ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಾಮಪತ್ರ ಸಲ್ಲಿಕೆಗೆ ಮುನ್ನ ಗುಡಿ ಗುಂಡಾರ ಸುತ್ತಿದ ದಕ್ಷಿಣ ಕನ್ನಡ ಅಭ್ಯರ್ಥಿಗಳು

|
Google Oneindia Kannada News

ಮಂಗಳೂರು ಏಪ್ರಿಲ್ 23 : ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರದಲ್ಲಿ ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಬಿರುಸುಗೊಂಡಿದೆ. ಜಿಲ್ಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಘಟಾನುಘಟಿ ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಮಂಗಳೂರು ವಿಧಾನ ಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಯು.ಟಿ. ಖಾದರ್ ಮಂಗಳೂರಿನ ತಾಲೂಕು ಕಚೇರಿದಲ್ಲಿ ನಾಮಪತ್ರ ಸಲ್ಲಿಸಲಿಸಿದ್ದಾರೆ. ಅದರಂತೆ ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊಯ್ದೀನ್ ಬಾವ, ಪುತ್ತೂರು ಕ್ಷೇತ್ರ ದಿಂದ ಕಾಂಗ್ರೆಸ್ ಅಭ್ಯರ್ಥಿ ಶಕುಂತಲಾ ಶೆಟ್ಟಿ, ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೊ ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಬಂಟ್ವಾಳದಲ್ಲಿ ರೈ, ಸುಳ್ಯದಿಂದ ಡಾ. ರಘು, ಮುನೀರ್ ನಾಮಪತ್ರ ಸಲ್ಲಿಕೆಬಂಟ್ವಾಳದಲ್ಲಿ ರೈ, ಸುಳ್ಯದಿಂದ ಡಾ. ರಘು, ಮುನೀರ್ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ತಮ್ಮ ಅಪಾರ ಬೆಂಬಲಿಗರೊಂದಿಗೆ ತಾಲೂಕು ಕಚೇರಿಗೆ ಅಗಮಿಸಿದ ಹರೀಶ್ ಪೂಂಜಾ ಚುನಾವಣಾ ಅಧಿಕಾರಿಯವರಿಗೆ ನಾಮಪತ್ರ ಸಲ್ಲಿಸಿದರು. ಮಂಗಳೂರು ಉತ್ತರ ಕ್ಷೆತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ತಮ್ಮ ಸಾವಿರಾರು ಬೆಂಬಲಿಗರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

Dakshina Kannada: Congress, BJP and CPIM candidates files nomination

ಮಂಗಳೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂತೋಷ್ ಕುಮಾರ್ ರೈ ಬೋಳಿಯಾರ್, ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವಾಸ್ ಕಾಮತ್ , ಪುತ್ತೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದೂರು ಇಂದು ತಮ್ಮ ಉಮೇದುವಾರಿಕೆ ಸಲ್ಲಿಸಿದರು.

ಮಂಗಳೂರು ಸಿಪಿಐಎಂ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಸುನೀಲ್ ಕುಮಾರ್ ಬಜಾಲ್ ನೂರಾರು ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿ ಮಂಗಳೂರು ಮಹಾನಗರ ಪಾಲಿಕೆಯ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಕಾಂಗ್ರೆಸ್ ಹಾಗು ಬಿಜೆಪಿ ಅಭ್ಯರ್ಥಿಗಳು ಸರ್ವಧರ್ಮ ದ ಮುಖಂಡರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ದೇವಸ್ಥಾನ, ಚರ್ಚ್, ಮಸೀದಿಗಳಿಗೆ ತೆರಳಿ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದ್ದಾರೆ.

ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್ ಲೋಬೊ , ಬಿಜೆಪಿ ಅಭ್ಯರ್ಥಿ ವೇದವಾವ್ಯಸ ಕಾಮತ್ , ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊಯ್ದೀನ್ ಬಾವಾ ದೇವಾಲಯ, ಮಸೀದಿ, ಚರ್ಚ್ ಗಳಿಗೆ ತೆರಳಿ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಿದರು.

English summary
Karnataka assembly elections 2018: Mangaluru South Congress candidate J R Lobo, Mangaluru North Congress candidate Mohiuddin Bava, Mangaluru constituency congress candidate U T Khadar, BJP Mangaluru South candidate Vedavyas Kamath, Mangaluru North BJP candidate Dr. Bharath Shetty, Mangaluru constituency BJP candidate Santhosh Kumar Booliyar, Belthangady BJP candidate Harish Poonja, Mangaluru South CPIM candidate Santhosh Kumar Bajal filed their nomination today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X