ಮಂಗಳೂರಿನಲ್ಲಿ ದಂಪತಿ ಆತ್ಮಹತ್ಯೆ; ಕೊಳೆತ ಸ್ಥಿತಿಯಲ್ಲಿ ಶವಪತ್ತೆ
ಮಂಗಳೂರು, ಜೂನ್ 20: ವಯೋವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರ ಹೊರವಲಯದ ತೊಕ್ಕೊಟ್ಟು ಸಮೀಪದ ಚೆಂಬುಗುಡ್ಡೆ ಬಳಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಆತ್ಮಹತ್ಯೆ ಮಾಡಿಕೊಂಡವರನ್ನು ಪದ್ಮನಾಭ (78) ಮತ್ತು ಅವರ ಪತ್ನಿ ವಿಮಲಾ (65) ಎಂದು ಗುರುತಿಸಲಾಗಿದೆ.
ಮೃತರಿಗೆ ಮೂವರು ಮಕ್ಕಳಿದ್ದಾರೆ. ಎಲ್ಲರೂ ವಿವಾಹಿತರಾಗಿದ್ದು, ಬೇರೆ ವಾಸವಾಗಿದ್ದಾರೆ. ಬುಧವಾರ ಮಧ್ಯಾಹ್ನ ಪದ್ಮನಾಭ ಅವರ ಅಳಿಯ ಉಮಾನಾಥ್ ಮಾವನ ಮನೆಗೆ ಬಂದಿದ್ದು, ಬಾಗಿಲು ಬಡಿದಾಗ ಯಾರೂ ಬಾಗಿಲು ತೆರೆಯಲಿಲ್ಲ. ಯಾವುದೇ ಪ್ರತಿಕ್ರಿಯೆ ಬಾರದೆ ಇದ್ದುದರಿಂದ ಹಾಗೂ ಮನೆ ಒಳಗಿನಿಂದ ದುರ್ನಾತ ಬರುತ್ತಿದ್ದುದರಿಂದ ಅನುಮಾನಗೊಂಡು ಅವರು ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದಾರೆ.

ಉಳ್ಳಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಮನೆಯ ಬಾಗಿಲು ಒಡೆದು ಒಳ ಪ್ರವೇಶಿಸಿದ್ದು, ಅಡುಗೆ ಕೋಣೆಯಲ್ಲಿ ಪದ್ಮನಾಭ್ ಮತ್ತು ವಿಮಲ ದಂಪತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಕಂಡುಬಂದಿವೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.












Click it and Unblock the Notifications