ಮಂಗಳೂರಿನ ಸುರತ್ಕಲ್‌ನಲ್ಲಿ ಗೋಣಿಚೀಲದಲ್ಲಿ ಮೃತದೇಹ ಪತ್ತೆ, ಕೊಲೆ ಶಂಕೆ
ಮಂಗಳೂರು, ಜೂನ್ 2: ವ್ಯಕ್ತಿಯೊಬ್ಬರ ಮೃತದೇಹ ಗೋಣಿಚೀಲದಲ್ಲಿ ಪತ್ತೆಯಾಗಿದೆ. ಮಂಗಳೂರು ಹೊರವಲಯದ ಸುರತ್ಕಲ್ ಕೃಷ್ಣಾಪುರ ರಸ್ತೆಯ ಬದಿಯ ಚರಂಡಿಯಲ್ಲಿ ಗೋಣಿಚೀಲದ ಒಳಗೆ ಮೃತದೇಹ ಪತ್ತೆಯಾಗಿದೆ.
ಮೃತ ದೇಹ ದೊರೆತ ಸ್ಥಳಕ್ಕೆ ಸುರತ್ಕಲ್ ಠಾಣೆಯ ಪೊಲೀಸರು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಕೊಲೆಯಾದ ವ್ಯಕ್ತಿ ಕೊಪ್ಪಳ ಜಿಲ್ಲೆಯ ಕಬ್ಬರಗಿ ನಿವಾಸಿ ಮರಿಯಪ್ಪ (50) ಎಂದು ಗುರುತಿಸಲಾಗಿದೆ.
ದುಷ್ಕರ್ಮಿಗಳು ಮರಿಯಪ್ಪ (50) ಅವರನ್ನು ಬೇರ ಎಲ್ಲೋ ಕೊಲೆ ಮಾಡಿ ಮೃತದೇಹವನ್ನು ಗೋಣಿಚೀಲದಲ್ಲಿ ಕಟ್ಟಿ ವಾಹನದಲ್ಲಿ ತಂದು ರಸ್ತೆಬದಿಯ ಚರಂಡಿಗೆ ಹಾಕಿದ್ದಾರೆ ಎಂದು ಶಂಕಿಸಲಾಗಿದೆ.

ಚರಂಡಿಯಲ್ಲಿ ಪತ್ತೆಯಾಗಿದ್ದ ಮರಿಯಪ್ಪ ಅವರ ಮೃತದೇಹವನ್ನು ಮಂಗಳೂರಿನ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ಸುರತ್ಕಲ್ ಪೊಲೀಸರು ತನಿಖೆ ಆರಂಭಿಸಿದ್ದಾರೆ.












Click it and Unblock the Notifications