Dakshina Kannada Lok Sabha Election 2024 Results LIVE: ಕರಾವಳಿಯಲ್ಲಿ ಅರಳಿದ ಕಮಲ: ಬಿಜೆಪಿ ಅಭ್ಯರ್ಥಿಗೆ ಭರ್ಜರಿ ಗೆಲುವು
ಮಂಗಳೂರು, ಜೂನ್ 04: ದಕ್ಷಿಣ ಕನ್ನಡ ಬಿಜೆಪಿಯ ಭದ್ರಕೋಟೆ. ಪ್ರಧಾನಿ ನರೇಂದ್ರ ಮೋದಿ ಅಲೆ, ಹಿಂದುತ್ವದಿಂದ ಕಡಲನಗರಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಕೆಲವೊಂದಿಷ್ಟು ವರ್ಷಗಳಿಂದ ಬಿಜೆಪಿ ಮುಷ್ಟಿಯಲ್ಲಿದೆ. ಆದರೆ ಈ ಬಾರಿಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿ ನಡುವೆ ಜಿದ್ದಾಜಿದ್ದಿಯ ಫೈಟ್ ಇದ್ದು, ಗೆಲುವು ಯಾರ ಪಾಲು ಎನ್ನುವುದು ಇನ್ನೇನು ಕೆಲವೇ ಗಂಟೆಗಳಲ್ಲಿ ತಿಳಿದು ಬರಲಿದೆ.
ಬಿಜೆಪಿಯಿಂದ ಯುವ ಮತ್ತು ಹೊಸ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರಿಗೆ ಬಿಜೆಪಿಯಿಂದ ಟಿಕೆಟ್ ನೀಡಲಾಯಿತು. ಕಾಂಗ್ರೆಸ್‌ನಿಂದಲೂ ಯುವ ಅಭ್ಯರ್ಥಿ ಪದ್ಮರಾಜ್ ಪೂಜಾರಿಗೆ ಮಣೆಹಾಕಲಾಯಿತು. ಕಡಲ ನಗರಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು ಹೊಸ ಲೆಕ್ಕಚಾರ ಆರಂಭ ಮಾಡಿದೆ. ಆದರೆ ಈ ಮಧ್ಯೆ ಮತದಾರರ ಲೆಕ್ಕಾಚಾರವೇ ಬೇರೆ ಇದ್ದು, ಯಾರ ಲೆಕ್ಕಾ ಪಕ್ಕಾ ಆಗಲಿದೆ ಎಂದು ಕಾದು ನೋಡಬೇಕಿದೆ.

ಕಡಲ ನಗರಿ ದಕ್ಷಿಣ ಕನ್ನಡದಲ್ಲಿ ಗೆಲುವಿನ ಲೆಕ್ಕಚಾರ ಜೋರಾಗಿದೆ. 1951 ರಿಂದ 2019 ರವರೆಗೆ ಒಟ್ಟು 16 ಚುನಾವಣೆಗಳು ಈ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿಯವರೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಎಂಟು ಬಾರಿ ಬಿಜೆಪಿ ಅಭ್ಯರ್ಥಿ ಗೆಲುವನ್ನು ಸಾಧಿಸಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಒಂಬತ್ತು ಬಾರಿ ಈ ಕ್ಷೇತ್ರದಿಂದ ಗೆಲುವನ್ನು ಸಾಧಿಸಿದ್ದಾರೆ. ಈ ಬಾರಿಯ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ ಒನ್ ಇಂಡಿಯಾ ಕನ್ನಡದ ಈ ಪುಟವನ್ನು ಫಾಲೋ ಮಾಡಿ. ಮತ ಏಣಿಕೆ ಆರಂಭದಿಂದ ಅಭ್ಯರ್ಥಿ ಘೋಷಣೆವರೆಗಿನ ಸಂಪೂರ್ಣ ಮಾಹಿತಿ ಈ ಪುಟದಲ್ಲಿ ಲಭ್ಯವಿರಲಿದೆ.
ಕ್ಷಣ ಕ್ಷಣದ ಮಾಹಿತಿ
ಬಿಜೆಪಿಯ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಬರೋಬ್ಬರಿ ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
*ಸಮಯ 11:40: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ 8ನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 3,15,243 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.ಪೂಜಾರಿ 2,41,017 ಮತಗಳನ್ನು ಹಾಗೂ ನೋಟಾ 10,162 ಮತಗಳು ಬಂದಿದೆ.
*ಸಮಯ 10: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಸತತ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ 89,739 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ 73,318 ಮತಗಳನ್ನು ಪಡೆದಿದ್ದಾರೆ.
*ಸಮಯ 9:20: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಇವಿಎಂ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಮುನ್ನಡೆ ಸಾಧಿಸಿದ್ದಾರೆ. ಮೊದಲ ಸುತ್ತಿನ ಮತ ಎಣಿಕೆ ಪ್ರಕ್ರಿಯೆಯಲ್ಲಿ ಬ್ರಿಜೇಶ್ ಚೌಟ 9,000 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
*ಸಮಯ 8:30: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕೆ ಆರಂಭಗೊಂಡಿದೆ. ಸದ್ಯ ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅಂಚೆ ಮತಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
*ಸಮಯ 8:00: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆ ಆರಂಭವಾಗಿದೆ. ಸ್ಟ್ರಾಂಗ್ ರೂಂ ಅನ್ನು ಭಾರೀ ಭದ್ರತೆಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ಸಮ್ಮುಖದಲ್ಲಿ ತೆರೆಯಲಾಗಿದ್ದು, ಮೊದಲು ಅಂಚೆ ಮತ ಎಣಿಕೆ ನಡೆಯಲಿದೆ.
* ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ 2019ಕ್ಕೆ ಹೋಲಿಸಿದರೆ 2024ರ ಚುನಾವಣೆಯಲ್ಲಿ 66,440 ಮತಗಳ ಹೆಚ್ಚಳವಾಗಿದೆ. ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ 13,43,213 ಮತಗಳು ಚಲಾವಣೆಯಾಗಿದ್ದು, ಈ ಬಾರಿ 14,09,653ಕ್ಕೆ ಏರಿಕೆಯಾಗಿದೆ.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications