ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು ವಿಮಾನ ನಿಲ್ದಾಣ: 18 ದಿನದಲ್ಲಿ ₹2 ಕೋಟಿ ಮೌಲ್ಯದ ಅಕ್ರಮ ಚಿನ್ನ ವಶ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಜನವರಿ 20: ಮಂಗಳೂರು ಅಂತರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ‌. ಕೇವಲ 18 ದಿನಗಳಲ್ಲಿ 2 ಕೋಟಿ ಮೌಲ್ಯದ ಅಕ್ರಮ ಸಾಗಾಟದ ಚಿನ್ನವನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ 18 ದಿನಗಳ ಅವಧಿಯಲ್ಲಿ ಅಕ್ರಮ ಸಾಗಾಟದ ಬರೋಬ್ಬರಿ 2 ಕೋಟಿ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ಜನವರಿ 1ರಿಂದ 18ರ ನಡುವಿನ ಅವಧಿಯಲ್ಲಿ ದುಬೈ ಹಾಗೂ ಅಬುಧಾಬಿಯಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ 8 ಮಂದಿ ಪುರುಷ ಪ್ರಯಾಣಿಕರು ಅಕ್ರಮವಾಗಿ ಚಿನ್ನ ಸಾಗಾಟಕ್ಕೆ ಯತ್ನಿಸಿದ್ದರು‌. ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ವೇಳೆ ಪತ್ತೆ ಹಚ್ಚಿ ಈ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ಟ್ರಾಲಿ ಬ್ಯಾಗ್‌ನ ಬೀಡಿಂಗ್‌ನಲ್ಲಿ, ಡಬಲ್ ಲೇಯರ್ಡ್ ವೆಸ್ಟ್ (ಬನಿಯನ್) ಒಳಗೆ ಪೇಸ್ಟ್ ರೂಪದಲ್ಲಿ, ಬಾಯಿಯೊಳಗಡೆ, ಗುದನಾಳ ಸೇರಿದಂತೆ ವಿವಿಧ ರೀತಿಯಲ್ಲಿ ಚಿನ್ನವನ್ನು ಕಳ್ಳಸಾಗಣೆ ಮಾಡಿದ್ದಾರೆ. ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ 3677.000 ಗ್ರಾಂ ತೂಕದ 2,01,69.800 ರೂ‌ಪಾಯಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

Customs Officials At Mangaluru Airport Seize Gold Worth Rs 2 Crore

ದುಬೈನಿಂದ ಆಗಮಿಸಿರುವ ಪ್ರಯಾಣಿಕನೋರ್ವನು 3,20,265 ರೂ. ಮೌಲ್ಯದ ಸಿಗರೇಟ್ ಮತ್ತು ಇ-ನಿಕೋಟಿನ್ ದ್ರವಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಆತ ತನ್ನ ಬ್ಯಾಗ್‌ನಲ್ಲಿ ಸಿಗರೇಟ್ ಹಾಗೂ ಇ-ನಿಕೋಟಿನ್ ಬಚ್ಚಿಟ್ಟು ಕಳ್ಳಸಾಗಣೆ ಮಾಡಲು ಪ್ರಯತ್ನಿಸಿದ್ದ. ಪರಿಶೀಲನೆ ನಡೆಸಿದ ಕಸ್ಟಮ್ಸ್ ಅಧಿಕಾರಿಗಳು ಆರೋಪಿಯಿಂದ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.

ಮಂಗಳೂರು ಅಂತರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಗಲ್ಫ್ ರಾಷ್ಟ್ರಗಳಿಂದ ಅತೀ ಹೆಚ್ಚು ಪ್ರಯಾಣಿಕರು ಬರುತ್ತಿದ್ದು, ಅತೀ ಹೆಚ್ಚು ಅಕ್ರಮ ಚಿನ್ನ ಸಾಗಾಟ ಪ್ರಕರಣಗಳು ವರದಿಯಾಗಿತ್ತಿದೆ. ‌ಕಸ್ಟಮ್ಸ್ ಅಧಿಕಾರಿಗಳು ಬಿಗಿ ತಪಾಸಣೆ ಮಾಡಿದರೂ ಅಕ್ರಮ ಚಿನ್ನ ಸಾಗಾಟಗಾರರು ನಾನಾ ಮಾರ್ಗಗಳನ್ನು ಚಿನ್ನ ಸಾಗಾಟಕ್ಕೆ ಬಳಸುತ್ತಿದ್ದು, ಚಿನ್ನ ಸಾಗಾಟ ಪ್ರಕರಣ ತಡೆಯಲು ಅಧಿಕಾರಿಗಳು ಹರಸಾಹಸ ಪಡುವಂತಾಗಿದೆ.

English summary
Customs officials at the Mangaluru International Airport have seized a total smuggled gold worth Rs 2,01,69,800 between January 1 and 18 this year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X