ಸುಬ್ರಹ್ಮಣ್ಯ ಸ್ವಾಮಿ ಬಿಜೆಪಿಯ ಸಾಕು ನಾಯಿ: ಐವನ್ ಡಿಸೋಜಾ

ಮಂಗಳೂರು,ಡಿಸೆಂಬರ್.19: ನ್ಯಾಶನಲ್ ಹೆರಾಲ್ಡ್ ಪತ್ರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಕಾಂಗ್ರೆಸ್ ತನ್ನ ವಾಗ್ದಾಳಿ ಮುಂದುವರಿಸಿದೆ. ಬಿಜೆಪಿ ನಾಯಕ ಸುಬ್ರಹ್ಮಣ್ಯ ಸ್ವಾಮಿ ಬಿಜೆಪಿಯ ಸಾಕು ನಾಯಿ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಟೀಕೆ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಪಕ್ಷ ಮಾಡಿರುವ ಸುಳ್ಳು ಆರೋಪ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯು ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಮಾತನಾಡಿದರು.[ನ್ಯಾಷನಲ್ ಹೆರಾಲ್ಡ್ ಪ್ರಕರಣ: ರಾಹುಲ್ VS ಅರುಣ್ ಜೇಟ್ಲಿ]

Dakshina Kannada district congress committee takes protest against of BJP in Mangaluru

ವಿಪಕ್ಷಗಳ ದ್ವೇಷದ ರಾಜಕಾರಣಕ್ಕೆ ನಾವು ಹೆದರುವುದಿಲ್ಲ. ನ್ಯಾಯಾಂಗ ವ್ಯವಸ್ಥೆಯಲ್ಲಿ ನಮಗೆ ನಂಬಿಕೆ ಇದೆ. ಸತ್ಯಕ್ಕಾಗಿ ನಾವು ಹೋರಾಟ ನಡೆಸುತ್ತಿದ್ದೇವೆ ಎಂದು ಎಮ್.ಎಲ್.ಸಿ. ಐವನ್ ಡಿಸೋಜಾ ಬಿಜೆಪಿ ಪಕ್ಷದ ಮೇಲೆ ಕಿಡಿಕಾರಿದ್ದಾರೆ.

ಈ ದೇಶದಲ್ಲಿ ಬ್ರಿಟಿಷರ ಆಡಳಿತ ಕೊನೆಗೊಳಿಸಲು ಕಾಂಗ್ರೆಸ್ ನಾಯಕರು ಸೇರಿದಂತೆ ಪ್ರತಿಯೊಬ್ಬರು ದೇಶಕ್ಕಾಗಿ ಹೋರಾಡಿದ್ದಾರೆ. ಈ ಸಂದರ್ಭದಲ್ಲಿ ದೇಶಕ್ಕಾಗಿ ಹುಟ್ಟಿಕೊಂಡ ಪತ್ರಿಕೆಯೇ ನ್ಯಾಶನಲ್ ಹೆರಾಲ್ಡ್ .

ದೇಶದಲ್ಲಿ ಜನರ ತೊಂದರೆಯನ್ನು ಸಮಾಜದ ಮುಂದೆ ಇಡಲು ಒಂದು ಮುಖವಾಣಿಯಾಗಿ ಬಂದ ನ್ಯಾಶನಲ್ ಹೆರಾಲ್ಡ್ ಪತ್ರಿಕೆ ಮೂಲಕ ರಾಜಕೀಯದಲ್ಲಿ ದ್ವೇಷವನ್ನು ಸೃಷ್ಟಿಸಿ, ಕಾಂಗ್ರೆಸ್ ಪಕ್ಷದ ಧ್ವನಿ ಅಡಗಿಸುವ ಪ್ರಯತ್ನ ನಡೆಸುತ್ತಿದೆ ಎಂದು ಆರೋಪಿಸಿದರು.

ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನ ಪಿ.ವಿ. ಮೋಹನ್, ಇಬ್ರಾಹಿಂ ಕೋಡಿಜಾಲ್, ಮಮತಾ ಗಟ್ಟಿ, ವಿಶ್ವಾಸ್ ದಾಸ್ ಸೇರಿದಂತೆ ಮತ್ತಿತರ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+