• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದಕ್ಷಿಣ ಕನ್ನಡದಲ್ಲಿ ಏರುತ್ತಲೇ ಇದೆ ಡೆಂಗ್ಯೂ; ಮತ್ತೆ 59 ಮಂದಿ ಆಸ್ಪತ್ರೆಗೆ ದಾಖಲು

|
Google Oneindia Kannada News

ಮಂಗಳೂರು, ಜುಲೈ 26: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ 29 ಮಂದಿಯಲ್ಲಿ ಡೆಂಗ್ಯೂ ಶಂಕೆ ವ್ಯಕ್ತವಾಗಿದ್ದು, ಇದೀಗ ಆ ಸಂಖ್ಯೆ 59ಕ್ಕೆ ಏರಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 59 ಮಂದಿ ಎರಡು ದಿನಗಳಿಂದೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ; ಒಂದೇ ದಿನದಲ್ಲಿ 29 ಮಂದಿ ಆಸ್ಪತ್ರೆಗೆ ದಾಖಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ; ಒಂದೇ ದಿನದಲ್ಲಿ 29 ಮಂದಿ ಆಸ್ಪತ್ರೆಗೆ ದಾಖಲು

ಮಂಗಳೂರು ತಾಲೂಕಿನಲ್ಲಿ 51 ಡೆಂಗ್ಯೂ ಶಂಕಿತ ಪ್ರಕರಣಗಳು ದಾಖಲಾಗಿದ್ದರೆ, ಬಂಟ್ವಾಳ ತಾಲೂಕಿನಲ್ಲಿ ಓರ್ವ ವ್ಯಕ್ತಿಯಲ್ಲಿ ಡೆಂಗ್ಯೂ ಜ್ವರದ ಶಂಕೆ ವ್ಯಕ್ತವಾಗಿದೆ. ಡೆಂಗ್ಯೂ ನಿಯಂತ್ರಣಕ್ಕೆ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಸರ್ವಸನ್ನದ್ಧವಾಗಿ ಕಾರ್ಯಾಚರಣೆ ಆರಂಭಿಸಿದೆ. ಈಗಾಗಲೇ ಡೆಂಗ್ಯೂ ಭಾದಿತ ಪ್ರದೇಶಕ್ಕೆ ಆರೋಗ್ಯ ಇಲಾಖೆಗಳ ತಂಡ ಭೇಟಿ ನೀಡಿ, ಸ್ವಚ್ಛತಾ ಕಾರ್ಯಗಳನ್ನು ಕೈಗೊಂಡಿದೆ.

ಮಂಗಳೂರು ನಗರದ ವಿವಿಧೆಡೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿರುವ ಪ್ರದೇಶಗಳಲ್ಲಿ ಫಾಗಿಂಗ್ ನಡೆಸಲಾಗುತ್ತಿದೆ. ಅಲ್ಲಲ್ಲಿ ಡೆಂಗ್ಯೂ ಕುರಿತು ಜಾಗೃತಿ ಅಭಿಯಾನಗಳೂ ನಡೆಯುತ್ತಿವೆ.

English summary
Dengue cases are increasing Dakshina Kannada District. Since two days, 59 people admitted to hospital due to dengue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X