ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೃಷ್ಟಿಮಾಂಧ್ಯ ಮಕ್ಕಳ ಉಚಿತ ಶಿಕ್ಷಣಕ್ಕೆ ಪ್ರವೇಶಾತಿ ಪ್ರಾರಂಭ

|
Google Oneindia Kannada News

ದಕ್ಷಿಣ ಕನ್ನಡ, ಜುಲೈ 22: ದೃಷ್ಟಿಮಾಂದ್ಯ ಮಕ್ಕಳಲ್ಲಿ ಶಿಕ್ಷಣ ಜ್ಯೋತಿ ಬೆಳಗಿಸುವ ಕಾರ್ಯವನ್ನು ದಕ್ಷಿಣ ಕನ್ನಡ ಜಿಲ್ಲೆಯ ವಸತಿ ಶಾಲೆಯೊಂದು ಕಳೆದ 11 ವರ್ಷಗಳಿಂದ ಮಾಡುತ್ತಾ ಬಂದಿದೆ. ಮಂಗಳೂರಿನ ಸೇವಾ ಭಾರತಿಯ ಅಂಗ ಸಂಸ್ಥೆಯಾಗಿರುವ ರೋಮನ್ ಮತ್ತು ಕ್ಯಾಥರಿನ್ ಲೋಬೊ ದೃಷ್ಟಿಮಾಂದ್ಯ ಮಕ್ಕಳ ವಸತಿಯುತ ಶಾಲೆಯು ಜಿಲ್ಲೆಯ ಏಕಮಾತ್ರ ದೃಷ್ಟಿಮಾಂದ್ಯ ಮಕ್ಕಳ ವಸತಿಯುತ ಶಾಲೆಯಾಗಿದೆ.

ಕಳೆದ 11 ವರ್ಷಗಳಲ್ಲಿ ರೋಮನ್ ಮತ್ತು ಕ್ಯಾಥರಿನ್ ಲೋಬೊ ದೃಷ್ಟಿಮಾಂದ್ಯ ಮಕ್ಕಳ ವಸತಿಯುತ ಶಾಲೆಯಲ್ಲಿ ಈವರೆಗೆ 30ಕ್ಕೂ ಹೆಚ್ಚು ದೃಷ್ಟಿಮಾಂದ್ಯ ಮಕ್ಕಳು ವಿಶೇಷ ವಿದ್ಯಾ ಸಂಸ್ಥೆಯಲ್ಲಿ 10ನೇ ತರಗತಿಯನ್ನು ಪೂರೈಸಿ, ಹೆಚ್ಚಿನ ಶಿಕ್ಷಣವನ್ನು ಮುಂದುವರಿಸಿದ್ದಾರೆ.

ದ್ವಿತೀಯ ಪಿಯುಸಿಯಲ್ಲಿ 600 ಅಂಕಗಳಿಗೆ 600 ಅಂಕ ಗಳಿಸಿದ ಟಾಪ್ ಐದು ಜಿಲ್ಲೆಗಳು ದ್ವಿತೀಯ ಪಿಯುಸಿಯಲ್ಲಿ 600 ಅಂಕಗಳಿಗೆ 600 ಅಂಕ ಗಳಿಸಿದ ಟಾಪ್ ಐದು ಜಿಲ್ಲೆಗಳು

2021-22ರ ಶೈಕ್ಷಣಿಕ ಸಾಲಿನಲ್ಲಿ 5 ರಿಂದ 16 ವರ್ಷದೊಳಗಿನ ದೃಷ್ಟಿಮಾಂದ್ಯ ಮಕ್ಕಳಿಗೆ 1 ರಿಂದ 10ನೇ ತರಗತಿಗಳಿಗೆ ಪ್ರವೇಶಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮಕ್ಕಳು ಅರ್ಜಿ ಸಲ್ಲಿಸುವುದಕ್ಕೆ ಶಾಲಾ ಆಡಳಿತ ಮಂಡಳಿ ಕೋರಿದೆ.

 Dakshin Kannada: Admissions Open For 1 To 10 Class Visual Impairment Students

ದೃಷ್ಟಿಮಾಂದ್ಯ ಮಕ್ಕಳ ವಸತಿಯುತ ಶಾಲೆ ವಿಶೇಷತೆ:

ರೋಮನ್ ಮತ್ತು ಕ್ಯಾಥರಿನ್ ಲೋಬೊ ದೃಷ್ಟಿಮಾಂದ್ಯ ಮಕ್ಕಳ ವಸತಿಯುತ ಶಾಲೆಯಲ್ಲಿ ದೃಷ್ಟಿಮಾಂದ್ಯ ಮಕ್ಕಳಿಗೆ ಇಂಗ್ಲೀಷ್ ಮಾಧ್ಯಮದಲ್ಲಿ ಬೈಲ್ ಲಿಪಿಯೊಂದಿಗೆ ಕರ್ನಾಟಕ ಸರ್ಕಾರದ ಪಠ್ಯಕ್ರಮದಲ್ಲಿ ಶಿಕ್ಷಣ ನೀಡಲಾಗುತ್ತಿದೆ. ಅಲ್ಲದೇ ಕಂಪ್ಯೂಟರ್ ತರಬೇತಿ, ಕರಕುಶಲ ವಸ್ತುಗಳ ತಯಾರಿಕೆ, ಸಂಗೀತ, ದೈನಂದಿನ ಚಟುವಟಿಕೆಗಳ ನಿರ್ವಹಣೆ ಮತ್ತು ಚಲನವಲನ ಕೌಶಲ್ಯಗಳನ್ನು ಕಲಿಸಿಕೊಡಲಾಗುವುದು. ಶಿಕ್ಷಣ, ವಸತಿ, ಊಟೋಪಚಾರಗಳನ್ನೂ ಉಚಿತವಾಗಿ ನೀಡಲಾಗುವುದು. ವಸತಿರಹಿತ ಶಿಕ್ಷಣಕ್ಕೂ ಅವಕಾಶವಿದೆ. ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

English summary
Dakshin Kannada: Admissions Open For 1 To 10 Class Visual Impairment Students. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X