ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜೆಡಿಎಸ್ ಸಹಕಾರದೊಂದಿಗೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ:ಐವನ್ ಡಿಸೋಜಾ

|
Google Oneindia Kannada News

ಮಂಗಳೂರು, ಮಾರ್ಚ್ 26:ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಯೋಜನೆ ರೂಪಿಸಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಯನ್ನು ಪ್ರಮುಖವಾಗಿಸಿಕೊಂಡು ಜೆಡಿಎಸ್ ಸಹಕಾರದೊಂದಿಗೆ ಪ್ರತ್ಯೇಕ ಪ್ರಣಾಳಿಕೆಯನ್ನು ಸಿದ್ದಪಡಿಸಲಾಗಿದ್ದು, ಇನ್ನೆರಡು ದಿನಗಳಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ದೇವಸ್ಥಾನ, ಚರ್ಚ್, ಮಸೀದಿಗೆ ಭೇಟಿ ನೀಡಿದ ಮಿಥುನ್ ರೈನಾಮಪತ್ರ ಸಲ್ಲಿಕೆಗೂ ಮುನ್ನ ದೇವಸ್ಥಾನ, ಚರ್ಚ್, ಮಸೀದಿಗೆ ಭೇಟಿ ನೀಡಿದ ಮಿಥುನ್ ರೈ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಿಥುನ್ ರೈ ಕಣಕ್ಕಿಳಿದ ಬಳಿಕ ಕ್ಷೇತ್ರದಲ್ಲಿ ಹೊಸ ಅಲೆ ಸೃಷ್ಟಿಯಾಗಿದೆ.ಇದೇ ಅಲೆಯನ್ನು ಕೊನೆ ತನಕ ಕೊಂಡೊಯ್ದು ಮತಗಳನ್ನಾಗಿ ಪರಿವರ್ತಿಸಲು ಪ್ರಯತ್ನ ನಡೆಸುತ್ತಿದ್ದೇವೆ ಎಂದರು.

Dakshina Kannada MP seat vacant for 10 year:Ivan Dsouza

ಸಂಸದ ನಳಿನ್ ಕುಮಾರ್ ಕಟೀಲು ನಿಷ್ಕ್ರೀಯರಾಗಿದ್ದರೂ ಚೌಕಿದಾರ್ ಪೇಟ ಹಾಕಿ ಸುತ್ತುತ್ತಿದ್ದಾರೆ. ಕ್ಷೇತ್ರದಲ್ಲಿ 10 ವರ್ಷ ಸಂಸದರೇ ಇಲ್ಲದ ಪರಿಸ್ಥಿತಿ ಇತ್ತು. ಈ ಚುನಾವಣೆಯಲ್ಲಿ ನಿಷ್ಕ್ರೀಯ ಸಂಸದರನ್ನು ಮನೆಗೆ ಕಳುಹಿಸಿ ಕಾಂಗ್ರೆಸ್ ನ ಮಿಥುನ್ ರೈ ಅವರನ್ನು ಚುನಾಯಿಸಲು ಜನರು ನಿರ್ಧರಿಸಿದ್ದಾರೆ.

 ರಫೇಲ್ ಹಗರಣದ ಮಾಹಿತಿ ಕೈಪಿಡಿ ಮನೆ ಮನೆಗೆ ತಲುಪಿಸಲು ಕಾಂಗ್ರೆಸ್ ತಯಾರಿ ರಫೇಲ್ ಹಗರಣದ ಮಾಹಿತಿ ಕೈಪಿಡಿ ಮನೆ ಮನೆಗೆ ತಲುಪಿಸಲು ಕಾಂಗ್ರೆಸ್ ತಯಾರಿ

ಕಾಂಗ್ರೆಸ್ ಗೆದ್ದು, ಕೇಂದ್ರದಲ್ಲಿ ಸರಕಾರ ರಚಿಸಿದರೆ ಮಂಗಳೂರು ರೈಲ್ವೆ ವಲಯ ರಚನೆ, ಬಂದರು ಅಭಿವೃದ್ಧಿ, ವಿಮಾನ ನಿಲ್ದಾಣದ ಖಾಸಗೀಕರಣ ಹಿಂಪಡೆದು, ಸಂಪೂರ್ಣ ಅಭಿವೃದ್ಧಿ, ಮಂಗಳೂರಿನಲ್ಲಿ ಐಐಟಿ ಸ್ಥಾಪನೆ, ವಿಜಯ ಬ್ಯಾಂಕ್ ವಿಲೀನ್ ಪ್ರಕ್ರಿಯೆ ಹಿಂಪಡೆಯುವುದು ಸೇರಿದಂತೆ ಹಲವಾರು ಯೋಜನೆ ರೂಪಿಸಿ ಅನುಷ್ಠಾನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.

English summary
Addressing Press meet in Mangaluru MLC Ivan Dsouza slammed MP Nalin Kumar Kateel.He said Dakshina Kannada MP seat vacant for 10 year.Congress will fill that seat in next upcoming election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X