Lok Sabha Election 2024: ಕರಾವಳಿಯಲ್ಲಿ ಅರಳಿದ ಕಮಲ: ಬಿಜೆಪಿ ಭದ್ರಕೋಟೆ ಸೇಫ್
ಮಂಗಳೂರು ಜೂನ್ 4: ಬಿಜೆಪಿಯ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಬರೋಬ್ಬರಿ ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಕರಾವಳಿಯಲ್ಲಿ ಗೆಲುವಿನ ನಾಗಾಲೋಟವನ್ನು ಮುಂದುವರಿಸಿದ್ದು, ಚುನಾವಣಾ ಆಯೋಗದಿಂದ ಅಧೀಕೃತ ಘೋಷಣೆ ಬಾಕಿ ಇದೆ.
ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 7,12,794 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ 5,70,092 ಮತಗಳನ್ನು ಪಡೆದಿದ್ದಾರೆ. ಈ ಲೋಕಸಭೆ ಕ್ಷೇತ್ರದಲ್ಲಿ 2019ರ ಲೋಕಸಭೆ ಚುನಾವಣೆಗೆ ಹೋಲಿಕೆ ಮಾಡಿದರೆ 2024ರ ಚುನಾವಣೆಯಲ್ಲಿ 66,440 ರಷ್ಟು ಮತಗಳು ಹೆಚ್ಚಾಗಿವೆ. ಕ್ಷೇತ್ರದಲ್ಲಿ 2019ರಲ್ಲಿ 13,43,213 ಮತಗಳು ಚಲಾವಣೆಯಾಗಿದ್ದರೆ, ಈ ಬಾರಿ 14,09,653 ಮತಗಳು ಚಲಾವಣೆಯಾಗಿವೆ.

1951 ರಿಂದ 2019 ರವರೆಗೆ ಒಟ್ಟು 16 ಚುನಾವಣೆಗಳು ಈ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿಯವರೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಎಂಟು ಬಾರಿ ಬಿಜೆಪಿ ಅಭ್ಯರ್ಥಿ ಗೆಲುವನ್ನು ಸಾಧಿಸಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಒಂಬತ್ತು ಬಾರಿ ಈ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ 2009, 2014, 2019 ಲೋಕಸಭಾ ಚುನಾವಣೆಯಲ್ಲಿ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಸತತ ಮೂರು ಬಾರಿ ಗೆಲುವು ಸಾಧಿಸಿದ್ದರು.












Click it and Unblock the Notifications