ಪುಂಜಾಲಕಟ್ಟೆಯಲ್ಲಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಣೆ
ಮಂಗಳೂರು ಆಗಸ್ಟ್ 10 : ಜಾನುವಾರುಗಳನ್ನು ಕಳ್ಳತನ ಮಾಡಿ, ಹಿಂಸಾತ್ಮಕ ರೀತಿಯಲ್ಲಿ ಕಸಾಯಿಖಾನೆಗೆ ಸಾಗಾಟ ಮಾಡುತ್ತಿರುವವರನ್ನು ಬೆನ್ನಟ್ಟಿ ಗೋವುಗಳನ್ನು ರಕ್ಷಿಸಿದ ಘಟನೆ ಪುಂಜಾಲಕಟ್ಟೆಯ ಸೊಣಂದೂರು ಅಡ್ತಿಳ ಎಂಬಲ್ಲಿ ನಡೆದಿದೆ.
ಮಂಗಳೂರು ಜಿಲ್ಲಾ ಡಿಸಿಐಬಿ ಪೊಲೀಸರ ತಂಡ ಈ ಸಾಹಸ ಮೆರೆದಿದೆ. ಈ ಸಂದರ್ಭದಲ್ಲಿ ವಾಹನವನ್ನು ಆರೋಪಿಗಳು ಸ್ಥಳದಲ್ಲಿಯೇ ಬಿಟ್ಟು ಸಾಗಾಟದ ಸಮಯದಲ್ಲಿ ಬೆಂಗಾವಲಿಗಿದ್ದ ವಾಹನದಲ್ಲಿ ಪರಾರಿಯಾಗಿದ್ದಾರೆ.
ಅಕ್ರಮ ಜಾನುವಾರು ಸಾಗಾಟದ ಕುರಿತು ಖಚಿತ ಮಾಹಿತಿ ಪಡೆದ ಡಿಸಿಐಬಿ ಪೊಲೀಸರ ತಂಡ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಸಮೀಪ ಗಸ್ತಿನಲ್ಲಿದ್ದರು. ಈ ಸಂದರ್ಭದಲ್ಲಿ ಅದೇ ದಾರಿಯಲ್ಲಿ ಸಾಗಿಬಂದ 407 ವಾಹನ ನಿಲ್ಲಿಸಲು ಸೂಚಿಸಿದ್ದಾರೆ. ಚಾಲಕ ವಾಹನ ನಿಲ್ಲಿಸದೇ ಪರಾರಿಯಾಗಲು ಯತ್ನಿಸಿದ್ದಾನೆ.

ಆಗ ಡಿಸಿಐಬಿ ತಂಡ ಗೋಕಳ್ಳರನ್ನು ಬೆನ್ನತ್ತಿದೆ. ಸೊಣಂದೂರು ಅಡ್ತಿಳ ಎಂಬಲ್ಲಿ ಅಕ್ರಮ ಗೋ ಸಾಗಾಟಗಾರರು ವಾಹನವನ್ನು ರಸ್ತೆಯಲ್ಲಿಯೇ ಬಿಟ್ಟು ಬೆಂಗಾವಲಿಗಿದ್ದ ವಾಹನದಲ್ಲಿ ಪಾರಿಯಾಗಿದ್ದಾರೆ. ವಾಹನವನ್ನು ವಶಕ್ಕೆ ಪಡೆದಿರುವ ಡಿಸಿಐಬಿ ಪೊಲೀಸರು ಕಳವು ಮಾಡಿದ ಆರು ಜಾನುವಾರುಗಳನ್ನು ರಕ್ಷಿಸಿದ್ದಾರೆ.

ಪರಾರಿಯಾದವರನ್ನು ಸಜಿಪ ಅಮ್ಮೆಮಾರ್ ನಿವಾಸಿಗಳಾದ ಫಾರೂಕ್ ಸಜಿಪ, ಅಮ್ಮೆಮ್ಮಾರ್, ಜೈನು ಯಾನೆ ಜೈನುದ್ದೀನ್ ಹಾಗು ಅರಾಫತ್ ಎಂದು ಗುರುತಿಸಲಾಗಿದೆ. ಉಳಿದ ಇಬ್ಬರು ಆರೋಪಿಗಳು ಫರಂಗಿಪೇಟೆ ನಿವಾಸಿಗಳೆಂದು ಪೊಲೀಸ್ ಮೂಲಗಳು ತಿಳಿಸಿವೆ.












Click it and Unblock the Notifications