ನಿಲ್ಲದ ಧರ್ಮ ದಂಗಲ್‌: ಕುಕ್ಕೆ ಷಷ್ಠಿಯಲ್ಲಿ ಅನ್ಯಮತೀಯರ ವ್ಯಾಪಾರ ಬಹಿಷ್ಕಾರಕ್ಕೆ ಒತ್ತಾಯ

ಮಂಗಳೂರು, ಡಿಸೆಂಬರ್‌ 15: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧರ್ಮದಂಗಲ್‌ ಸದ್ಯಕ್ಕೆ ಅಂತ್ಯಗೊಳ್ಳುವಂತೆ ಕಾಣುತ್ತಿಲ್ಲ. ಜಿಲ್ಲೆಯಲ್ಲಿ ಒಂದಾದ ಮೇಲೊಂದು ದೇವಸ್ಥಾನಗಳ ಜಾತ್ರೆ ಬರುತ್ತಿದ್ದು, ಈ ಜಾತ್ರೆಗಳಲ್ಲಿ ಅನ್ಯಮತೀಯರ ವ್ಯಾಪಾರಕ್ಕೆ ಬಹಿಷ್ಕಾರ ಹಾಕುವ ಮೂಲಕ ಧರ್ಮ ದಂಗಲ್‌ ಮುಂದುವರಿದುಕೊಂಡೇ ಬರುತ್ತಿದೆ.

ಕಳೆದ ವರ್ಷದಂತೆ ಈ ವರ್ಷವೂ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿಯ ಜಾತ್ರೆಯಲ್ಲಿ ಅನ್ಯಮತೀಯರ ವ್ಯಾಪಾರಕ್ಕೆ ಬಹಿಷ್ಕಾರದ ಕೂಗು ಕೇಳಿಬರುತ್ತಿದೆ. ಡಿಸೆಂಬರ್​ 18 ರಂದು ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿ ನಡೆಯಲಿದ್ದು, ಲಕ್ಷಾಂತರ ಭಕ್ತರು ಭಾಗಿಯಾಗಲಿದ್ದಾರೆ. ಈ ಸಂದರ್ಭದಲ್ಲಿ ದೇವಾಲಯದ ಸುತ್ತ ಅನ್ಯಮತೀಯರ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂದೂ‌ ಸಂಘಟನೆಗಳ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

Dharma Dangal: Denial Of Business To Muslim Traders In Kukke Subramanya Champa Shashti

ಚಂಪಾ ಷಷ್ಠಿ ಜಾತ್ರೆಯಲ್ಲಿ ದೇವಾಲಯಗಳ ಬಳಿ ಹಿಂದೂಗಳನ್ನು ಹೊರತುಪಡಿಸಿ ಬೇರೆಯವರಿಗೆ ವ್ಯಾಪಾರಕ್ಕೆ ಅವಕಾಶ ಕೊಡಬಾರದು ಎಂದು ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯ ನಿರ್ವಹಣಾ ಅಧಿಕಾರಿಗೆ ಹಿಂದೂ‌ ಸಂಘಟನೆಗಳ ಕಾರ್ಯಕರ್ತರು ಮನವಿ ಪತ್ರ ಸಲ್ಲಿಸಿದ್ದಾರೆ. ಅಲ್ಲದೇ ದೇವಾಲಯದ ಸಮೀಪ ಬ್ಯಾನರ್‌ ಕೂಡ ಅಳವಡಿಸಿದ್ದಾರೆ.

ಹಿಂದೂ ಹಿತ ರಕ್ಷಣಾ ವೇದಿಕೆ ಸುಬ್ರಹ್ಮಣ್ಯದಿಂದ ಬ್ಯಾನರ್‌ ಅಳವಡಿಸಲಾಗಿದ್ದು, 'ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಚಂಪಾಷಷ್ಠಿಯ ಸಂದರ್ಭದಲ್ಲಿ ಈ ಪರಿಸರದಲ್ಲಿ ಅನ್ಯಮತೀಯ ವ್ಯಾಪಾರ ವಹಿವಾಟುಗಳನ್ನು ನಿಷೇಧಿಸಲಾಗಿದೆ' ಎಂದು ಬರೆದು ಬ್ಯಾನರ್‌ ಹಾಕಲಾಗಿದೆ. ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ದೇವಸ್ಥಾನಗಳಲ್ಲೇ ಈ ರೀತಿಯ ಬಹಿಷ್ಕಾರದಂತಹ ಕ್ರಮ ನಡೆಯುತ್ತಿರುವುದು ಬೀದಿ ಬದಿ ವ್ಯಾಪಾರಸ್ಥರ ಅಸಮಾಧಾನಕ್ಕೆ ಕಾರಣವಾಗಿದೆ.

Dharma Dangal: Denial Of Business To Muslim Traders In Kukke Subramanya Champa Shashti

ಇನ್ನು ಈ ಬಾರಿ ಕುಡುಪು ಶ್ರೀಅನಂತ ಪದ್ಮನಾಭ ದೇವಸ್ಥಾನದ ಷಷ್ಠಿ ಮಹೋತ್ಸವದಲ್ಲಿ ಸಹ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ನಿರಾಕರಣೆ ಮಾಡಿರುವ ಆರೋಪ ಕೇಳಿಬಂದಿತ್ತು. ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಈ ದೇವಸ್ಥಾನದ ಪ್ರಾಂಗಣದ ಹೊರಗಡೆ ಷಷ್ಟಿ ಮಹೋತ್ಸವದ ಸಂದರ್ಭದಲ್ಲಿ ಕೋಟ್ಯಂತರ ರೂಪಾಯಿ ವ್ಯವಹಾರ ನಡೆಯುತ್ತದೆ. ಆದರೆ ಇಲ್ಲಿ ಧಾರ್ಮಿಕ ತಾರತಮ್ಯ ನಡೆಯುತ್ತಿದೆ ಎಂದು ಎಂದು ಬೀದಿ ಬದಿ ವ್ಯಾಪಾರಸ್ಥರು ಆರೋಪಿಸಿದ್ದಾರೆ.

ಕಳೆದೊಂದು ವರ್ಷದಿಂದ ದಕ್ಷಿಣ ಕನ್ನಡ ದೇವಾಲಯಗಳ ಜಾತ್ರೆಯಲ್ಲಿ ಈ ರೀತಿ ಧಾರ್ಮಿಕ ತಾರತಮ್ಯ ನಡೆಯುತ್ತಲೇ ಇದೆ. ಕಾಂಗ್ರೆಸ್ ಸರ್ಕಾರ ಕೋಮುವಾದಿಗಳ ಕಪಿಮುಷ್ಟಿಯಲ್ಲಿ ನಲುಗುತ್ತಿದೆ. ಜಾತ್ರೆಗಳನ್ನೇ ನಂಬಿ ಬದುಕುವ ಸಂತೆ ವ್ಯಾಪಾರಿಗಳ ಬದುಕುವ ಹಕ್ಕನ್ನು ರಕ್ಷಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ವಿಫಲವಾಗುತ್ತಿದೆ ಎಂದು ಮುಸ್ಲಿಂ ವ್ಯಾಪಾರಿಗಳು ಕಿಡಿಕಾರಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+