ಗೌರಿ ಲಂಕೇಶ್ ಹತ್ಯೆ ಖಂಡಿಸಿ ರಾಜ್ಯದಾದ್ಯಂತ ಸೆಪ್ಟೆಂಬರ್ 12ರಂದು ಪ್ರತಿಭಟನೆ
ಮಂಗಳೂರು, ಸೆಪ್ಟೆಂಬರ್ 8: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯನ್ನು ಖಂಡಿಸಿ ರಾಜ್ಯದಾದ್ಯಂತ ಹಲವು ಸಂಘಟನೆಗಳು ಹೋರಾಟ ನಡೆಸುತ್ತಿವೆ. ಈ ಹೋರಾಟಕ್ಕೆ ಇನ್ನಷ್ಟು ಬಲ ನೀಡುವ ನಿಟ್ಟಿನಲ್ಲಿ ದಲಿತ- ದಮನಿತ ಸ್ವಾಭಿಮಾನ ಹೋರಾಟ ಸಮಿತಿ ಕೂಡಾ ರಾಜ್ಯದಾದ್ಯಂತ ಸೆ. 12ರಂದು ಪ್ರತಿಭಟನೆ ನಡೆಸುವುದಾಗಿ ಘೋಷಿಸಿದೆ.
ಗೌರಿ ಲಂಕೇಶ್ ಅವರನ್ನು ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿರುವುದನ್ನು ಖಂಡಿಸಿರುವ ದಲಿತ-ದಮನಿತ ಸ್ವಾಭಿಮಾನ ಹೋರಾಟ ಸಮಿತಿ, ಹತ್ಯೆಗೈದ ದುಷ್ಕರ್ಮಿಗಳನ್ನು ಶೀಘ್ರ ಪತ್ತೆ ಹಚ್ಚುವಂತೆ ಸರಕಾರಕ್ಕೆ ಅಗ್ರಹಿಸಿದೆ.

ಮಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಪಿಯುಸಿಎಲ್ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಪಿ.ಬಿ. ಡೇಸಾ ಪ್ರಗತಿಪರ, "ನೂತನ ಕ್ರಾಂತಿಗೆ ನಾಂದಿ ಹಾಡಿದವರು ಗೌರಿ ಲಂಕೇಶ್. ಅವರ ಕೊಲೆ ಪ್ರಕರಣದಲ್ಲಿ ಸಂಘ ಪರಿವಾರದವರು ತಮ್ಮ ಕೈವಾಡವಿಲ್ಲವೆಂದು ನಾಟಕವಾಡುತ್ತಿದ್ದಾರೆ," ಎಂದು ಆರೋಪಿಸಿದರು.
"ಆದರೆ, ಯಾರ ಕೈವಾಡವಿದೆಯೆಂದು ಇಡೀ ದೇಶಕ್ಕೆ ತಿಳಿದಿದೆ. ಕೊಲೆ ನಡೆದು ಎರಡು ದಿನಗಳಾದರೂ, ಆರೋಪಿಗಳ ಪತ್ತೆಯಾಗಿಲ್ಲ. ರಾಜ್ಯದಲ್ಲಿ ತುರ್ತು ಪರಿಸ್ಥಿತಿಗಿಂತ ಕೆಟ್ಟದಾದ ಅಘೋಷಿತ ತುರ್ತು ಪರಿಸ್ಥಿತಿಯಲ್ಲಿದ್ದೇವೆ. ಡಾ. ಪ್ರಭಾಕರ್ ಭಟ್ ಕಲ್ಲಡ್ಕ, ವಿ.ಎಚ್.ಪಿ ಮುಖಂಡ ಜಗದೀಶ್ ಶೇಣವರನ್ನು ಯಾವಾಗಲೋ ಬಂಧಿಸಬೇಕಿತ್ತು. ಆದರೆ ರಾಜಕೀಯ ನಾಯಕರು ಬಾಯಲ್ಲಿ ಹೇಳುವುದು ಮಾತ್ರ. ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಪೊಲೀಸ್ ಇಲಾಖೆ ಕೇಸರೀಕರಣವಾಗಿದೆ. ಆದರೆ ನಾವು ಗೌರಿ ಲಂಕೇಶ್ ಗೋಸ್ಕರ ಸಾಯಲು ತಯಾರಿದ್ದೇವೆ. ನಮಗೆ ಕಾಂಗ್ರೆಸ್, ಬಿಜೆಪಿಯಂತೆ ಎರಡು ನಾಲಗೆಯಿಲ್ಲ," ಎಂದು ಸರಕಾರದ ವಿರುದ್ಧ ಹರಿಹಾಯ್ದರು.
ಈ ಸಂದರ್ಭದಲ್ಲಿ ಮಾತನಾಡಿದ ದಲಿತ-ದಮನಿತ ಸ್ವಾಭಿಮಾನ ಹೋರಾಟ ಸಮಿತಿ ಮುಖಂಡ ರಘುವೀರ್ ಸೂಟರ್ ಪೇಟೆ, "ಪ್ರಗತಿಪರ ಚಳುವಳಿಯಲ್ಲಿ ತೊಡಗಿಸಿಕೊಂಡು, ಸೈದ್ಧಾಂತಿಕ ತಳಹದಿಯ ಮೇಲೆ ತನ್ನ ಬರಹ ಮತ್ತು ಸಾಹಿತ್ಯದ ಮೂಲಕ ಚಳುವಳಿಯನ್ನು ಕಟ್ಟಿದವರು ಗೌರಿ ಲಂಕೇಶ್. ಆದರೆ, ಅವರ ಸೈದ್ಧಾಂತಿಕ ವಿಚಾರಧಾರೆಗಳ ಬಗ್ಗೆ ಸಹಿಸದ ಶಕ್ತಿಗಳು ಸೈದ್ಧಾಂತಿಕ ಸಂಘರ್ಷಕ್ಕೆ ಮುಂದಾಗದೆ ಪೈಶಾಚಿಕವಾಗಿ ಹತ್ಯೆ ಮಾಡಿರುವುದು ತಮ್ಮ ಫ್ಯಾಸಿಸ್ಟ್ ಕ್ರೌರ್ಯವನ್ನು ಎತ್ತಿ ತೋರಿಸಿದೆ," ಎಂದು ಆರೋಪಿಸಿದರು.
"ಒಂದು ಗೌರಿ ಲಂಕೇಶ್ ಹತ್ಯೆಯಾದರೂ, ಅವರು ಪ್ರತಿಪಾದಿಸಿದ ಸಿದ್ಧಾಂತ, ವಿಚಾರಧಾರೆಗಳು ಯಾವತ್ತೂ ಸಾಯುವುದಿಲ್ಲ. ಸರಕಾರ ಈ ಹತ್ಯೆಯ ದುಷ್ಕರ್ಮಿಗಳನ್ನು ಪತ್ತೆ ಹಚ್ಚಲು ತನಿಖೆಯನ್ನು ಇನ್ನಷ್ಟು ತೀವ್ರಗೊಳಿಸಿ ವಿಶೇಷ ಪ್ರಯತ್ನ ನಡೆಸಬೇಕೆಂದು ಹೋರಾಟ ಸಮಿತಿ ಒತ್ತಾಯಿಸುತ್ತದೆ," ಎಂದು ಹೇಳಿದರು.
ಒಂದೆಡೆ ಗೌರಿ ಲಂಕೇಶ್ ಹತ್ಯೆಯಾದರೆ, ಮತ್ತೊಂದೆಡೆ ಉಡುಪಿ ಚಲೋ ನಡೆಸಿದ ದಲಿತ-ದಮನಿತ ಸ್ವಾಭಿಮಾನ ಹೋರಾಟ ಸಮಿತಿಯ ರಾಜ್ಯ ಸಂಚಾಲಕ ಭಾಸ್ಕರ್ ಪ್ರಸಾದ್ ರಿಗೂ ದುಷ್ಕರ್ಮಿಗಳು ಜೀವ ಬೆದರಿಕೆ ಒಡ್ಡಿದ್ದಾರೆ. ಪ್ರಗತಿಪರ ಚಳುವಳಿಯಲ್ಲಿ ತೊಡಗುವ ನಾಯಕರು ದಾಳಿಗೆ ಗುರಿಯಾಗುತ್ತಿರುವುದು ಆತಂಕಕಾರಿ ಬೆಳವಣಿಯಾಗಿದ್ದು, ಸಾಮಾಜಿಕ ಕಾರ್ಯಕರ್ತರಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ದಲಿತ ದಮನಿತ ಸ್ವಾಭಿಮಾನ ಹೋರಾಟ ಸಮಿತಿ ಇದೇ ಸಂದರ್ಭದಲ್ಲಿ ಒತ್ತಾಯಿಸಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications