ದಕ್ಷಿಣ ಕನ್ನಡ; ಬ್ಲ್ಯಾಕ್ ಫಂಗಸ್ ಕೇಸ್ ಏರಿಕೆ, ಒಂದೇ ದಿನ 3 ಸಾವು

ಮಂಗಳೂರು, ಮೇ 28; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದ ನಡುವೆಯೇ ಬ್ಲ್ಯಾಕ್ ಫಂಗಸ್ ಪ್ರಕರಣ ಏರುತ್ತಿದೆ. ಗುರುವಾರ ಒಂದೇ ದಿನ ಸೋಂಕಿಗೆ ಮೂರು ಮಂದಿ ಬಲಿಯಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತಣ್ಣೀರು ಪಂತ ಗ್ರಾಮದ ಅಳಕೆ ನಿವಾಸಿ ನೋಣಯ್ಯ ಪೂಜಾರಿ (55) ಸೇರಿದಂತೆ ದಾವಣಗೆರೆ ಮತ್ತು ಚಿಕ್ಕಮಗಳೂರು ಮೂಲದ ಇಬ್ಬರು ರೋಗಿಗಳು ಬ್ಲ್ಯಾಕ್ ಫಂಗಸ್‌ನಿಂದಾಗಿ ಸಾವನ್ನಪ್ಪಿದ್ದಾರೆ.

ಬೆಳ್ತಂಗಡಿಯ ನೋಣಯ್ಯ ಪೂಜಾರಿ ಕಿಡ್ನಿ ವೈಫಲ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆ ಗೆ ದಾಖಲಾಗಿದ್ದರು. ಆನಂತರ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇದೇ ವೇಳೆ ಬ್ಲ್ಯಾಕ್ ಫಂಗಸ್ ಲಕ್ಷಣ ಕಾಣಿಸಿಕೊಂಡಿದ್ದು, ಕಣ್ಣಿನ ಆಪರೇಷನ್ ಸಹ ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

Dakshina Kannada Black Fungus Case 3 Death In Single Day

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೂ ಒಟ್ಟು 5 ಮಂದಿ ಬ್ಲ್ಯಾಕ್ ಫಂಗಸ್‌ಗೆ ಬಲಿಯಾಗಿದ್ದು, ಜಿಲ್ಲೆಯಲ್ಲಿ ಹೊಸತಾಗಿ ಮತ್ತೆ 5 ಪ್ರಕರಣಗಳು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಸದ್ಯ 25 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದ್ದು,ಈ ವರಗೆ ಜಿಲ್ಲೆಯಲ್ಲಿ 30 ಪ್ರಕರಣಗಳು ಪತ್ತೆಯಾಗಿದೆ.

ಇವುಗಳಲ್ಲಿ 8 ಪ್ರಕರಣಗಳು ದಕ್ಷಿಣ ಕನ್ನಡ ಜಿಲ್ಲೆಗೆ ಸೇರಿದ್ದಾಗಿದ್ದರೆ, 22 ಪ್ರಕರಣಗಳು ಹೊರ ಜಿಲ್ಲೆಗೆ ಸೇರಿದ್ದಾಗಿದೆ. ಬ್ಲ್ಯಾಕ್ ಫಂಗಸ್ ರೋಗಿಗಳಿಗೆ ಮಂಗಳೂರಿನ ಸರ್ಕಾರಿ ವೆನ್ಲಾಕ್ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+