ದಕ್ಷಿಣ ಕನ್ನಡದ ಈ ಸರಕಾರಿ ಶಾಲೆ ಪ್ರವೇಶಕ್ಕೆ ಸಾಲು ನಿಲ್ಲುವ ಪೋಷಕರು
ಮಂಗಳೂರು, ಜುಲೈ 12 : ಖಾಸಗಿ ಶಾಲೆಗಳ ಭರಾಟೆ ಮಧ್ಯೆ ಸರಕಾರಿ ಕನ್ನಡ ಶಾಲೆಗಳಿಗೆ ಮಕ್ಕಳನ್ನು ಸೇರಿಸಲು ಹಿಂದೇಟು ಹಾಕುವ ಪೋಷಕರೇ ಹೆಚ್ಚು. ಸಾಲ- ಸೋಲ ಮಾಡಿಯಾದರೂ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುತ್ತಾರೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಕುಗ್ರಾಮದಲ್ಲಿರುವ ಸರಕಾರಿ ಶಾಲೆಗೆ ಮಕ್ಕಳನ್ನು ಕಳುಹಿಸಲು ಪೋಷಕರು ಸಾಲುಗಟ್ಟೆ ನಿಲ್ಲುತ್ತಾರೆ.
ಪ್ರತಿ ವರ್ಷವೂ ಈ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಏರುತ್ತಿದ್ದು, ಶಿಸ್ತಿನ ಕಾರಣಕ್ಕಾಗಿ ಇಲ್ಲಿಯ ಶಿಕ್ಷಕರೂ ಸಮವಸ್ತ್ರ ಧರಿಸುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಅಲಂಕಾರಿನಲ್ಲಿ ಈ ಅಪರೂಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೆ. ಶತಮಾನೋತ್ಸವದ ಹೊಸ್ತಿಲಲ್ಲಿರುವ ಈ ಶಾಲೆ ಸಂಪೂರ್ಣ ಭಿನ್ನ. ಅಲಂಕಾರಿನ ಈ ಶಾಲೆಗೆ ಮಕ್ಕಳನ್ನು ಸೇರಿಸಲು ಸುತ್ತಮುತ್ತಲ ಪ್ರದೇಶದ ಜನ ಸಾಲಲ್ಲಿ ನಿಲ್ಲುತ್ತಾರೆ.

ಪ್ರತಿ ವರ್ಷಕ್ಕೆ 30 ರಿಂದ 40 ಮಕ್ಕಳು ಇಲ್ಲಿ ಹೊಸದಾಗಿ ಸೇರ್ಪಡೆಗೊಳ್ಳುತ್ತಾರೆ. ಈ ಶಾಲೆಯಲ್ಲಿ ಕನ್ನಡದ ಜೊತೆಗೆ ಇಂಗ್ಲಿಷ್ ಕಲಿಸುವುದಕ್ಕೆ ಒತ್ತು ನೀಡಲಾಗುತ್ತಿದೆ. ಈ ಶಾಲೆ ಯಾವ ಖಾಸಗಿ ಇಂಗ್ಲಿಷ್ ಮೀಡಿಯಂ ಶಾಲೆಗೂ ಕಮ್ಮಿ ಇಲ್ಲದಂತೆ ಶಿಕ್ಷಣ ನೀಡುತ್ತಿದೆ. ಯೂನಿಸೆಫ್ ಅನುದಾನದಡಿಯಲ್ಲಿ ಈ ಶಾಲೆಗೆ ಸುಮಾರು 1.50 ಲಕ್ಷ ರುಪಾಯಿಗಳ ತಾಂತ್ರಿಕ ಸಲಕರಣೆಗಳೂ ಪೂರೈಕೆಯಾಗಿದೆ.
ಶಿಕ್ಷಣದ ಜೊತೆಗೆ ಮಕ್ಕಳ ಬುದ್ಧಿಮತ್ತೆಯನ್ನು ಹೆಚ್ಚಿಸುವ ಕಾರ್ಯದಲ್ಲೂ ಈ ಶಾಲೆ ಶಿಕ್ಷಕರು ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಮಕ್ಕಳಲ್ಲಿ ಶಿಸ್ತು ಹಾಗೂ ಸಮಾನತೆಯನ್ನು ತರುವ ಉದ್ದೇಶಕ್ಕಾಗಿ ಮಕ್ಕಳ ಜೊತೆಗೆ ಇಲ್ಲಿನ ಶಿಕ್ಷಕರೂ ವಾರಕ್ಕೆ ಮೂರು ರೀತಿ ಸಮವಸ್ತ್ರವನ್ನು ಧರಿಸುತ್ತಾರೆ.

ಕುಗ್ರಾಮವಾದ ಅಲಂಕಾರಿನಲ್ಲಿರುವ ಈ ಶಾಲೆ ಊರಿನ ಯಶಸ್ಸಿನ ಕಿರೀಟದಂತೆಯೂ ಇದೆ. ಈ ಶಾಲೆಯಲ್ಲಿ ಕಲಿತ ನೂರಾರು ವಿದ್ಯಾರ್ಥಿಗಳು ಇಂದು ಸಮಾಜದ ಉತ್ತಮ ಪ್ರಜೆಗಳಾಗಿ, ವಿವಿಧ ಸ್ತರಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications