ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಕ್ಷಿಣ ಕನ್ನಡ, ಕೊಡಗಿನ ಶಾಲೆ-ಕಾಲೇಜುಗಳಿಗೆ ಬದಲಾದ ದಸರಾ ರಜೆ

|
Google Oneindia Kannada News

ಮಂಗಳೂರು, ಸೆಪ್ಟೆಂಬರ್ 20: ದಕ್ಷಿಣ ಕನ್ನಡ ಹಾಗು ಕೊಡಗು ಜಿಲ್ಲೆಯಲ್ಲಿ ಈ ಮೊದಲು ನಿಗದಿಯಾಗಿದ್ದ ದಸರಾ ರಜೆಯನ್ನು ಮಾರ್ಪಾಡುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಶೈಕ್ಷಣಿಕ ವರ್ಷದ ವೇಳಾಪಟ್ಟಿಯಂತೆ ದಸರಾ ರಜೆ ಅಕ್ಟೋಬರ್ 11 ರಿಂದ ಪ್ರಾರಂಭವಾಗಿ ಅಕ್ಟೋಬರ್ 25 ಕ್ಕೆ ಕೊನೆಗೊಳ್ಳುತ್ತಿತ್ತು. ಆದರೆ ಈ ಬಾರಿ ದಸರಾ ಉತ್ಸವ ಸೆಪ್ಟೆಂಬರ್ 21 ರಿಂದ ಆರಂಭವಾಗಿ ಸೆಪ್ಟೆಂಬರ್ 30ರವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ರಜೆಯ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ.

Dasara Holidays from Sept 21 to Oct 5 in DK and Kodagu : Ramanath Rai

ಇದೀಗ ಅಕ್ಟೋಬರ್ ಬದಲು ಸೆಪ್ಟೆಂಬರ್ 21 ರಿಂದ ದಸರಾ ರಜೆ ಘೋಷಣೆ ಮಾಡಲಾಗಿದೆ . ಹೊಸ ವೇಳಾಪಟ್ಟಿಯಂತೆ ಸೆಪ್ಟೆಂಬರ್ 21 ರಿಂದ ಅಕ್ಟೋಬರ್ 5 ರವರೆಗೆ ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ದಸರಾ ರಜೆ ಘೋಷಿಸಲಾಗಿದೆ .

ಅಕ್ಟೋಬರ್ ತಿಂಗಳಲ್ಲಿ ದಸರಾ ರಜೆ ನೀಡಿದರೆ ದಸರಾ ರಜೆಯ ಉದ್ದೇಶ ಈಡೇರುವುದಿಲ್ಲ. ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಲ್ಲಿ ದಸರಾ ಉತ್ಸವಕ್ಕೆ ಅನುಕೂಲವಾಗುವಂತೆ ಮೈಸೂರು ಮಾದರಿಯಲ್ಲಿ ದಸರಾ ರಜೆ ಬದಲಾವಣೆ ಮಾಡಬೇಕು ಎಂದು ಸಾರ್ವಜನಿಕರು, ಜಿಲ್ಲಾಡಳಿತ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ ಅವರು ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ ದಸರಾ ರಜೆ ಮಾರ್ಪಾಡುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ ತಿಳಿಸಿದ್ದಾರೆ.

English summary
The state government has issued an order to announce Dasara Holidays to schools and colleges from September 21 to October 5 in Dakshina Kannada and Kodagu districts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X