ಧರ್ಮಸ್ಥಳಕ್ಕೆ ಭೇಟಿ ನೀಡಿದ ನಿಯೋಜಿತ ಮುಖ್ಯಮಂತ್ರಿ ಕುಮಾರಸ್ವಾಮಿ
ಧರ್ಮಸ್ಥಳ, ಮೇ 22: "ಯಾವುದೇ ಕಾರಣಕ್ಕೂ ದ್ವೇಷದ ರಾಜಕಾರಣಕ್ಕೆ ಬೆಲೆ ಕೊಡಬೇಡಿ. ಕರಾವಳಿಯ ಜನರು ಸಹಬಾಳ್ವೆಯಿಂದ ಬದುಕಬೇಕಿದೆ" ಎಂದು ನಿಯೋಜಿತ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.
ಇಂದು(ಮೇ 22) ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀಮಂಜುನಾಥನ ದರ್ಶನ ಪಡೆದ ನಂತರ ಅವರು ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದರು.
In Pics: ಧರ್ಮಸ್ಥಳಕ್ಕೆ ಭೇಟಿ ನೀಡಿದ ನಿಯೋಜಿತ ಸಿಎಂ ಕುಮಾರಸ್ವಾಮಿ

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ನಾಳೆ(ಮೇ 23) ಪ್ರಮಾಣ ವಚನ ಸ್ವೀಕರಿಸಲಿರುವ ಎಚ್ ಡಿ ಕುಮಾರಸ್ವಾಮಿ, ಮಂಜುನಾಥ ದರ್ಶನ ಪಡೆದ ಬಳಿಕ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಸನ್ಮಾನಿಸಿದ ಕುಮಾರಸ್ವಾಮಿ ಹೆಗ್ಗಡೆ ಅವರೊಂದಿಗೆ ಕೆಲ ಸಮಯ ಮಾತುಕತೆ ನಡೆಸಿದರು.












Click it and Unblock the Notifications