ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಕ್ಷಿಣ ಕನ್ನಡದಲ್ಲಿ 11 ಮಂದಿ ದಲಿತರು ಬೌದ್ಧ ಧರ್ಮಕ್ಕೆ ಮತಾಂತರ

|
Google Oneindia Kannada News

ಮಂಗಳೂರು, ಮಾರ್ಚ್ 15: ದಲಿತ ಸಮುದಾಯಕ್ಕೆ ಸೇರಿದ 11 ಮಂದಿ ಬೌದ್ಧ ಮತಕ್ಕೆ ಮತಾಂತರಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಆಲಂಕಾರಿನಲ್ಲಿ ನಡೆದಿದೆ. ಆಲಂಕಾರು ತೋಟಂತಿಲ ಎಂಬಲ್ಲಿ ಪುಟ್ಟಣ್ಣ ಎಂಬವರ ಗೃಹಪ್ರವೇಶ ಸಂದರ್ಭ 11 ಮಂದಿಗೆ ಬೌದ್ಧ ಧರ್ಮ ದೀಕ್ಷೆ ನೀಡಿರುವುದು ತಡವಾಗಿ ಬೆಳಕಿಗೆ ಬಂದಿದೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ದಕ್ಷಿಣ ಕನ್ನಡ ಜಿಲ್ಲಾ ಬೌದ್ಧ ಮಹಾಸಭಾದ ಭಂತೇಜಿ, ಮೈಸೂರು ಕೊಳ್ಳೇಗಾಲದ ಜೇತವನ ಬುದ್ಧ ವಿಹಾರದ ಸುಗತಪಾಲ ಭಂತೇಜಿಯವರು ಬೌದ್ಧ ಶಾಸನದ ಪ್ರಕಾರ ಬುದ್ಧ ಪೂಜೆ ನೆರವೇರಿಸಿ, 11 ಮಂದಿಗೆ ಧಮ್ಮೋಪದೇಶ ನೀಡಿದ್ದಾರೆ.

Dalits converts to Buddhism in Kadaba, Dakshina Kannada

ದಲಿತ ಸಂಘರ್ಷ ಸಮಿತಿ ಮುಖಂಡ ಆನಂದ ಮಿತ್ತಬೈಲ್ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಸ್ಥಳೀಯ ನಿವಾಸಿಗಳಾದ ಪುಟ್ಟಣ್ಣ, ಸುಶೀಲ, ನಯನ್ ಕುಮಾರ್, ನಮಿತಾ, ಸತೀಶ ಕುಮಾರ್, ಪ್ರೇಮ, ಹರ್ಷ, ಸುಶೀಲಾ, ಮನೋಜ್ ಕುಮಾರ್, ವಿಶ್ವನಾಥ್ ಹಾಗೂ ಗಣೇಶ್ ಎಂಬವರು ಹಿಂದು ಧರ್ಮದಿಂದ ಬೌದ್ಧ ಮತಕ್ಕೆ ಮತಾಂತರಗೊಂಡಿದ್ದಾರೆ.

Dalits converts to Buddhism in Kadaba, Dakshina Kannada

ಹಿಂದೂ ಧರ್ಮದಿಂದ ದಲಿತರು ಬೌದ್ಧರಾಗಿ ಪರಿವರ್ತನೆ ಹೊಂದಿರುವುದರ ಕುರಿತು ಚರ್ಚೆ ಆರಂಭವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಮತಾಂತರ ಕುರಿತು ಪರ ವಿರೋಧದ ಬಿಸಿಬಿಸಿ ಚರ್ಚೆ ಆರಂಭವಾಗಿದೆ.

English summary
Eleven person from dalit family converted to Buddhism in Alangaru of Kadaba taluk in Dakshina Kannada district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X