ದಕ್ಷಿಣ ಕನ್ನಡ ಡಿಸಿ ವರ್ಗಾವಣೆ; ಕಾಂಗ್ರೆಸ್ ನಾಯಕರು ಗರಂ

ಮಂಗಳೂರು, ಜುಲೈ 29 : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿತ್ತು. ಪ್ರತಿಪಕ್ಷ ಕಾಂಗ್ರೆಸ್ ಇದನ್ನು ಟೀಕಿಸಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

2019ರ ಸೆಪ್ಟೆಂಬರ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂಥ್ ಸೆಂಥಿಲ್ ದಿಢೀರ್ ರಾಜೀನಾಮೆ ನೀಡಿದ್ದರು. ಬಳಿಕ ಜಿಲ್ಲಾಧಿಕಾರಿಯಾಗಿ ಸಿಂಧೂ ಬಿ. ರೂಪೇಶ್ ಜಿಲ್ಲೆಗೆ ಆಗಮಿಸಿದ್ದರು. ಮಂಗಳವಾರ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ.

ಸಾಮಾಜಿಕ ಜಾಲತಾಣದಲ್ಲಿ ಸಿಂಧೂ ಬಿ. ರೂಪೇಶ್ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿತ್ತು. ಈ ಘಟನೆ ಬೆಳಕಿಗೆ ಬಂದ ಒಂದೇ ದಿನದಲ್ಲಿ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಕಾಂಗ್ರೆಸ್ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಚಿವ ಯು. ಟಿ. ಖಾದರ್ ಸಿಂಧೂ ಬಿ. ರೂಪೇಶ್ ವರ್ಗಾವಣೆ ಖಂಡಿಸಿ ಟ್ವೀಟ್ ಮಾಡಿದ್ದಾರೆ. ಸರ್ಕಾರಕ್ಕೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.

ಸಿದ್ದರಾಮಯ್ಯ ಟ್ವೀಟ್

ಕೊರೊನಾ ವಾರಿಯರ್ಸ್‌ಗಳನ್ನು ಗೌರವಿಸುವುದು ಹಿಗೆಯೇ? ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಯಡಿಯೂರಪ್ಪ ಪ್ರಶ್ನಿಸಿದ್ದಾರೆ. ಸಿಂಧೂ ಬಿ. ರೂಪೇಶ್ ವರ್ಗಾವಣೆ ಖಂಡಿಸಿದ್ದಾರೆ.

ಯು. ಟಿ. ಖಾದರ್ ಟ್ವೀಟ್

ಯು. ಟಿ. ಖಾದರ್ ಟ್ವೀಟ್

ಮಾಜಿ ಸಚಿವ ಯು. ಟಿ. ಖಾದರ್ ಟ್ವೀಟ್ ಮಾಡಿದ್ದು, "ಕಾನೂನು ಕೈಗೆತ್ತಿಕೊಂಡರೆ, ನೈತಿಕ‌ ಪೋಲಿಸ್ ಗಿರಿ ಮಾಡಿದ್ರೆ ಕ್ರಮ ಕೈಗೊಳ್ಳತ್ತೇನೆ ಎಂದಿದ್ದಕ್ಕೆ ದುಷ್ಕರ್ಮಿಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ರವರಿಗೆ ಕೊಲೆ ಬೆದರಿಕೆ ಹಾಕಿದರು. ಸರ್ಕಾರ ಕೊಲೆ ಬೆದರಿಕೆ‌ ಹಾಕಿದವರಿಗೆ ಶಿಕ್ಷೆ ನೀಡುವ ಬದಲು ಜಿಲ್ಲಾಧಿಕಾರಿಗಳಿಗೆ ಶಿಕ್ಷೆ ನೀಡಿದೆ" ಎಂದು ಆರೋಪಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರು

"ನಿಮ್ಮ "ಕಾಲ" ಗುಣ ಬಂದ ಒಂದೇ ವರ್ಷದಲ್ಲಿ ಇಬ್ಬರು ಜಿಲ್ಲಾಧಿಕಾರಿಗಳು ಅಪಮಾನಕ್ಕೀಡಾಗಿ ವಾಪಸ್ ಹೋಗಿದ್ದಾರೆ" ಎಂದು ಯು. ಟಿ. ಖಾದರ್ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಓರ್ವ ಆರೋಪಿ ವಶಕ್ಕೆ

ಓರ್ವ ಆರೋಪಿ ವಶಕ್ಕೆ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತವಾಗಿ ಮೂಡುಬಿದಿರೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+