ಮಂಗಳೂರು: ದಲಿತ ಸಮುದಾಯದ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ, ಮೂವರ ಬಂಧನ
ಮಂಗಳೂರು, ಜುಲೈ, 31: ಈಗಾಗಲೇ ಉಡುಪಿ ಕಾಲೇಜು ಪ್ರಕರಣ ರಾಜ್ಯದೆಲ್ಲೆಡೆ ಸದ್ದು ಮಾಡಿದ್ದು, ಈ ಪ್ರಕರಣದ ತನಿಖೆ ಮಾಡಲು ನೂತನ ಪೊಲೀಸ್ ಅಧಿಕಾರಿಯನ್ನು ಸಹ ನೇಮಕ ಮಾಡಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಮಂಗಳೂರಿನಲ್ಲಿ ದಲಿತ ಸಮುದಾಯದ ಅಪ್ರಾಪ್ತೆಯ ಮೇಲೆ ಮೂವರು ಯುವಕರು ಪ್ರತ್ಯೇಕವಾಗಿ ಅತ್ಯಾಚಾರ ಎಸಗಿದ್ದಾರೆ ಎನ್ನುವ ಆತಂಕಕಾಕರಿ ಮಾಹಿತಿಯೊಂದು ಲಭ್ಯವಾಗಿದೆ.
ದಲಿತ ಸಮುದಾಯದ ಅಪ್ರಾಪ್ತ ಬಾಲಕಿ ಮೇಲೆ ಮೂವರು ಯುವಕರು ಅತ್ಯಾಚಾರ ನಡೆಸಿದ್ದಾರೆ ಎನ್ನುವ ಸತ್ಯ ಪ್ರಾಥಮಿಕ ತನಿಖೆಯಿಂದ ಬಯಲಾಗಿದೆ ಎಂದು ತಿಳಿದುಬಂದಿದ್ದು, ಸದ್ಯ ವಿಟ್ಲ ಪೊಲೀಸ್ ಠಾಣೆಯಲ್ಲಿ ಮೂವರು ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

ಇನ್ನು ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದಿದ್ದು, ಬಂಧಿತ ಆರೋಪಿಗಳನ್ನು ಅಕ್ಷಯ್ ದೇವಾಡಿಗ (24), ಕಮಲಾಕ್ಷ ಬೆಳ್ಚಾಡ (30), ಸುಕುಮಾರ ಬೆಳ್ಚಾಡ (28) ಗುರುತಿಸಲಾಗಿದೆ. ಈ ಮೂವರು 2019ರಿಂದ ನಿರಂತರವಾಗಿ ವಿವಿಧೆಡೆ ಅತ್ಯಾಚಾರ ಎಸಗಿದ್ದರು ಎನ್ನುವ ಗಂಭೀರ ಆರೋಪವೂಂದು ಕೇಳಿಬಂದಿದ್ದು, ಇವರ ವಿರುದ್ಧ ಪೋಕ್ಸೋ ಹಾಗೂ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.












Click it and Unblock the Notifications