ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.77.25 ದಾಖಲೆ ಮತದಾನ

|
Google Oneindia Kannada News

ಮಂಗಳೂರು, ಏಪ್ರಿಲ್ 19:ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 8 ವಿಧಾನಸಭಾ ಕ್ಷೇತ್ರದಲ್ಲಿ ಶಾಂತಿಯುತವಾಗಿ ಮತದಾನ ಅಂತ್ಯಗೊಂಡಿದೆ. ಕೆಲವೆಡೆ ಇವಿಎಂಗಳಲ್ಲಿ ದೋಷ, ಸಣ್ಣ ಪುಟ್ಟ ಮಾತಿನ ಚಕಮಕಿ, ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಘರ್ಷಣೆ, ವಿವಿ ಪ್ಯಾಟ್ ಗಳಲ್ಲಿ ಪ್ರಿಂಟರ್ ಸಮಸ್ಯೆ ಹೊರತುಪಡಿಸಿದರೆ ಶಾಂತಿಯುತವಾಗಿ ಮತದಾನ ಅಂತ್ಯ ಗೊಂಡಿದೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಗುರುವಾರ (ಏ.18)ಮುಂಜಾನೆಯಿಂದಲೇ ಬಿರುಸಿನ ಮತದಾನ ನಡೆದಿದ್ದು, ಅತಿ ಹೆಚ್ಚು ಮತದಾನ ದಾಖಲಾಗಿದೆ.ಪ್ರಸಕ್ತ ಸಾಲಿನ ಲೋಕಸಭಾ ಚುನಾವಣೆಯಲ್ಲಿ ಶೇ.77.78 ಮತದಾನವಾಗುವ ಮೂಲಕ ಕಳೆದ ಸಾಲಿನ ದಾಖಲೆಯನ್ನು ಮುರಿದಿದೆ.

 ಶಿವಮೊಗ್ಗದಲ್ಲಿ ಪಕ್ಷೇತರ ಅಭ್ಯರ್ಥಿ ಯೂಸೂಫ್ ಖಾನ್ ನಾಪತ್ತೆ? ಶಿವಮೊಗ್ಗದಲ್ಲಿ ಪಕ್ಷೇತರ ಅಭ್ಯರ್ಥಿ ಯೂಸೂಫ್ ಖಾನ್ ನಾಪತ್ತೆ?

ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಬೆಳ್ತಂಗಡಿಯಲ್ಲಿ ಶೇ.80.92, ಮೂಡಬಿದ್ರೆ ಶೇ.76.06, ಬಂಟ್ವಾಳ ಶೇ. 80.31, ಪುತ್ತೂರು ಶೇ.82.30 ಸುಳ್ಯ ಶೇ.84.16, ಮಂಗಳೂರು ಉತ್ತರ ( ಸುರತ್ಕಲ್) ಶೇ.74.83, ಮಂಗಳೂರು ದಕ್ಷಿಣ ಶೇ. 69.15 ಹಾಗೂ ಮಂಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ ಶೇ.75.64 ಮತದಾನ ದಾಖಲಾಗಿದೆ.

Dakshina Kannada district polling percentage was 77.25.

ಮತದಾನದಿಂದ ವಂಚಿತರಾದ ಕುವೈತ್ ನಲ್ಲಿರುವ ಮೋದಿ ಅಭಿಮಾನಿಗಳುಮತದಾನದಿಂದ ವಂಚಿತರಾದ ಕುವೈತ್ ನಲ್ಲಿರುವ ಮೋದಿ ಅಭಿಮಾನಿಗಳು

2014ರ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಶೇ 76.67 ಮತದಾನ ದಾಖಲಾಗಿತ್ತು. ಆದರೆ ಈ ಬಾರಿ ಅದಕ್ಕಿಂತ ಹೆಚ್ಚು ಅಂದರೆ ಶೇ 77.78 ಮತದಾನ ವಾಗಿದೆ. ಅದೇ 2009ರ ಲೋಕಸಭಾ ಚುನಾವಣೆಯಲ್ಲಿ ಶೇ. 74.46 ಮತದಾನವಾಗಿತ್ತು.

English summary
Lok Sabha Election 2019:In Dakshina Kannada district, the polling percentage was 77.25.This time more voting than last time.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X