿಕಾರಿಗಳಿಗೆ ಅನುಮಾನ ಮೂಡಿದೆ. ಆತನನ್ನು ವಶಕ್ಕೆ ಪಡೆದ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿ ಶೋಧ ನಡೆಸಿದಾಗ ಆತ ಗುಪ್ತಾಂಗದಲ್ಲಿ ಚಿನ್ನವನ್ನಿಟ್ಟುಕೊಂಡು ಅಕ್ರಮ ಸಾಗಾಟಕ್ಕೆ ಯತ್ನಿಸುತ್ತಿದ್ದದು ಬೆಳಕಿಗೆ ಬಂದಿದೆ.

ಬಂಧಿತ ಆರೋಪಿಯಿಂದ ಸುಮಾರು 34.18 ಲಕ್ಷ ರೂಪಾಯಿ ಮೌಲ್ಯದ 963 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಮುಂದಿನ ಕ್ರಮಕ್ಕಾಗಿ ಆತನನ್ನು ಕಸ್ಟಮ್ ಅಧಿಕಾರಿಗಳು ಬಜ್ಪೆ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.












Click it and Unblock the Notifications