DK Shivakumar Chopper: ಧರ್ಮಸ್ಥಳದಲ್ಲಿ ಡಿಕೆಶಿ ಹೆಲಿಕಾಪ್ಟರ್ ತಪಾಸಣೆ ನಡೆಸಿದ ಚುನಾವಣಾ ಅಧಿಕಾರಿಗಳು

ಮಂಗಳೂರು, ಏಪ್ರಿಲ್‌ 22: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭಾನುವಾರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪತ್ನಿ, ಮಗ, ಮಗಳು ಮತ್ತು ಅಳಿಯನ ಜೊತೆ ಭಾನುವಾರ ಧರ್ಮಸ್ಥಳದ ಮಂಜುನಾಥಸ್ವಾಮಿ ದರ್ಶನಕ್ಕಾಗಿ ಧರ್ಮಸ್ಥಳಕ್ಕೆ ಆಗಮಿಸಿದ್ದರು. ಶಿವಕುಮಾರ್ ಪತ್ನಿ ಉಷಾ ,ಮಗ ,ಮಗಳು ಆಳಿಯ ಒಂದು ಹೆಲಿಕಾಪ್ಟರ್‌ನಲ್ಲಿ ಬಂದಿದ್ದರು. ರಾಜ್ಯದಲ್ಲಿ ನೀತಿ ಸಂಹಿತೆ ಜಾರಿ ಇರುವ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಡಿ.ಕೆ. ಶಿವಕುಮಾರ್ ಪತ್ನಿ ಬಂದಿದ್ದ ಹೆಲಿಕಾಪ್ಟರ್‌ನ್ನು ಪರಿಶೀಲನೆ ಮಾಡಲು ಮುಂದಾಗಿದ್ದಾರೆ.

D K Shivakumars chopper checked by ECI In Dharmasthala

ಈ ವೇಳೆ ಚುನಾವಣಾಧಿಕಾರಿಗಳ ಜೊತೆ ಹೆಲಿಕಾಪ್ಟರ್ ಪೈಲಟ್ ವಾಗ್ದಾದ ನಡೆಸಿದ್ದಾರೆ. ಇದು ಖಾಸಗಿ ಹೆಲಿಕಾಪ್ಟರ್ ನಮ್ಮಲ್ಲಿ ಚೆಕ್ ಮಾಡಲು ಅವಕಾಶ ಇಲ್ಲ ಪರಿಶೀಲನೆ ನಡೆಸಬಾರದು ಎಂದು ಹೆಲಿಕಾಪ್ಟರ್ ಪೈಲೆಟ್ ಹೇಳಿದ್ದಾರೆ. ಇದೇ ವಿಚಾರಕ್ಕೆ ಹೆಲಿಕಾಪ್ಟರ್ ಪೈಲೆಟ್ ರಾಮ್ ದಾಸ್ ಮತ್ತು ಚುನಾವಣಾಧಿಕಾರಿಗಳ ನಡುವೆ ಮಾತಿನ ಜಟಾಪಟಿ ನಡೆದಿದೆ.

ಕೊನೆಗೂ ಚುನಾವಣಾ ಮಾರ್ಗಸೂಚಿಯಂತೆ ಚುನಾವಣಾಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ಗೆ ಸೇರಿದ ಹೆಲಿಕಾಪ್ಟರ್ ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕನಕಪುರ ವಿಧಾನಸಭಾ ಕ್ಷೇತ್ರದಿಂದ ಸಲ್ಲಿಸಿರುವ ನಾಮಪತ್ರ ಶುಕ್ರವಾರ ಅಂಗೀಕಾರವಾಗಿತ್ತು. ನಾಮಪತ್ರ ಪುರಸ್ಕೃತಗೊಂಡ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ.

ಶೃಂಗೇರಿಯಲ್ಲಿ ಡಿ.ಕೆ ಶಿವಕುಮಾರ್ ಹಾಗೂ ಕುಟುಂಬಸ್ಥರಿಂದ ಚಂಡಿಕಾ ಯಾಗ

ಸದ್ಯ ದಕ್ಷಿಣ ಕನ್ನಡದ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿರುವ ಡಿ.ಕೆ ಶಿವಕುಮಾರ್ ಬಳಿಕ ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಎರಡು ದಿನ ಶೃಂಗೇರಿಯಲ್ಲಿ ವಾಸ್ತವ್ಯ ಮಾಡಲಿರುವ ಡಿ.ಕೆ ಶಿವಕುಮಾರ್ ಹಾಗೂ ಕುಟುಂಬಸ್ಥರು ಶಾರದಾ ಮಠದ ಯಾಗ ಶಾಲೆಯಲ್ಲಿ ಚಂಡಿಕಾ ಯಾಗ ನಡೆಸಲಿದ್ದಾರೆ.

ಶನಿವಾರ ಸಂಜೆಯೇ ಚಂಡಿಕಾ ಯಾಗದ ಸಂಕಲ್ಪ ಮಾಡಲಿರುವ ಡಿ.ಕೆ ಶಿವಕುಮಾರ್ ಭಾನುವಾರ ಬೆಳಗ್ಗೆ ಶಾರದೆಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಯಾಗದ ಪೂರ್ಣಹುತಿ ನೆರವೇರಿಸಲಿದ್ದಾರೆ. ಚಂಡಿಕಾ ಯಾಗ ಪೂರ್ಣಗೊಂಡ ನಂತರ ಡಿ.ಕೆ ಶಿವಕುಮಾರ್ ಶೃಂಗೇರಿ ಶ್ರೀಗಳ ಆಶೀರ್ವಾದ ಪಡೆದು ಮತ್ತೆ ಬೆಂಗಳೂರಿಗೆ ವಾಪಸ್‌ ಆಗಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+