ಅನಗತ್ಯ ಬಳಕೆಗೆ ಕಡಿವಾಣ: ದಕ್ಷಿಣ ಕನ್ನಡದಲ್ಲಿ ನೀರಿನ ಸಂರಕ್ಷಣೆಗೆ ಜಿಲ್ಲಾಧಿಕಾರಿಗಳ ಖಡಕ್ ಎಚ್ಚರಿಕೆ
ಮಂಗಳೂರು, ಮೇ 05: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮ ವಹಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಲಾಲ್‌ಬಾಗ್‌ನಲ್ಲಿರುವ ಮಂಗಳೂರು ಮಹಾನಗರಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನೀರಿನ ಅನಗತ್ಯ ಬಳಕೆಗೆ ಕಡಿವಾಣ ಹಾಕುವುದು ಅನಿವಾರ್ಯವಾಗಿದೆ. ಹಾಗಾಗಿ ನೀರನ್ನು ಯಾರೂ ಅನಗತ್ಯವಾಗಿ ಪೋಲು ಮಾಡುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಮತ್ತು ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದರು.

ಮಳೆಯ ಕೊರತೆ, ತಾಪಮಾನ ಹೆಚ್ಚಳದಿಂದಾಗಿ ನೀರಿನ ಸಮಸ್ಯೆ ಪ್ರಾರಂಭವಾಗುತ್ತಿದೆ. ಸಾರ್ವಜನಿಕರು ಅನಗತ್ಯವಾಗಿ ನೀರು ಪೋಲು ಮಾಡದೇ ಸದ್ಭಳಕೆ ಮಾಡಬೇಕು. ನೀರಿನ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಈಗಾಗಲೇ ನೀರಿನ ಸಮಸ್ಯೆ ಪರಿಹರಿಸಲು ಕಂಟ್ರೋಲ್ ರೂಮ್‌ಗಳನ್ನು ತೆರೆಯಲಾಗಿದೆ. ನೀರಿನ ರೇಷನಿಂಗ್ ಮಾಡಲು ಸೂಕ್ತ ವೇಳಾಪಟ್ಟಿಯನ್ನು ತಯಾರಿಸಿ ಸಮರ್ಪಕವಾಗಿ ಎಲ್ಲಾ ಕಡೆ ನೀರು ಪೂರೈಕೆಯಾಗುವಂತೆ ನಿಗಾವಹಿಸಬೇಕು ಎಂದು ಜಿಲ್ಲಾಧಿಕಾರಿ ಮಹಾನಗರ ಪಾಲಿಕೆಯ ಆಯುಕ್ತರಿಗೆ ಸೂಚಿಸಿದರು.
ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರ್ ಹಾಗೂ ಕಾರ್ಯನಿರ್ವಹಕ ಅಧಿಕಾರಿಗಳು ತಾಲೂಕು ಮಟ್ಟದಲ್ಲಿ ಕಂಟ್ರೋಲ್ ರೂಮ್ ಸ್ಥಾಪಿಸಿ ನೀರಿನ ಸಮಸ್ಯೆಗಳ ಬಗ್ಗೆ ಕ್ರಮಕೈಗೊಳ್ಳಬೇಕು. ಡ್ಯಾಮ್‌ಗಳನ್ನು ಹೊರತುಪಡಿಸಿ ನೀರಿನ ಪರ್ಯಾಯ ಮೂಲಗಳನ್ನು ಖುದ್ದಾಗಿ ಭೇಟಿ ನೀಡಿ ಅದರ ಬಗ್ಗೆ ಪಟ್ಟಿ ತಯಾರಿಸಬೇಕು ಎಂದರು.
ನೀರಿನ ಸಮಸ್ಯೆ ಎದುರಾಗಿರುವ ಸೋಮೇಶ್ವರ ಹಾಗೂ ಕೋಟೆಕಾರು ಪ್ರದೇಶಗಳಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಆಗುತ್ತಿದೆ. ಆ ಬಗ್ಗೆಯೂ ಗಮನಹರಿಸಬೇಕು. ಮಳೆಗಾಲದವರೆಗೆ ಯಾವುದೇ ರೀತಿಯ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮವಹಿಸಬೇಕು ಎಂದರು.
ಅಗ್ನಿಶಾಮಕ ದಳ, ಅರಣ್ಯ ಇಲಾಖೆ, ಮೆಸ್ಕಾಂ, ಆರೋಗ್ಯ ಇಲಾಖೆಗಳೂ ನಿರ್ವಹಿಸಬೇಕಾದ ಕರ್ತವ್ಯಗಳ ಬಗ್ಗೆ ತಯಾರಾಗಿರಬೇಕು. ಮಳೆಗಾಲ ಆಗಮಿಸುವ ಮೊದಲೇ ಯಾವೆಲ್ಲಾ ಪ್ರದೇಶಗಳಲ್ಲಿ ಭೂಕುಸಿತ, ಪ್ರವಾಹ ಹಾಗೂ ಸಂಪರ್ಕಕ್ಕೆ ಸಿಗದೆ ಇರುವ ಪ್ರದೇಶಗಳ ಬಗ್ಗೆ ಮಾಹಿತಿ ಕಲೆ ಹಾಕಬೇಕು ಹಾಗೂ ಯಾವುದೇ ರೀತಿಯ ಹಾನಿ ಉಂಟಾಗ ದಂತೆ ಎಲ್ಲಾ ರೀತಿಯ ರಕ್ಷಣಾ ವ್ಯವಸ್ಥೆಗಳನ್ನು ಮಾಡಿಕೊಂಡಿರಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಪ್ರವಾಹ ಸಂಭವಿಸುವಂತಹ ಪ್ರದೇಶದಲ್ಲಿ ಜನರನ್ನು ಒಂದು ಕಡೆಯಿಂದ ಇನ್ನೊಂದು ಕಡೆಗೆ ಸಾಗಿಸಲು ಬೇಕಾದಂತಹ ಬೋಟ್ ವ್ಯವಸ್ಥೆ ಹಾಗೂ ನಿರಾಶ್ರಿತರು ಉಳಿದುಕೊಳ್ಳುವಂತಹ ಶಿಬಿರಗಳಲ್ಲಿ ಯಾವುದೇ ರೀತಿಯ ಮೂಲಭೂತ ಸೌಲಭ್ಯಗಳ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದರು.
ರಸ್ತೆ ಕಡಿತಗೊಂಡು ಸಂಪರ್ಕಕ್ಕೆ ಸಿಗದ ಪ್ರದೇಶದಲ್ಲಿ ಗರ್ಭಿಣಿಯರು ಮತ್ತು ವಯಸ್ಸಾದವರ ಪಟ್ಟಿಯನ್ನು ಸಿದ್ಧಪಡಿಸಲು ಅಧಿಕಾರಿಗಳಿಗೆ ತಿಳಿಸಿದ ಡಿಸಿ ಅರ್ಹರಿಗೆ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವ ವ್ಯವಸ್ಥೆ ಮಾಡಬೇಕು. ನೆಟ್‌ವರ್ಕಗಳು ಸಿಗದಂತಹ ಪ್ರದೇಶದಲ್ಲಿ ಜನರಿಂದ ಮಾಹಿತಿ ಪಡೆಯಲು ಮತ್ತು ಅವರಿಗೆ ಸೂಕ್ತ ಮಾಹಿತಿಯನ್ನು ನೀಡಲು ಪರ್ಯಾಯ ವ್ಯವಸ್ಥೆಗೆ ಕ್ರಮವಹಿಸಲು ಅಧಿಕಾರಿಗಳಿಗೆ ಡಿಸಿ ಸೂಚಿಸಿದರು.
ಸಭೆಯಲ್ಲಿ ಮಹಾನಗರ ಪಾಲಿಕೆಯ ಆಯುಕ್ತ ಆನಂದ್ ಸಿ.ಎಲ್, ಪೊಲೀಸ್ ವರಿಷ್ಟಾಧಿಕಾರಿ ರಿಷ್ಯಂತ್ ಸಿಬಿ, ಪುತ್ತೂರು ಉಪ ವಿಭಾಗಾಧಿಕಾರಿ ಜುಬಿನ್ ಮೋಹಾಪಾತ್ರ ಉಪಸ್ಥಿತರಿದ್ದರು.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications