ಕಲೆಕ್ಷನ್ ಮಾಸ್ಟರ್ (ಸಿಎಂ) ಆಫ್ ಕರ್ನಾಟಕ ಎದು ಫೋಸ್ಟ್ ಕ್ರಿಯೇಟ್: ಬೆಳ್ತಂಗಡಿ ಶಾಸಕನ ವಿರುದ್ಧ FIR ದಾಖಲು
ಮಂಗಳೂರು, ಅಕ್ಟೋಬರ್, 27: ಫೇಸ್‌ಬುಕ್ ಪೇಜ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಕಲೆಕ್ಷನ್ ಮಾಸ್ಟರ್ ಎಂದು ಅವಹೇಳನಕಾರಿಯಾಗಿ ಪೋಸ್ಟ್ ಹಾಕಿಕೊಂಡಿದ್ದಾ ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಬೆಂಗಳೂರಿನ ಸಿಎಂ ನಿವಾಸದ ಫೋಟೋ ಶೇರ್ ಮಾಡಿ ಕಲೆಕ್ಷನ್ ಮಾಸ್ಟರ್ (ಸಿಎಂ) ಆಫ್ ಕರ್ನಾಟಕ ಎಂಬ ಟ್ಯಾಗ್‌ಲೈನ್ ಬರೆದುಕೊಂಡಿದ್ದರು. ಈ ಬಗ್ಗೆ ಕಾಂಗ್ರೆಸ್ ಮುಖಂಡ, ಮಾಜಿ ಸಿಎಂ ಜಿಲ್ಲಾ ಪಂಚಾಯತ್ ಸದಸ್ಯ ಶೇಖರ್ ಬೆಳ್ತಂಗಡಿ ಠಾಣೆಯಲ್ಲಿ ರಾಜ್ಯದ ಸಿಎಂ ಅವರನ್ನು ಅವಹೇಳನ ಮಾಡಿದ್ದಾಗಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಅಲ್ಲದೆ ಇತ್ತೀಚೆಗಷ್ಟೇ ಅರಣ್ಯ ಅಧಿಕಾರಿಗಳನ್ನು ಅವಾಚ್ಯವಾಗಿ ನಿಂದಿಸಿದ ಆರೋಪ ಹಿನ್ನೆಲೆ ಶಾಸಕ ಹರೀಶ್ ಪೂಂಜಾ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ FIR ದಾಖಲು
ಹಾಗೆಯೇ ಇತ್ತೀಚೆಗಷ್ಟೇ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಅರಣ್ಯಾಧಿಕಾರಿ ಜಯಪ್ರಕಾಶ್ ಕೆಕೆ ದೂರಿನ ಹಿನ್ನೆಲೆ ಶಾಸಕ ಹರೀಶ್ ಪೂಂಜಾ ಅವರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ಟೋಬರ್ 8ರಂದು ಚಾರ್ಮಾಡಿ ಅರಣ್ಯದಲ್ಲಿ ಮನೆ ನಿರ್ಮಾಣ-ತೆರವು ಸಂಬಂಧ ಅರಣ್ಯಾಧಿಕಾರಿಗಳು-ಶಾಸಕರ ನಡುವೆ ಭಾರೀ ಜಟಾಪಟಿ ನಡೆದಿತ್ತು. ಈ ವೇಳೆ ಅರಣ್ಯಾಧಿಕಾರಿ ಜಯಪ್ರಕಾಶ್‌ಗೆ (ಲೋಫರ್ ನನ್ ಮಗ) ಅವಾಚ್ಯ ಶಬ್ಧಗಳಿಂದ ಶಾಸಕರು ನಿಂದಿಸಿದ್ದರು ಎಂದು ದೂರು ನೀಡಲಾಗಿತ್ತು.
ನಂತರ ಬೇಸರಗೊಂಡ ಅರಣ್ಯಾಧಿಕಾರಿ ಶಾಸಕ ಹಾಗೂ ಬೆಂಬಲಿಗರ ವಿರುದ್ಧ ದೂರು ದಾಖಲಿಸಿದ್ದರು. ಐಪಿಸಿ 1860 (ಯು/ಎಸ್-143, 353, 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ), 149) ಅಡಿ ಪ್ರಕರಣ ದಾಖಲು ಆಗಿತ್ತು. ಸದ್ಯ ಹರೀಶ್ ಪೂಂಜಾ ಅವರು ಬಂಧನದ ಭೀತಿಯಲ್ಲಿದ್ದಾರೆ ಎನ್ನಲಾಗಿದೆ












Click it and Unblock the Notifications