ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯಡಿಯೂರಪ್ಪ ಕಟ್ಟಾ ಬೆಂಬಲಿಗ ಧನಂಜಯ ಕುಮಾರ್ ಇನ್ನು ನೆನಪು ಮಾತ್ರ

|
Google Oneindia Kannada News

Recommended Video

ಬಿ ಎಸ್ ಯಡಿಯೂರಪ್ಪ ಬೆಂಬಲಿಗ, ಮಾಜಿ ಕೇಂದ್ರ ಸಚಿವ ಇನ್ನಿಲ್ಲ

ಮಂಗಳೂರು, ಮಾರ್ಚ್ 04: ಕೇಂದ್ರದ ಮಾಜಿ ಸಚಿವ ಧನಂಜಯ ಕುಮಾರ್ ಇಂದು ಮಧ್ಯಾಹ್ನ ಮಂಗಳೂರಿನ ಯುನಿಟಿ ಆಸ್ಪತ್ರೆಯಲ್ಲಿ ನಿಧನರಾದರು.

ಕಳೆದ ಕೆಲ ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ವಿ. ಧನಂಜಯ ಕುಮಾರ್ ಅವರನ್ನು ಕೆಲ ತಿಂಗಳುಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಆಸ್ಪತ್ರೆಯಲ್ಲಿ ನಿಧನರಾದರು.

ಕೋಮಾ ಸ್ಥಿತಿಗೆ ತಲುಪಿದ ಮಾಜಿ ಕೇಂದ್ರ ಸಚಿವ ವಿ.ಧನಂಜಯ ಕುಮಾರ್ಕೋಮಾ ಸ್ಥಿತಿಗೆ ತಲುಪಿದ ಮಾಜಿ ಕೇಂದ್ರ ಸಚಿವ ವಿ.ಧನಂಜಯ ಕುಮಾರ್

ಬಿಜೆಪಿಯಿಂದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ 4 ಬಾರಿ ಸತತವಾಗಿ ಗೆಲುವು ಸಾಧಿಸಿದ್ದ ಧನಂಜಯ ಕುಮಾರ್, ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸೇರಿ ಸದ್ದು ಮಾಡಿದ್ದರು. ವಿ. ಧನಂಜಯ ಕುಮಾರ್ ಕಳೆದ ಹಲವಾರು ದಿನಗಳಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದರು.

Dhananjaya Kumar died at Unity Hospital in Mangalore

ವೇಣೂರಿನ ಜೈನ ಮನೆತನದಲ್ಲಿ ಜನಿಸಿದ ಧನಂಜಯ್ ಕುಮಾರ್ ಉಡುಪಿ ವೈಕುಂಠ ಬಾಳಿಗ ಕಾಲೇಜಿನಲ್ಲಿ ಕಾನೂನು ಪದವಿ ಪಡೆದು ಮಂಗಳೂರಿನಲ್ಲಿ ವೃತ್ತಿ ಅರಂಭಿಸಿದರು. ಆ ನಂತರ ಜನಸಂಘದ ಮೂಲಕ ರಾಜಕೀಯ ಪ್ರವೇಶಿಸಿದರು. ಬಳಿಕ ಬಿಜೆಪಿ ಮಂಗಳೂರು ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ, ಯುವಮೋರ್ಚಾದ ರಾಜ್ಯಾಧ್ಯಕ್ಷ, ಅಖಿಲ ಭಾರತ ಉಪಾಧ್ಯಕ್ಷ ಸಹಿತ ಹಲವು ಹುದ್ದೆಗಳನ್ನು ನಿರ್ವಹಿಸಿದರು.

 ಕೇಂದ್ರ ಮಾಜಿ ಸಚಿವ ಧನಂಜಯ ಕುಮಾರ್ ಇನ್ನಿಲ್ಲ ಕೇಂದ್ರ ಮಾಜಿ ಸಚಿವ ಧನಂಜಯ ಕುಮಾರ್ ಇನ್ನಿಲ್ಲ

1983ರ ಚುನಾವಣೆಯಲ್ಲಿ ಮಂಗಳೂರು ಕ್ಷೇತ್ರದಿಂದ ಗೆದ್ದು ಶಾಸಕರಾದರು.ಬಳಿಕ 85ರ ಚುನಾವಣೆಯಲ್ಲಿ ಪರಾಭವಗೊಂಡರು. 1989 ರಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದರು. ಆದರೆ 1991 ರಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಬಿ ಜನಾರ್ಧನ ಪೂಜಾರಿ ಅವರನ್ನು ಸೋಲಿಸುವ ಮೂಲಕ ಪ್ರಥಮ ಬಾರಿಗೆ ಸಂಸದರಾದರು.

Dhananjaya Kumar died at Unity Hospital in Mangalore

ಆ ನಂತರ 1996, 98, 99ರ ಚುನಾವಣೆಯಲ್ಲಿ ಸತತವಾಗಿ ಗೆಲುವು ಸಾಧಿಸಿದರು. 1998ರಲ್ಲಿ ವಾಜಪೇಯಿ ಸರಕಾರದಲ್ಲಿ ಕ್ಯಾಬಿನೆಟ್ ಸಚಿವ, 1999 ರಲ್ಲಿ ಕೇಂದ್ರದ ಹಣಕಾಸು ಖಾತೆ ರಾಜ್ಯ ಸಚಿವರಾಗಿದ್ದ ವಿ.ಧನಂಜಯ ಕುಮಾರ್, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಕಟ್ಟಾ ಬೆಂಬಲಿಗ.

English summary
Former Minister Dhananjaya Kumar died at Unity Hospital in Mangalore today afternoon.He had been suffered from kidney problems for the last few years.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X