ಮಂಗಳೂರಿನಲ್ಲಿ ದಲೈಲಾಮಗೆ ಭವ್ಯ ಸ್ವಾಗತ

ಮಂಗಳೂರು, ಆಗಸ್ಟ್ 29: ಟಿಬೆಟಿಯನ್ ಆಧ್ಯಾತ್ಮ ಧರ್ಮ ಗುರು ದಲೈಲಾಮ ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಮಂಗಳೂರು ಉಪವಿಭಾಗಾಧಿಕಾರಿ ರವಿಚಂದ್ರ ನಾಯ್ಕ, ಉಪ ಪೊಲೀಸ್ ಆಯುಕ್ತರಾದ ಅರುಣಾಂಶು ಗಿರಿ, ಲಕ್ಷ್ಮೀ ಗಣೇಶ್ ಅವರು ಜಿಲ್ಲಾಡಳಿತದ ಪರವಾಗಿ ಅವರನ್ನು ಸ್ವಾಗತಿಸಿದರು.

ವಿಮಾನ ನಿಲ್ದಾಣದ ಹೊರಗೆ ಟಿಬೇಟಿಯನ್ ಸಾಂಪ್ರದಾಯಿಕ ನೃತ್ಯದ ಮೂಲಕ ಅವರನ್ನು ಸ್ವಾಗತಿಸಲಾಯಿತು‌. ದಲೈಲಾಮ ಆಗಮನದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ನಗರದ ಖಾಸಗಿ ಹೋಟೆಲ್ ನಲ್ಲಿ ತಂಗಿರುವ ಅವರನ್ನು ಭಾರೀ ಭದ್ರತೆಯಲ್ಲಿ ಝೀರೋ ಟ್ರಾಫಿಕ್ ನಲ್ಲಿ ವಿಮಾನ ನಿಲ್ದಾಣದಿಂದ ನಗರಕ್ಕೆ ಕರೆ ತರಲಾಯಿತು‌.

Dalailama Arrived To Mangaluru

ಮೂರು ದಿನಗಳ ಕಾಲ ಮಂಗಳೂರು ನಗರದಲ್ಲಿ ತಂಗಲಿರುವ ದಲೈಲಾಮ ಅವರು ನಾಳೆ ಆಗಸ್ಟ್ 30ರಂದು ನಗರದ ಫಾದರ್ ಮುಲ್ಲರ್ ಸಭಾಂಗಣದಲ್ಲಿ ನಡೆಯುವ ನಯನ ಅಖಿಲ ಭಾರತ ಕ್ಯಾಥೊಲಿಕ್ ಶಾಲಾ ಒಕ್ಕೂಟದ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಆಗಸ್ಟ್ 31ರಂದು ಅವರು ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+