ಸಲಿಂಗ ಕಾಮ ಆರೋಪ: ಮಂಗಳೂರಿನಲ್ಲಿ ದೈವ ಪಾತ್ರಿ ಮೇಲೆ ಹಲ್ಲೆ!
ಮಂಗಳೂರು, ಮೇ 13:ಸಲಿಂಗ ಕಾಮ ಆರೋಪದ ಮೇಲೆ ದೈವ ಪಾತ್ರಿಯೊಬ್ಬರ ತಲೆ ಬೋಳಿಸಿ ಹಲ್ಲೆ ನಡೆಸಿದ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
ನಗರದ ಬಿಕರ್ನಕಟ್ಟೆ ಎಂಬಲ್ಲಿ ಈ ಘಟನೆ ನಡೆದಿದ್ದು, ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ದೈವಪಾತ್ರಿಯೊಬ್ಬರಿಗೆ ಮಹಿಳೆಯರೂ ಸಹಿತ ಕೂದಲನ್ನು ಬಲವಂತವಾಗಿ ಕತ್ತರಿಸಿ ಹಲ್ಲೆ ನಡೆಸಿರುವುದು ದಾಖಲಾಗಿದೆ.
ಇಲ್ಲಿಯ ಸ್ಥಳೀಯ ದೈವ ಪಾತ್ರಿ ಲೋಕೇಶ್ ಪೂಜಾರಿ ಅವರ ಮೇಲೆ ಈ ಹಲ್ಲೆ ನಡೆಸಲಾಗಿದ್ದು, ದೈವದ ನರ್ತನ ಸೇವೆ ನಡೆದ ಬಳಿಕ ಕೆಲವರು ಸೇರಿ ಈ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಲೋಕೇಶ್ ಅವರಿಗೆ ಸಲಿಂಗಕಾಮದ ಬಗ್ಗೆ ಜನರ ಗುಂಪೊಂದು ಪ್ರಶ್ನಿಸಿದ್ದು, ಕೈಯ್ಯಲ್ಲಿನ ಖಡ್ಗ ತೆಗೆಯುವಂತೆ ಒತ್ತಾಯಿಸಿದ್ದಾರೆ.

ಅಲ್ಲದೇ, ಬಲವಂತವಾಗಿ ಪಾತ್ರಿಯ ತಲೆ ಕೂದಲನ್ನು ಕತ್ತರಿಸಿದ್ದಾರೆ. ಈ ನಡುವೆ ಹಿರಿಯರು ತಡೆಯಲು ಯತ್ನಿಸಿದರೂ ಯುವಕರ ಗುಂಪು ಲೋಕೇಶ್ ಮೇಲೆ ಹಲ್ಲೆ ನಡೆಸಿದೆ.ಈ ಘಟನೆ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಭಾರೀ ಚರ್ಚೆಗೆ ಆರಂಭವಾಗಿದೆ. ಆದರೆ ಈ ಘಟನೆ ಕುರಿತಾಗಲಿ, ಹಲ್ಲೆಯ ಬಗ್ಗೆಯಾಗಲೀ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿಲ್ಲ.

ಲೋಕೇಶ್ ಪೂಜಾರಿ ವೃತ್ತಿಯಲ್ಲಿ ದೈವ ಪಾತ್ರಿಯಾಗಿದ್ದರೂ, ಸಲಿಂಗ ಕಾಮ ನಡೆಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಯುವಕರು ಆಕ್ರೋಶಗೊಂಡು ಈ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ದೈವ ಪಾತ್ರಿಗಳೇ ಇಂಥ ವರ್ತನೆ ತೋರಿದರೆ ಹೇಗೆ? ಎನ್ನುವ ಆಕ್ರೋಶದಿಂದ ಯುವಕರು ಈ ರೀತಿ ಮಾಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications