ದ. ಕನ್ನಡ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಿಗೆ ಬಿಡುಗಡೆಯಾದ ಅನುದಾನವೆಷ್ಟು?
ಮಂಗಳೂರು, ಏಪ್ರಿಲ್ 10: ವಿಧಾನಸಭೆ ಚುನಾವಣೆ ಮತ್ತೆ ಸಮೀಪಿಸಿದೆ. ಮೇ 12ರಂದು ಪ್ರತಿಯೊಬ್ಬ ಪ್ರಜೆಯೂ ತಮ್ಮ ಮತದಾನದ ಹಕ್ಕು ಚಲಾಯಿಸುವ, ಆ ಮೂಲಕ ತಮ್ಮನಾಳುವವರನ್ನು ಆಯ್ಕೆ ಮಾಡುವ ಕಾಲ ಕೂಡಿ ಬಂದಿದೆ.
ಈ ಸಂದರ್ಭದಲ್ಲಿ ಕಳೆದ 5 ವರ್ಷಗಳಲ್ಲಿ ನಿಮ್ಮ ನಿಮ್ಮ ಕ್ಷೇತ್ರದಲ್ಲಿ ಹಾಲಿ ಶಾಸಕರು ಮಾಡಿದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುವ ಸಮಯವಿದು. ಈ ಹಿನ್ನಲೆಯಲ್ಲಿ 'ಒನ್ಇಂಡಿಯಾ ಕನ್ನಡ' ಆರ್.ಟಿ.ಐ ಮೂಲಕ ಅರ್ಜಿ ಸಲ್ಲಿಸಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಕಳೆದ 5 ವರ್ಷಗಳಲ್ಲಿ ಬಿಡುಗಡೆಯಾದ ಹಣದ ಮಾಹಿತಿ ಪಡೆದುಕೊಂಡಿದೆ.
2013-14ರಲ್ಲಿ ಪ್ರತೀ ಕ್ಷೇತ್ರಗಳಿಗೆ ತಲಾ 196.4 ಕೋಟಿ ಹಣ ಬಿಡುಗಡೆಯಾಗಿದ್ದರೆ, 2014-15, 15-16, 16-17 ಮತ್ತು 17-18ರಲ್ಲಿ ತಲಾ 200 ಕೋಟಿ ರೂಪಾಯಿ ಹಣ ಬಿಡುಗಡೆಯಾಗಿದೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
ಇದರಲ್ಲಿ ವಿಶೇಷವಾಗಿ 2014-15ರಲ್ಲಿ ಬೆಳ್ತಂಗಡಿ ಶಾಸಕರು ಕೇವಲ 200 ರಲ್ಲಿ 175.08 ಕೋಟಿ ರೂಪಾಯಿ ಹಣ ಬಳಸಿದ್ದಾರೆ. ಇನ್ನು ಜೆ.ಆರ್.ಲೋಬೋ 2015-16ರಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕೇವಲ 177.86 ಕೋಟಿ ಹಣವನ್ನು ಮಾತ್ರ ಖರ್ಚು ಮಾಡಿದ್ದಾರೆ.

ಅಂದಹಾಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಬಿಜೆಪಿಯ ಎಸ್. ಅಂಗಾರ ಶಾಸಕರಾಗಿದ್ದಾರೆ. ಉಳಿದ ಎಲ್ಲಾ ಕಡೆಗಳಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. ಬೆಳ್ತಂಗಡಿ ಕ್ಷೇತ್ರವನ್ನು ವಸಂತ ಬಂಗೇರ ಪ್ರತಿನಿಧಿಸುತ್ತಿದ್ದರೆ, ಪುತ್ತೂರನ್ನು ಶಕುಂತಳಾ ಶೆಟ್ಟಿ, ಮೂಡಬಿದಿರೆಯನ್ನು ಅಭಯಚಂದ್ರ ಜೈನ್, ಮಂಗಳೂರು ದಕ್ಷಿಣವನ್ನು ಜೆ.ಆರ್.ಲೋಬೋ, ಮಂಗಳೂರು ಉತ್ತರವನ್ನು ಮೊಯ್ದಿನ್ ಬಾವಾ, ಬಂಟ್ವಾಳವನ್ನು ರಮಾನಾಥ ರೈ ಮತ್ತು ಮಂಗಳೂರು ಕ್ಷೇತ್ರವನ್ನು ಯುಟಿ ಖಾದರ್ ಪ್ರತಿನಿಧಿಸುತ್ತಿದ್ದಾರೆ.
ಆರ್.ಟಿ.ಐ ಮೂಲಕ ಪಡೆದುಕೊಂಡ ಮಾಹಿತಿಯ ಇನ್ನಿತರ ಸಂಪೂರ್ಣ ವಿವರಗಳು ಈ ಚಿತ್ರದಲ್ಲಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications