ದೀಪಕ್ ರಾವ್ ಹತ್ಯೆ ಖಂಡಿಸಿ ಮಂಗಳೂರಿನಲ್ಲಿ ತೀವ್ರ ಪ್ರತಿಭಟನೆ
ಮಂಗಳೂರು, ಜನವರಿ 5: ಮಂಗಳೂರು ಹೊರವಲಯದ ಕಾಟಿಪಳ್ಳದಲ್ಲಿ ನಡೆದ ದೀಪಕ್ ರಾವ್ ಹತ್ಯೆ ಖಂಡಿಸಿ ಪ್ರತಿಭಟನೆಗಳು ಆರಂಭವಾಗಿವೆ. ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗು ದಕ್ಷಿಣ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಹಿಂದೂ ಸಂಘಟನೆಗಳು ಹಾಗು ಬಿಜೆಪಿ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದ್ದಾರೆ.
ಮಂಗಳೂರಿನ ಬೆಸೆಂಟ್ ಸರ್ಕಲ್ ನಲ್ಲಿ ಹಿಂದೂ ಪರ ಸಂಘಟನೆಗಳ ಪ್ರಮುಖರು ಹಾಗೂ ಕಾರ್ಯಕರ್ತರು ರಸ್ತೆ ತಡೆ ನಡೆಸಿದರು. ಈ ವೇಳೆ ಹಿಂದೂ ಪರ ಸಂಘಟನೆಗಳು ಹಾಗೂ ಬಿಜೆಪಿ ಪಕ್ಷದ ನೂರಾರು ಕಾರ್ಯಕರ್ತರು ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿದರು.
ಪ್ರತಿಭಟನೆ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ದುಷ್ಕರ್ಮಿಗಳು ಗೋವು ಹಾಗು ಹಿಂದೂ ಸಂಘಟನೆಗಳು ಕಾರ್ಯಕರ್ತರನ್ನು ಒಂದೇ ಮಾದರಿಯಲ್ಲಿ ಕೊಲೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ದಿಢೀರ್ ಪ್ರತಿಭಟನೆ ನಡೆಸಿ ರಸ್ತೆ ತಡೆ ನಡೆಸಿದ್ದರಿಂದ ನಗರದ ಎಂ. ಜಿ. ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು. ಈ ಹಿನ್ನೆಲೆಯಲ್ಲಿ ರಸ್ತೆ ತಡೆ ನಡೆಸಿದ ಸಂಘ ಪರಿವಾರದ ಪ್ರಮುಖರಾದ ಎಂ.ಬಿ ಪುರಾಣಿಕ್, ಶರಣ್ ಪಂಪ್ ವೆಲ್, ಜಗದೀಶ್ ಶೇವಾ, ಬಿಜೆಪಿ ನಾಯಕರುಗಳಾದ ವೇದವ್ಯಾಸ ಕಾಮತ್, ಮೋನಪ್ಪ ಭಂಡಾರಿ ಸಹಿತ ಆನೇಕನ್ನು ಪೊಲೀಸರು ಬಂಧಿಸಿದರು.












Click it and Unblock the Notifications