ಚಾರ್ಮಾಡಿ ಘಾಟಿ ಸಂಚಾರ ನಿರ್ಬಂಧ ಸಡಿಲಿಸಲು ಒತ್ತಾಯ
ಮಂಗಳೂರು, ಆಗಸ್ಟ್ 12: ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆ ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ರಾತ್ರಿ 9 ಗಂಟೆವರೆಗೆ ನಿಗದಿತ ವಾಹನಗಳ ಸಂಚಾರಕ್ಕೆ ನಿಗದಿಪಡಿಸಿರುವ ಸಮಯವನ್ನು ವಿಸ್ತರಿಸಿ, ನಿರ್ಬಂಧ ಸಮಯವನ್ನು ತಗ್ಗಿಸಬೇಕೆಂಬ ಒತ್ತಾಯ ಕೇಳಿಬರುತ್ತಿದೆ.
ಹಾಸನ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಸಂಪರ್ಕಿಸುವ ಶಿರಾಡಿ ಘಾಟಿಯ ದುಃಸ್ಥಿತಿಯ ಬಳಿಕ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನ ಸಂಚಾರ ಅಧಿಕಗೊಂಡಿದೆ. ಆರೋಗ್ಯ ಸಮಸ್ಯೆ, ಇನ್ನಿತರ ಕಾರಣಗಳಿಗೆ ಚಾರ್ಮಾಡಿ ಘಾಟಿ ಮೂಲಕ ಪ್ರಯಾಣಿಸುವ ಜನರಿಗೆ ಸಮಯದ ನಿರ್ಬಂಧ ಇರುವುದರಿಂದ ಒತ್ತಡ ಹೆಚ್ಚುತ್ತಿದೆ.
ಸಂಜೆ 7 ಗಂಟೆ ಒಳಗೆ ಚಾರ್ಮಾಡಿ ಗೇಟ್ ಮೂಲಕ ಪ್ರವೇಶಿಸಲು ಅಡಚಣೆ ಉಂಟಾಗುತ್ತಿದೆ ಎಂಬ ಕೂಗು ಕೇಳಿ ಬರುತ್ತಿದ್ದು, ಈಗಾಗಲೇ ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ವೀಕ್ಷಣೆ ನಡೆಸಿ ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಮಾತುಕತೆ ನಡೆಸಿದ್ದಾರೆ.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ಎಂಎಲ್‌ಸಿ ಪ್ರತಾಪ ಸಿಂಹ ನಾಯಕ್ ಕೂಡ ಈ ಬಗ್ಗೆ ಧ್ವನಿ ಎತ್ತಿದ್ದು, ಕಳೆದ ಕೆಲವು ದಿನಗಳಿಂದ ಚಾರ್ಮಾಡಿ ಘಾಟಿ ಭಾಗದಲ್ಲಿ ಮಳೆಯ ಅಬ್ಬರ ತಗ್ಗಿದೆ. ಇದರಿಂದ ಘಾಟಿ ಪ್ರದೇಶದಲ್ಲಿ ಸಂಚಾರಕ್ಕೆ ಹೆಚ್ಚಿನ ತೊಂದರೆ ಉಂಟಾಗುತ್ತಿದೆ, ಆದ್ದರಿಂದ ಸಂಚಾರ ಸಮಯ ವಿಸ್ತರಿಸಬೇಕು ಎಂಬ ಅಭಿಪ್ರಾಯ ಸವಾರರಿಂದ ಕೇಳಿಬಂದಿದೆ.
ಚಾರ್ಮಾಡಿಯವರಿಗೆ ಸಮಸ್ಯೆ
ಸಂಜೆ 7 ಗಂಟೆ ಬಳಿಕ ಘಾಟಿಯಲ್ಲಿ ಸಂಚಾರ ಇಲ್ಲದ ಕಾರಣ ಉಜಿರೆಯಿಂದ ಚಾರ್ಮಾಡಿ ಕಡೆ ಪ್ರಯಾಣಿಸುವ ಅನೇಕ ಸ್ಥಳೀಯರಿಗೆ ವಾಹನ ವ್ಯವಸ್ಥೆ ಇಲ್ಲದೆ ಸಮಸ್ಯೆ ಎದುರಿಸುವಂತಾಗಿದೆ. ಸ್ವಂತ ವಾಹನ ಇಲ್ಲದ ಅನೇಕ ಕಾರ್ಮಿಕರು ಉದ್ಯೋಗಿಗಳು ಉಜಿರೆಯಿಂದ ದಿನನಿತ್ಯ ದುಬಾರಿ ಬಾಡಿಗೆ ತೆತ್ತು ಪ್ರಯಾಣಿಸಬೇಕು.

ಚಾರ್ಮಾಡಿ ಘಾಟಿ ಕಡೆ ವಾಹನ ಸಂಚಾರ ಇಲ್ಲದಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ. ಘಾಟಿ ರಸ್ತೆಯಲ್ಲಿ ವಿಶ್ರಾಂತಿ ಕೊಠಡಿ, ಉಪಾಹಾರ ಗೃಹ, ಶೌಚಾಲಯ ವ್ಯವಸ್ಥೆ, ಮೊಬೈಲ್ ನೆಟ್‌ವರ್ಕ್ ಇಲ್ಲದಿರುವುದು ಕೂಡ ಪ್ರಯಾಣಿಕರಿಗೆ ತೊಂದರೆ ನೀಡುತ್ತಿದೆ.
ಅಂಬೇಡ್ಕರ್ ಭವನ ಲೋಕಾರ್ಪಣೆ ಮಾಡಿದ ಸಿಎಂ
ಮಂಗಳೂರು ನಗರದ ಉರ್ವಾಸ್ಟೋರ್‌ನಲ್ಲಿ ನಿರ್ಮಾಣಗೊಂಡ ಡಾ.ಬಿ.ಆರ್ ಅಂಬೇಡ್ಕರ್ ಭವನದ ನೂತನ ಕಟ್ಟಡವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಲೋಕಾರ್ಪಣೆ ಮಾಡಿದರು.
ಕಳೆದ ಕೆಲ ವರ್ಷಗಳ ಬೇಡಿಕೆಯಾಗಿದ್ದ, ಅಂಬೇಡ್ಕರ್ ಭವನ ನಿರ್ಮಾಣಗೊಂಡು ವರ್ಷ ಕಳೆದರೂ ಉದ್ಘಾಟನಾ ಭಾಗ್ಯ ಸಿಕ್ಕಿರಲಿಲ್ಲ. ಇದೀಗ ನೂತನ ಮುಖ್ಯಮಂತ್ರಿಯಾಗಿ ಜಿಲ್ಲೆಗೆ ಆಗಮಿಸಿದ ಸಿಎಂ ಬೊಮ್ಮಾಯಿ ಲೋಕಾರ್ಪಣೆ ಮಾಡಿದರು.

ದಕ್ಷಿಣ ಕನ್ನಡಕ್ಕೆ ಕೊರೊನಾ ಕಂಟಕ
ನೆರೆಯ ಕೇರಳ ರಾಜ್ಯದಿಂದಲೇ ಗಡಿ ಜಿಲ್ಲೆ ದಕ್ಷಿಣ ಕನ್ನಡಕ್ಕೆ ಕೊರೊನಾ ಸೋಂಕು ಕಂಟಕ ಎದುರಾಗಿದೆ. ದೇಶದಲ್ಲಿ ಪ್ರತಿದಿನ ಪತ್ತೆಯಾಗುವ ಅರ್ಧದಷ್ಟು ಸೋಂಕು ಕೇರಳದಲ್ಲೇ ವರದಿಯಾಗುತ್ತಿವೆ. ಹೀಗಾಗಿ ಕೇರಳ ರಾಜ್ಯದ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಜನರಲ್ಲಿ ಆತಂಕ ಮನೆಮಾಡಿದೆ.
ಗುರುವಾರ ಒಂದೇ ದಿನ 475 ಜನರಲ್ಲಿ ಕೊರೊನಾ ಸೊಂಕು ಪತ್ತೆಯಾಗುವ ಮೂಲಕ ರಾಜ್ಯದಲ್ಲೇ ಅತೀ ಹೆಚ್ಚು ಸೋಂಕು ಪತ್ತೆಯಾದ ಜಿಲ್ಲೆಯಾಗಿದೆ.
ಜಿಲ್ಲೆಯಲ್ಲಿ ಕೊರೊನಾಗೆ ಇಂದು 5 ಮಂದಿ ಬಲಿಯಾದರೆ, 354 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಇಂದು ಮಾತ್ರವಲ್ಲದೆ ಕಳೆದ ಐದು ದಿನಗಳಿಂದಲೂ ರಾಜ್ಯದಲ್ಲೇ ಅತಿ ಹೆಚ್ಚು ಪಾಸಿಟಿವ್ ಪ್ರಕರಣ ಪತ್ತೆಯಾಗುತ್ತಿವೆ.
ಕೊರೊನಾ ಸೋಂಕು ನಿಯಂತ್ರಣಕ್ಕೆ ಪಣತೊಟ್ಟಿರುವ ದಕ್ಷಿಣ ಜಿಲ್ಲಾಡಳಿತ, ಹೊಸ ನಿಯಮಗಳನ್ನು ಜಾರಿಮಾಡಿದೆ. ಕೊರೊನಾ ಸೋಂಕು ಪತ್ತೆಯಾದ ವ್ಯಕ್ತಿಯ ಸಂಪರ್ಕದಲ್ಲಿರುವ ಸುಮಾರು 50 ಮಂದಿಯನ್ನು ಟೆಸ್ಟ್ ಗೆ ಒಳಪಡಿಸುತ್ತಿದೆ. ನಗರ ಭಾಗದ ಅಪಾರ್ಟ್‍ಮೆಂಟ್ ನಿವಾಸಿಗಳಲ್ಲಿ ಸೋಂಕು ಕಂಡುಬಂದರೆ. ಫ್ಲ್ಯಾಟ್ ನ ಮೇಲಿನ ಮಹಡಿ ಮತ್ತು ಕೆಳ ಮಹಡಿಯ ಎಲ್ಲರ ಕೊರೊನಾ ಟೆಸ್ಟ್ ಮಾಡಲಾಗುತ್ತದೆ.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ












Click it and Unblock the Notifications