'ಲಕ್ಷದೀಪೋತ್ಸವ: ಇನ್ನೊಬ್ಬರಿಗೆ ಬೆಳಕಾಗುವ ಕಾರ್ಯ'
ಧರ್ಮಸ್ಥಳ, ಡಿ. 08: 'ಹಣತೆ ತನಗಾಗಿ ಬೆಳಕು ನೀಡುವುದಿಲ್ಲ. ಜಗತ್ತಿನ ಕತ್ತಲನ್ನು ಹೊಡೆದೊಡಿಸಲು ಬೆಳಗುತ್ತದೆ. ಧರ್ಮಸ್ಥಳದ ಲಕ್ಷದೀಪೋತ್ಸವದಲ್ಲಿ ಇನ್ನೊಬ್ಬರಿಗೆ ಬೆಳಕಾಗುವ ಕಾರ್ಯ ನಡೆದಿದೆ. ಸಮಾಜದ ಹಿತಕ್ಕಾಗಿ ಕ್ಷೇತ್ರದ ವತಿಯಿಂದ ಉತ್ತಮ ಕಾರ್ಯಗಳು ನಡೆಯುತ್ತಿವೆ' ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾ ತಿಮ್ಮಪ್ಪಗೌಡ ಹೇಳಿದರು.
ಡಿಸೆಂಬರ್ 6 ರಿಂದ 11 ರ ವರೆಗೆ ನಡೆಯುವ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ರಾಜ್ಯಮಟ್ಟದ 38-ನೇ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡುತ್ತಿದ್ದರು. [ಗ್ಯಾಲರಿ: ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ]
ಎಲ್ಲಾ ಅಸಮಾನತೆಗಳನ್ನು ಕಡೆಗಣಿಸಿ ನಾವೆಲ್ಲಾ ಒಂದೇ ಎಂಬ ಭಾವನೆಯಿಂದ ಬೆರೆತಾಗ ಮಾತ್ರ ದೇಶದ ಉನ್ನತಿ ಸಾಧ್ಯ. ಇದಕ್ಕಾಗಿ ಗ್ರಾಮಮಟ್ಟದಲ್ಲೇ ಪ್ರಯತ್ನಗಳು ನಡೆಯಬೇಕು. ಅಂತಹ ವಾತಾವರಣ ಧರ್ಮಸ್ಥಳದಲ್ಲಿದೆ ಎಂದರು. [ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಸಮಯ ಬದಲಾವಣೆ]
ಸಮಾರಂಭದ ಅಧ್ಯಕ್ಷತೆ ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಗ್ರಾಮೀಣ ಅಭಿವೃದ್ಧಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಲವು ಜನಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದರ ಸಫಲತೆಗೆ ಸಾಕ್ಷಿಯಾಗಿ ಇದೀಗ ರಾಜ್ಯದಾದ್ಯಂತ ಗ್ರಾಮಾಭಿವೃದ್ಧಿ ಯೋಜನೆ ತನ್ನ ವ್ಯಾಪ್ತಿ ವಿಸ್ತರಿಸಿಕೊಳ್ಳುತ್ತಿದೆ ಎಂದರು.
ಲಕ್ಷದೀಪೋತ್ಸವ ಸ್ವಾಗತ ಸಮಿತಿ ಹಾಗೂ ಉಜಿರೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಪ್ರೊ. ಎಸ್. ಪ್ರಭಾಕರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರಾಜ್ಯಮಟ್ಟದ 38ನೇ ವಸ್ತು ಪ್ರದರ್ಶನ
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾ ತಿಮ್ಮಪ್ಪಗೌಡ ಅವರು ಡಿಸೆಂಬರ್ 6 ರಿಂದ 11 ರ ವರೆಗೆ ನಡೆಯುವ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ರಾಜ್ಯಮಟ್ಟದ 38-ನೇ ವಸ್ತು ಪ್ರದರ್ಶನ ಉದ್ಘಾಟಿಸಿದರು.

ವಸ್ತುಪ್ರದರ್ಶನ ಮಳಿಗೆಗಳನ್ನು ವೀಕ್ಷಿಸಿದರು
ಉದ್ಘಾಟನೆಯ ನಂತರ ಡಾ. ಹೆಗ್ಗಡೆ ಮತ್ತು ಗಣ್ಯರು ವಸ್ತುಪ್ರದರ್ಶನ ಮಳಿಗೆಗಳನ್ನು ವೀಕ್ಷಿಸಿದರು

ಶಾಸ್ತ್ರೀಯ ಸಂಗೀತ ಕಾರ್ಯಕ್ರಮ
ವಸ್ತು ಪ್ರದರ್ಶನ ವೇದಿಕೆಯಲ್ಲಿ ಕು. ರಂಜಿತಾ ಎಲ್ಲೂರು ಮತ್ತು ರಕ್ಷಿತಾ ಎಲ್ಲೂರು ಅವರಿಂದ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಿತು.

ಸಮಾರಂಭದ ಅಧ್ಯಕ್ಷತೆ ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ
ಗ್ರಾಮೀಣ ಅಭಿವೃದ್ಧಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಲವು ಜನಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದರ ಸಫಲತೆಗೆ ಸಾಕ್ಷಿಯಾಗಿ ಇದೀಗ ರಾಜ್ಯದಾದ್ಯಂತ ಗ್ರಾಮಾಭಿವೃದ್ಧಿ ಯೋಜನೆ ತನ್ನ ವ್ಯಾಪ್ತಿ ವಿಸ್ತರಿಸಿಕೊಳ್ಳುತ್ತಿದೆ ಎಂದರು












Click it and Unblock the Notifications