ಸಾಮಾಜಿಕ ಜಾಲತಾಣದಲ್ಲಿ ಹಿಂದೂ ದೇವರುಗಳ ಅವಹೇಳನ
ಮಂಗಳೂರು ಜೂನ್ 17 : ಸಾಮಾಜಿಕ ಜಾಲತಾಣದಲ್ಲಿ ಹಿಂದೂ ದೇವರು, ದೈವಗಳನ್ನು ಅತ್ಯಂತ ಕೀಳುಭಾಷೆ ಬಳಸಿ ನಿಂದಿಸಿದ ಪ್ರಸಂಗ ಬೆಳಕಿಗೆ ಬಂದಿದೆ.
ಫೇಸ್‌ಬುಕ್ ನಲ್ಲಿ ಬಷೀರ್ ಅಡ್ಯಾರ್ ಬಷೀರ್ ಎಂಬ ಹೆಸರಿನ ಖಾತೆಯಲ್ಲಿ ಹಿಂದೂ ದೇವತೆಗಳಾದ ಲಕ್ಷ್ಮಿ, ಶ್ರೀರಾಮ, ಸೀತೆ, ಗಣೇಶರನ್ನು ಅತ್ಯಂತ ಕೀಳು ಭಾಷೆಯಲ್ಲಿ ನಿಂದಿಸಿದ್ದು ಮಾತ್ರವಲ್ಲದೇ , ಫೋಟೋಗಳನ್ನು ಅತ್ಯಂತ ಕೀಳಭಿರುಚಿಯಲ್ಲಿ ವಿರೂಪಗೊಳಿಸಿ ಪೋಸ್ಟ್ ಮಾಡಲಾಗಿದೆ.
ಬಷೀರ್ ಅಡ್ಯಾರ್ ಬಷೀರ್ ಹೆಸರಿನ ಖಾತೆಯಲ್ಲಿ ಪೋಸ್ಟ್ ಮಾಡಿದ ಫೋಟೋ ಗಳು ವೈರಲ್ ಆಗಿದ್ದು ಅದರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಹಿಂದೂ ದೇವರುಗಳನ್ನು ಮಾತ್ರವಲ್ಲದೇ ಛತ್ರಪತಿ ಶಿವಾಜಿ ಮಹಾರಾಜ್ , ಪ್ರಧಾನಿ ನರೇಂದ್ರ ಮೋದಿ ಫೊಟೊ ಗಳನ್ನು ವಿರೂಪಗೊಳಿಸಿ ಅವಹೇಳನಕಾರಿಯಾದ ರೀತಿಯಲ್ಲಿ ಪೋಸ್ಟ ಮಾಡಲಾಗಿದೆ.

ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬಷೀರ್ ಹೆಸರಿನ ನ ಈ ಪೋಸ್ಟ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಹಿಂದೂ ಯುವಕನೊಬ್ಬನ ಪ್ರೊಫೈಲ್ ಫೋಟೊ ಹಾಕಿರುವ ಬಷೀರ್ ಅಡ್ಯಾರ್ ಎಂಬಾತ ಹಿಂದೂಗಳ ಆರಾಧ್ಯ ದೇವಿ ಲಕ್ಷ್ಮೀ ಜತೆ ಪ್ರಧಾನಿ ಮೋದಿ ಫೋಟೊ ಆಶ್ಲೀಲ ರೀತಿಯಲ್ಲಿ ಎಡಿಟ್ ಮಾಡಿದ್ದಲ್ಲದೇ, ಮಾಡೆಲ್ ಓರ್ವಳ ಚಿತ್ರವನ್ನು ಕೂಡ ದೇವಿ ಚಿತ್ರದ ಜತೆ ಎಡಿಟ್ ಮಾಡಿ ವಿಕೃತಿ ಮೆರೆದಿದ್ದಾನೆ.
ಇನ್ನು ಶಿವಾಜಿ ಮಾಹಾರಾಜ್ ಅವರ ಚಿತ್ರವನ್ನು ಗೋರಿಲ್ಲಾಕ್ಕೆ ಅಂಟಿಸಿರುವ ಈತನಿಗೆ ಕೆಲ ಸಮಾನ ಮನಸ್ಕರೂ ಪ್ರೋತ್ಸಾಹ ನೀಡಿ ವಿರೂಪಗೊಳಿಸಲಾದ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ತಮ್ಮ ಖಾತೆಗಳ ಮೂಲಕ ಸಮಾಜದ ಸ್ವಾಸ್ಥ್ಯ ಕೆಡಿಸಲು ಮುಂದಾಗಿರುವ ಇಂತಹ ವ್ಯಕ್ತಿಗಳ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಹಿಂದೂ ಸಂಘಟನೆಯ ಮುಖಂಡರು ಈ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ, ಸೈಬರ್ ಕ್ರೈಂ ಠಾಣೆಗೆ ದೂರು ನೀಡಲು ಮುಂದಾಗಿದ್ದಾರೆ. ಇದು ಅಸಲಿ ಖಾತೆಯೇ ಅಥವಾ ನಕಲಿಯೇ ? ಎಂಬ ಅನುಮಾನ ಕೂಡ ವ್ಯಕ್ತವಾಗಿದೆ.
ಈ ನಡುವೆ ಪೊಲೀಸರು ಎಚ್ಚೆತ್ತುಕೊಂಡಿದ್ದು ಬಷೀರ್ ಅಡ್ಯಾರ್ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಷೀರ್ ಅಡ್ಯಾರ್ ನ ಫೇಸ್‌ಬುಕ್ ಖಾತೆಯ ಕುರಿತು ತನಿಖೆ ಆರಂಭಿಸಿದ್ದು, ಬಷೀರ್ ಅಡ್ಯಾರ್ ನನ್ನು ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications