ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅರಣ್ಯ ನಾಶದಿಂದ ನೀರಿನ ಅಭಾವ : ವೀರೇಂದ್ರ ಹೆಗ್ಗಡೆ ವಿಷಾದ

By ಕಿರಣ್ ಸಿರ್ಸಿಕರ್
|
Google Oneindia Kannada News

ಮಂಗಳೂರು, ಮೇ 18 : ನೀರಿನ ಮಿತ ಬಳಕೆ ಮಾಡಿ ಜನರು ನೀರು ಉಳಿಸಬೇಕು. ನೇತ್ರಾವತಿ ನದಿಯ ಪೂರಕ ನದಿಯ ನೀರು ಇಂಗುತ್ತಿದೆ. ಉಪನದಿಗಳ ನೀರು ಇಂಗುತ್ತಿರುವ ಪರಿಣಾಮ ನೀರಿಗೆ ಸಮಸ್ಯೆ ‌ಆಗಿದೆ. ಕಾಡು ಉಳಿಸದೇ ಇರುವ ಕಾರಣ ಈ ಸಮಸ್ಯೆ ಎದುರಾಗಿದೆ ಎಂದು ಧರ್ಮಸ್ಥಳದ ಧರ್ಮಾದಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆ ವಿಷಾದ ವ್ಯಕ್ತಪಡಿಸಿದ್ದಾರೆ.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

ಸರ್ಕಾರ ಮತ್ತು ಜಲತ್ಞರು ಈ ಬಗ್ಗೆ ತಕ್ಷಣ ಯೋಚನೆ ಮಾಡಬೇಕು. ಇಂದು ಮಾತ್ರವಲ್ಲ ಮುಂದಿನ 15ರಿಂದ 20 ವರ್ಷಗಳ ಭವಿಷ್ಯದ ಬಗ್ಗೆ ಯೋಚನೆ ಮಾಡಬೇಕು. ಪಶ್ಚಿಮಘಟ್ಟದಲ್ಲಿ ಅರಣ್ಯನಾಶದಿಂದ ನೀರಿನ ಸಮಸ್ಯೆ ಉಂಟಾಗುತ್ತಿದೆ. ಅರಣ್ಯವನ್ನು ಉಳಿಸುವತ್ತ ಸರಕಾರ ಮತ್ತು ಪರಿಸರ ತಜ್ಞರು ಗಮನ ಹರಿಸಬೇಕು ಎಂದು ಅವರು ಕಿವಿಮಾತು ಹೇಳಿದರು.

ಧರ್ಮಸ್ಥಳದಲ್ಲಿ ನೀರಿನ ಅಭಾವ:ದರ್ಶನ ಮುಂದೂಡುವಂತೆ ವೀರೇಂದ್ರ ಹೆಗ್ಗಡೆ ಮನವಿಧರ್ಮಸ್ಥಳದಲ್ಲಿ ನೀರಿನ ಅಭಾವ:ದರ್ಶನ ಮುಂದೂಡುವಂತೆ ವೀರೇಂದ್ರ ಹೆಗ್ಗಡೆ ಮನವಿ

ಕರ್ನಾಟಕದ ಕರಾವಳಿಯಲ್ಲಿ ಇದೀಗ ತೀವ್ರ ನೀರಿನ ಸಮಸ್ಯೆ ಎದುರಾಗಿದೆ. ದಿನದಿಂದ ದಿನಕ್ಕೆ ಬಿಸಿಲಿನ ಬೇಗೆ ತೀವ್ರಗೊಳ್ಳಲಾರಂಭಿಸಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ತೀವ್ರ ನೀರಿನ ಬರ ಪರಿಸ್ಥತಿ ಸೃಷ್ಟಿಯಾಗಿದೆ. ತಾಪಮಾನ ಹೆಚ್ಚಳದಿಂದ ಅಂತರ್ಜಲ ಮಟ್ಟ ಕುಸಿಯಲಾರಂಭಿಸಿದ್ದು ಜಲಮೂಲಗಳು ಬರಿದಾಗಲಾರಂಭಿಸಿವೆ. ಧರ್ಮಸ್ಥಳದಲ್ಲಿ 40ರ ಆಸುಪಾಸಿನಲ್ಲಿ ತಾಪಮಾನವಿದೆ.

Destruction of forest reason for water shortage : Veerendra Heggade

ನೀರಿನ ಬರದ ಪರಿಣಾಮ ಜಿಲ್ಲೆಯ ಪ್ರಮುಖ ಪುಣ್ಯಕ್ಷೇತ್ರಗಳ ಮೇಲೆಯೂ ಉಂಟಾಗಿದೆ. ರಾಜ್ಯದ ಹೆಸರಾಂತ ಕ್ಷೇತ್ರವಾದ ಧರ್ಮಸ್ಥಳದಲ್ಲಿ ನೀರಿನ ಸಮಸ್ಯೆ ಉಲ್ಬಣಿಸಿದೆ. ಕ್ಷೇತ್ರದ ವತಿಯಿಂದ ಭಕ್ತಾದಿಗಳು ತಮ್ಮ ಪ್ರವಾಸವನ್ನು ಮುಂದೂಡಲು ಮನವಿ ಮಾಡಲಾಗಿದೆ. ಕ್ಷೇತ್ರದಲ್ಲಿ ಪೂಜಾಕಾರ್ಯಗಳಿಗೂ ನೀರಿನ ಸಮಸ್ಯೆ ಎದುರಾಗಿರುವುದು ತೀವ್ರತೆ ಎತ್ತಿ ತೋರಿಸುತ್ತಿದೆ.

ಮಂಗಳೂರಿನಲ್ಲಿ ನೀರಿಗೆ ಬರ, ಸಣ್ಣ ಕೈಗಾರಿಕೆಗಳು ಸ್ಥಗಿತಗೊಳ್ಳುವ ಭೀತಿಮಂಗಳೂರಿನಲ್ಲಿ ನೀರಿಗೆ ಬರ, ಸಣ್ಣ ಕೈಗಾರಿಕೆಗಳು ಸ್ಥಗಿತಗೊಳ್ಳುವ ಭೀತಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಭಕ್ತರಲ್ಲಿ ಡಾ ವೀರೇಂದ್ರ ಹೆಗ್ಗಡೆ ಮನವಿ ಮಾಡಿಕೊಂಡಿದ್ದು, ಶ್ರೀ ಕ್ಷೇತ್ರದಲ್ಲಿ ನೀರಿನ ಆಭಾವ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ನೇತ್ರಾವತಿ ನದಿಯಲ್ಲಿ ನೀರಿನ ಹರಿವು ತೀವ್ರ ತರದಲ್ಲಿ ಕಡಿಮೆಯಾಗಿದೆ. ನೀರಿನ ಅಭಾವ ಇರುವುದರಿಂದ ಭಕ್ತಾದಿಗಳು ಹಾಗು ಪ್ರವಾಸಿಗರು ಕೆಲ ದಿನಗಳ ಕಾಲ ಕ್ಷೇತ್ರದ ಭೇಟಿಯನ್ನು ಮುಂದೂಡುವಂತೆ ಕೋರಿದ್ದರು. ಕ್ಷೇತ್ರದ ಶೌಚಾಲಯ, ಛತ್ರ, ವಸತಿ ಗೃಹಗಳಲ್ಲಿ ತೀವ್ರ ನೀರಿನ ಕೊರತೆ ಎದುರಾಗಿದೆ. ಅದಲ್ಲದೇ ಕ್ಷೇತ್ರದ ಸ್ನಾನ ಘಟ್ಟದಲ್ಲಿ ನೀರಿಲ್ಲದೇ ಭಕ್ತರು ಪರದಾಡುವಂತಾಗಿದೆ.

Destruction of forest reason for water shortage : Veerendra Heggade

ಧರ್ಮಸ್ಥಳದಲ್ಲಿ ನೀರಿಗೆ ತೀರಾ ಬರ ಹಿನ್ನೆಲೆಯಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವೀರೆಂದ್ರ ಹೆಗ್ಗಡೆ ಅವರು, ರಾಜ್ಯದಲ್ಲೇ ಬರದ ಲಕ್ಷಣವಿದ್ದು, ನೀರಿನ ಸಾಕಷ್ಟು ಕೊರತೆಯಿದೆ, ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ನೀರಿನ ಸಮಸ್ಯೆಯಾಗಿದೆ. ಘಟ್ಟದ ಭಾಗದಿಂದ ನೀರು ಹರಿದು ಬರುವುದರಿಂದ ನೇತ್ರಾವತಿಯಲ್ಲಿ ನೀರು‌ ಹೆಚ್ಚಿರುತ್ತದೆ. ಆದರೆ ಈ ಬಾರಿ ಅಲ್ಲಿಯೂ ಮಳೆಯಾಗದ ಕಾರಣ ನೇತ್ರಾವತಿಯಲ್ಲೂ ನೀರಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೂ ತಟ್ಟಿದ ನೀರಿನ ಬರದ ಬಿಸಿಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೂ ತಟ್ಟಿದ ನೀರಿನ ಬರದ ಬಿಸಿ

ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಬರಲ್ಲ ಎಂದು ಸೂಚನೆ ಕೊಟ್ಟಿದೆ. ಹೀಗಾಗಿ ಕ್ಷೇತ್ರ ದರ್ಶನ ಮುಂದೂಡಿ ಎಂದು ವಿನಂತಿ ಮಾಡ್ತೇವೆ. ಕಿಂಡಿ ಅಣೆಕಟ್ಟು ಕಟ್ಟಿದ ಕಾರಣ ತೀರ್ಥ ಮತ್ತು ಅಭಿಷೇಕಕ್ಕೆ ನೀರಿದೆ. ಆದರೆ ಅಲ್ಲಿ ತೀರ್ಥ ಗುಂಡಿಯಲ್ಲೂ ನಾಲ್ಕು ಗುಂಡಿಯಲ್ಲಿ ನೀರಿನ ಪ್ರಮಾಣ ಕಡಿಮೆ ಆಗಿದೆ. ಈ ಹಿಂದೆಯೂ ಈ ರೀತಿ ಆಗಿದೆ, ಇಷ್ಟು ತೀವ್ರವಾಗಿ ಆಗಿಲ್ಲ. ಕೃಷಿಗೆ ಹೆಚ್ಚು ನೀರು ಬೇಕಾಗಿದ್ದು, ಇದು ಪ್ರಕೃತಿ ಮತ್ತು ಜನಜೀವನದ ಮಧ್ಯೆ ಪೈಪೋಟಿ ಎಂದು ಅವರು ಅಭಿಪ್ರಾಯ ಪಟ್ಟರು.

English summary
Destruction of forest is the main reason for water shortage in Dharmasthala and in Dakshina Kannada district, says Dr Veerendra Heggade. Dakshina Kannada and Udupi are facing acute water shortage due to failure of rain.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X