ಕರಾವಳಿ ಕರ್ನಾಟಕಕ್ಕೆ ಚಂಡಮಾರುತ ಭೀತಿ; ಗಾಳಿಯ ವೇಗ ಗಂಟೆಗೆ 65 ಕಿ.ಮೀ

ಮಂಗಳೂರು, ಮೇ 12: ರಾಜ್ಯದ ಕರಾವಳಿ ಭಾಗಕ್ಕೆ ವರ್ಷದ ಮೊದಲ ಚಂಡಮಾರುತ ಅಪ್ಪಳಿಸಲಿದೆ. ಅರಬ್ಬೀ ಸಮುದ್ರದಲ್ಲಿ ಉಂಟಾದ ಹವಾಮಾನ ವೈಪರೀತ್ಯದಿಂದ ಚಂಡಮಾರುತ ಎದ್ದಿದ್ದು, ಈ ಚಂಡಮಾರುತವನ್ನು "ಟೌಕ್ಟೇ ಚಂಡಮಾರುತ' ಅಂತಾ ಹೆಸರಿಸಲಾಗಿದೆ. ಇದು ಅರಬ್ಬೀ ಸಮುದ್ರದಲ್ಲಿ ಉಂಟಾದ ಅತ್ಯಂತ ಪ್ರಬಲ ಚಂಡಮಾರುತ ಅಂತಾ ಹೇಳಲಾಗಿದೆ.

ಮೇ 14 ರಂದು ಈ ಚಂಡಮಾರುತ ದಕ್ಷಿಣ ಕೇರಳದ ಕರಾವಳಿಗೆ ಅಪ್ಪಳಿಸಲಿದ್ದು, ಮೇ 15ನೇ ತಾರೀಖು ರಾಜ್ಯದ ಕರಾವಳಿ ಭಾಗಕ್ಕೆ ಅಪ್ಪಳಿಸಲಿದೆ. ಮೇ 16ನೇ ತಾರೀಖಿನಂದು ಮಹಾರಾಷ್ಟ್ರದ ಕರಾವಳಿ ಮೂಲಕ ಗುಜರಾತ್ ಕರಾವಳಿಯನ್ನು ತಲುಪಲಿದೆ.

ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ಚಂಡಮಾರುತದ ಗಾಳಿಯ ವೇಗ ಗಂಟೆಗೆ 60-65 ಕಿ.ಮೀ ವೇಗದಲ್ಲಿ ಇರಲಿದೆ ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Cyclone Hits Coastal Karnataka; Generating Wind Speeds Of 65 km Per Hour

ಮೇ 15 ಮತ್ತು ಮೇ 16ನೇ ತಾರೀಖಿನಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಗಳಿವೆ. ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು ಜಿಲ್ಲೆಗಳು ಸೇರಿದಂತೆ, ಕೊಡಗು, ಸೋಮವಾರ ಪೇಟೆ, ಸಕಲೇಶಪುರ, ಮೂಡಿಗೆರೆ, ಆಗುಂಬೆ, ಶೃಂಗೇರಿ, ತೀರ್ಥಹಳ್ಳಿ, ಕೊಪ್ಪ, ಹೊಸನಗರ, ಸಾಗರ ಸೇರಿದಂತೆ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.

Cyclone Hits Coastal Karnataka; Generating Wind Speeds Of 65 km Per Hour

ಕರಾವಳಿ ಭಾಗದಲ್ಲಿ ನಾಳೆಯಿಂದ ಒಂದು ವಾರಗಳ‌ ಕಾಲ ಮೀನುಗಾರರು ಕಡಲಿಗಿಳಿಯದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಚನೆ ನೀಡಿದೆ. ಅಲ್ಲದೇ ಈಗಾಗಲೇ ಕಡಲಿಗೆ ಮೀನುಗಾರಿಕೆಗೆ ತೆರಳಲಿರುವ ಮೀನುಗಾರರು ದಡವನ್ನು ಸೇರಬೇಕೆಂದು ಜಿಲ್ಲಾಡಳಿತ ಸ್ಪಷ್ಟ ಸೂಚನೆ ಕೊಟ್ಟಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+