Get Updates
Get notified of breaking news, exclusive insights, and must-see stories!

ಬಿಜೆಪಿ ಚಕ್ರವ್ಯೂಹ ಭೇದಿಸಿದ ಕೈ ಕಲಿಗಳು: ದಕ್ಷಿಣ ಕನ್ನಡದಲ್ಲಿ ಗೆದ್ದವರ್ಯಾರು? ಸೋತವರ್ಯಾರು?

ದಕ್ಷಿಣ ಕನ್ನಡ, ಮೇ 13: ಸಾಮಾನ್ಯವಾಗಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಬಿಜೆಪಿ ಭದ್ರಕೋಟೆ. ಯಾವುದೇ ಚುನಾವಣೆ ಬಂದರೂ ಇಲ್ಲಿ ಕೇಸರಿ ಕಲಿಗಳದ್ದೇ ಅಬ್ಬರ. ಮಂಗಳೂರು ವಿಧಾನಸಭಾ ಕ್ಷೇತ್ರ ಹೊರತು ಪಡಿಸಿ ಕಳೆದ ಚುನಾವಣೆಯಲ್ಲಿ ಉಳಿದೆಲ್ಲಾ ಕ್ಷೇತ್ರಗಳು ಬಿಜೆಪಿ ಪಾಲಾಗಿದ್ದವು. ಆದರೆ ಈ ಬಾರಿ ಕಾಂಗ್ರೆಸ್‌ ಅಭ್ಯರ್ಥಿ ಬಲಿಷ್ಠವಾದ ಬಿಜೆಪಿಯ ಚಕ್ರವ್ಯೂಹ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಫಲಿತಾಂಶ ಹೊರಬಿದ್ದಿದ್ದು, ದಕ್ಷಿಣ ಕನ್ನಡದ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಆರು ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದೆ.

Dakshina Kannada Election Results 2023

ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕ ಯು.ಟಿ ಖಾದರ್‌ 22,790 ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಸತೀಶ್‌ ಕುಂಪಳ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಯು.ಟಿ ಖಾದರ್‌ 83,219 ಮತಗಳನ್ನು ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಸತೀಶ್‌ ಕುಂಪಳ 60,429 ಮತಗಳನ್ನು ಪಡೆದಿದ್ದಾರೆ.

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್ 23,962 ಮತಗಳ ಅಂತರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಜೆ.ಆರ್‌ ಲೋಬೋ ವಿರುದ್ಧ ಗೆಲುವು ಸಾಧಿಸಿದ್ದಾರೆ, ವೇದವ್ಯಾಸ್ ಕಾಮತ್ 91,437 ಮತಗಳನ್ನು ಪಡೆದಿದ್ದು, ಜೆ.ಆರ್‌ ಲೋಬೋ 67,475 ಮತಗಳನ್ನು ಪಡೆದಿದ್ದಾರೆ.

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ವೈ ಭರತ್‌ ಶೆಟ್ಟಿ 32,922 ಮತಗಳ ಅಂತರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಇನಾಯತ್‌ ಅಲಿ ವಿರುದ್ಧ ಗೆಲುವು ಸಾಧಿಸಿದ್ದಾರೆ, ಡಾ.ವೈ ಭರತ್‌ ಶೆಟ್ಟಿ 1,03,531 ಮತಗಳನ್ನು ಪಡೆದಿದ್ದು, ಇನಾಯತ್‌ ಅಲಿ 70,609 ಮತಗಳನ್ನು ಪಡೆದಿದ್ದಾರೆ.

ಮೂಡುಬಿದರೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮಾನಾಥ್‌ ಕೋಟ್ಯನ್‌ 22,468 ಮತಗಳ ಅಂತರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮಿಥುನ್‌ ರೈ ವಿರುದ್ಧ ಗೆಲುವು ಸಾಧಿಸಿದ್ದಾರೆ, ಉಮಾನಾಥ್‌ ಕೋಟ್ಯನ್‌ 86,925 ಮತಗಳನ್ನು ಪಡೆದಿದ್ದು, ಮಿಥುನ್‌ ರೈ 64,457 ಮತಗಳನ್ನು ಪಡೆದಿದ್ದಾರೆ.

ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್‌ ನಾಯ್ಕ್‌ 8,295 ಮತಗಳ ಅಂತರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ರಮಾನಾಥ್‌ ರೈ ವಿರುದ್ಧ ಗೆಲುವು ಸಾಧಿಸಿದ್ದಾರೆ, ರಾಜೇಶ್‌ ನಾಯ್ಕ್‌ 93,342 ಮತಗಳನ್ನು ಪಡೆದಿದ್ದು, ರಮಾನಾಥ್‌ ರೈ 85,047 ಮತಗಳನ್ನು ಪಡೆದಿದ್ದಾರೆ.

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ 30,954 ಮತಗಳ ಅಂತರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕೃಷ್ಣಪ್ಪ ರಾಮಕುಂಜ ವಿರುದ್ಧ ಗೆಲುವು ಸಾಧಿಸಿದ್ದಾರೆ, ಭಾಗೀರಥಿ ಮುರುಳ್ಯ 93,991 ಮತಗಳನ್ನು ಪಡೆದಿದ್ದು, ಕೃಷ್ಣಪ್ಪ ರಾಮಕುಂಜ 63,037 ಮತಗಳನ್ನು ಪಡೆದಿದ್ದಾರೆ.

ಬೆಳ್ತಂಡಗಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್‌ ಪೂಂಜಾ 18,226 ಮತಗಳ ಅಂತರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ರಕ್ಷಿತ್‌ ಶಿವರಾಮ್‌ ವಿರುದ್ಧ ಗೆಲುವು ಸಾಧಿಸಿದ್ದಾರೆ, ಹರೀಶ್‌ ಪೂಂಜಾ 1,01,004 ಮತಗಳನ್ನು ಪಡೆದಿದ್ದು, ರಕ್ಷಿತ್‌ ಶಿವರಾಮ್‌ 82,778 ಮತಗಳನ್ನು ಪಡೆದಿದ್ದಾರೆ.

ಇನ್ನು ತೀವ್ರ ಕುತೂಹಲ ಮೂಡಿಸಿದ್ದ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ಕುಮಾರ್‌ ರೈ ಗೆಲುವು ಸಾಧಿಸಿದ್ದಾರೆ. ಇಬ್ಬರ ಜಗಳ ಮೂರನೇಯವನಿಗೆ ಲಾಭ ಎನ್ನುವಂತಹ ಪ್ರಸಂಗ ಪುತ್ತೂರಿನಲ್ಲಿ ನಡೆದಿದೆ. ಹಿಂದೂತ್ವದ ಪ್ರಯೋಗ ಶಾಲೆ ಪುತ್ತೂರಿನಲ್ಲಿ ಹಿಂದೂ ಮುಖಂಡ ಹಾಗೂ ಬಿಜೆಪಿ ನಡುವೆ ಪೈಪೋಟಿ ನಡೆದಿದ್ದು, ಇವರಿಬ್ಬರ ಜಗಳದಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿ ಅಶೋಕ್‌ ಕುಮಾರ್‌ 66,607 ಮತಗಳನ್ನು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ 37,558 ಮತಗಳನ್ನು ಪಡೆದಿದ್ದಾರೆ, ಇನ್ನು ಹಿಂದೂ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ 62,458 ಮತಗಳನ್ನು ಪಡೆದಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+