ದಕ್ಷಿಣ ಕನ್ನಡ: ಆಗಸ್ಟ್ 1ರವರೆಗೆ ಸಂಜೆ 6ರರೊಳಗೆ ಅಂಗಡಿ -ಮುಂಗಟ್ಟು ಮುಚ್ಚಲು ಡಿಸಿ ಸೂಚನೆ
ಮಂಗಳೂರು, ಜುಲೈ 29: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ವಾರಗಳಲ್ಲಿ ಮೂರು ಕೊಲೆಗಳು ಸಂಭವಿಸಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸಂಜೆ 6 ಗಂಟೆಯೊಳಗೆ ಮುಚ್ಚುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಎಲ್ಲ ಅಂಗಡಿ ಮುಂಗಟ್ಟುಗಳು ಬೆಳಿಗ್ಗೆ 6 ಗಂಟೆಗೆ ಆರಂಭಿಸಿ ಸಂಜೆ 6 ಗಂಟೆಯೊಳಗೆ ಮುಚ್ಚಬೇಕು. ಆಗಸ್ಟ್ 1 ರವರಗೆ ಈ ಆದೇಶ ಜಾರಿಯಲ್ಲಿರಲಿದ್ದು, ಜನತೆ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಇಲಾಖೆಯೊಂದಿಗೆ ಸಹಕರಿಸಬೇಕು. ಸ್ಥಳೀಯಾಡಳಿತ ಸಂಸ್ಥೆಗಳು ಅಂಗಡಿಗಳ ಮೇಲೆ ನಿಗಾ ಇರಿಸಬೇಕು. ಆಸ್ಪತ್ರೆ, ಮೆಡಿಕಲ್ ಸ್ಟೋರ್ ಸೇರಿದಂತೆ ತುರ್ತು ಸೇವೆಗಳಿಗೆ ಈ ಆದೇಶ ಆನ್ವಯಿಸುವುದಿಲ್ಲ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ನಗರದ ಹೊರ ವಲಯದಲ್ಲಿ ಫಾಜಿಲ್ ಎಂಬ ಯುವಕನ ಹತ್ಯೆ ಮಾಡಿರುವುದರಿಂದ ಮಂಗಳೂರಿನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಶುಕ್ರವಾರ ಸುರತ್ಕಲ್, ಬಜ್ಪೆ, ಮುಲ್ಕಿ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ರಜೆ ಘೋಷಿಸಿದ್ದಾರೆ.












Click it and Unblock the Notifications