ಭಾನುವಾರ ಧರ್ಮಸ್ಥಳಕ್ಕೆ ಭೇಟಿ ನೀಡುವ ಭಕ್ತರ ಗಮನಕ್ಕೆ

ದಕ್ಷಿಣ ಕನ್ನಡ, ಜೂನ್ 16 : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆಯುವ ಸಮಯವನ್ನು ಪರಿಷ್ಕರಣೆ ಮಾಡಲಾಗಿದೆ. ಜೂನ್ 21ರ ಭಾನುವಾರ ಸೂರ್ಯ ಗ್ರಹಣ ಇರುವ ಕಾರಣ ಸಮಯ ಬದಲಾವಣೆಯಾಗಿದೆ.

ಭಾನುವಾರ ಭಕ್ತಾದಿಗಳು ಬೆಳಗ್ಗೆ 9 ರಿಂದ ಸಂಜೆ 4 ಗಂಟೆ ತನಕ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆಯಲು ಅವಕಾಶವಿಲ್ಲ ಎಂದು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಸೂರ್ಯ ಗ್ರಹಣದ ಕಾರಣ ಬೆಳಗ್ಗೆ ದೇವಾಲಯ ಬಾಗಿಲು ಮುಚ್ಚಿರುತ್ತದೆ.

ಭಕ್ತಾದಿಗಳು ಬೆಳಗ್ಗೆ 5.30ರಿಂದ 9 ಗಂಟೆಯ ತನಕ ಮತ್ತು ಸಾಯಂಕಾಲ 4 ಗಂಟೆಯಿಂದ ರಾತ್ರಿ 9 ಗಂಟೆಯ ತನಕ ದೇವರ ದರ್ಶನ ಪಡೆಯಲು ಅವಕಾಶ ನೀಡಲಾಗಿದೆ. ಭಾನುವಾರ ಹೆಚ್ಚಿನ ಭಕ್ತರು ಆಗಮಿಸುವುದರಿಂದ ಸಮಯ ಪರಿಷ್ಕರಣೆ ಬಗ್ಗೆ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ.

Dharmasthala Darshan Timings Changed On June 21

ಈ ವರ್ಷದ ಮೊದಲ ಸೂರ್ಯ ಗ್ರಹಣ ಜೂನ್ 21ರ ಭಾನುವಾರ ನಡೆಯಲಿದೆ. ಅಂದು ಸೂರ್ಯನು ಪ್ರಕಾಶಮಾನವಾದ ಉಂಗುರದಂತೆ ಕಾಣುತ್ತಾನೆ. ಪ್ರಪಂಚದಾದ್ಯಂತ ಜನರು ಈ ಸೂರ್ಯ ಗ್ರಹಣವನ್ನು ವೀಕ್ಷಿಸಬಹುದಾಗಿದೆ.

ಚಂದ್ರನ ನೆರಳು ಸೂರ್ಯನ ಶೇ 99ರಷ್ಟು ಭಾಗವನ್ನು ಆವರಿಸಿಕೊಳ್ಳುತ್ತದೆ. ಪ್ರತಿ 18 ವರ್ಷಗಳಿಗೊಮ್ಮೆ ಇಂತಹ ಗ್ರಹಣ ನಡೆಯುತ್ತದೆ ಎಂದು ಖಗೋಳ ತಜ್ಞರು ಹೇಳಿದ್ದಾರೆ. ಜನರು ಗ್ರಹಣ ವೀಕ್ಷಿಸಲು ಕಾತರದಿಂದ ಕಾಯುತ್ತಿದ್ದಾರೆ.

ಭಾನುವಾರ ಬೆಳಗ್ಗೆ 10.31ಕ್ಕೆ ಗ್ರಹಣ ಆರಂಭವಾಗಲಿದ್ದು, ಮಧ್ಯಾಹ್ನ 2.30ಕ್ಕೆ ಕೊನೆಗೊಳ್ಳಲಿದೆ. ಗ್ರಹಣವು 12.18ಕ್ಕೆ ಪೂರ್ಣ ಪ್ರಮಾಣದಲ್ಲಿ ಗೋಚರವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+