• search
 • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೋವಿಡ್ 19; ದಕ್ಷಿಣ ಕನ್ನಡ ಜಿಲ್ಲೆಗೆ ಸಿಹಿ ಸುದ್ದಿ

|

ಮಂಗಳೂರು, ಸೆಪ್ಟೆಂಬರ್ 22: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 233 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಕರ್ನಾಟಕದಲ್ಲಿ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 5,26,876ಕ್ಕೆ ಏರಿಕೆಯಾಗಿದೆ.

ಕರ್ನಾಟಕದಲ್ಲಿ ಸೋಮವಾರ ದಾಖಲಾದ ಹೊಸ ಕೋವಿಡ್ ಪ್ರಕರಣಗಳು 7,339. ಇವುಗಳಲ್ಲಿ 233 ಹೊಸ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯದು. ಈ ಮೂಲಕ ಜಿಲ್ಲೆಯಲ್ಲಿನ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 20367.

ಬೆಂಗಳೂರಿನಲ್ಲಿ ದಕ್ಷಿಣ ಭಾರತದ ಅತಿದೊಡ್ಡ COVID ಪರೀಕ್ಷೆ ಲ್ಯಾಬ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆಗಿಂತ ಆಸ್ಪತ್ರೆ/ ಹೋಂ ಐಸೋಲೇಷನ್‌ನಲ್ಲಿದ್ದು ಗುಣಮುಖರಾದವರ ಸಂಖ್ಯೆಯೇ ಅಧಿಕವಾಗಿದೆ. ಕರ್ನಾಟಕದಲ್ಲಿ ಸೋಮವಾರ 9,925 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.

ಕೋವಿಡ್-19 ವಿಮೆ ರಕ್ಷಣೆಯಲ್ಲಿ ದಕ್ಷಿಣ ಭಾರತವೇ ಮುಂದು

ಜಿಲ್ಲೆಯಲ್ಲಿ ಮಂಗಳೂರು ತಾಲೂಕಿನಲ್ಲಿ ಹೆಚ್ಚು ಪ್ರಕರಣಗಳಿವೆ. ಎರಡನೇ ಸ್ಥಾನದಲ್ಲಿ ಬಂಟ್ವಾಳ ತಾಲೂಕು ಇದೆ. ದಕ್ಷಿಣ ಕನ್ನಡ ಜಿಲ್ಲೆ ಕೇರಳ ರಾಜ್ಯದೊಂದಿಗೆ ಗಡಿಯನ್ನು ಹಂಚಿಕೊಂಡಿದೆ.

ಕರ್ನಾಟಕದಲ್ಲಿ 7339 ಹೊಸ ಕೋವಿಡ್ ಪ್ರಕರಣ ದಾಖಲು

ದಕ್ಷಿಣ ಕನ್ನಡ ಕೋವಿಡ್ ವರದಿ

ದಕ್ಷಿಣ ಕನ್ನಡ ಕೋವಿಡ್ ವರದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 233 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರು 20367. ಸೋಮವಾರ ಗುಣಮುಖರಾದವರು 404, ಇದುವರೆಗೂ ಗುಣಮುಖರಾದವರು 15507. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 4370. ಇದುವರೆಗೂ ಜಿಲ್ಲೆಯಲ್ಲಿ 488 ಜನರು ಮೃತಪಟ್ಟಿದ್ದಾರೆ.

ಐಎಲ್‌ಐ ಪ್ರಕರಣಗಳ ಸಂಖ್ಯೆ

ಐಎಲ್‌ಐ ಪ್ರಕರಣಗಳ ಸಂಖ್ಯೆ

"ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಐಎಲ್‌ಐ ಪ್ರಕರಣಗಳಿಂದಾಗಿ ಹೊಸ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಸೋಮವಾರ ಪತ್ತೆಯಾದ ಪ್ರಕರಣಗಳಲ್ಲಿ 105 ಐಎಲ್‌ಐಗೆ ಸಂಬಂಧಿಸಿದವು" ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ. ಹೇಳಿದ್ದಾರೆ.

ಮಂಗಳೂರಿನಲ್ಲಿ ಹೆಚ್ಚು

ಮಂಗಳೂರಿನಲ್ಲಿ ಹೆಚ್ಚು

ಮಂಗಳೂರು ತಾಲೂಕಿನಲ್ಲಿ ಹೆಚ್ಚು ಕೋವಿಡ್ ಪ್ರಕರಣಗಳಿವೆ. ಮಂಗಳೂರು 122, ಬಂಟ್ವಾಳ 53, ಬೆಳ್ತಂಗಡಿ 10, ಪುತ್ತೂರು 6, ಸುಳ್ಯದಲ್ಲಿ 5 ಹೊಸ ಪ್ರಕರಣ ಪತ್ತೆಯಾಗಿದೆ ಎಂದು ಜಿಲ್ಲಾಡಳಿತ ಹೇಳಿದೆ.

  Chahal ಎಸೆತಕ್ಕೆ Sun Risers ತತ್ತರ!! | Oneindia Kannada
  ಸಕ್ರಿಯ ಪ್ರಕರಣಗಳ ಸಂಖ್ಯೆ

  ಸಕ್ರಿಯ ಪ್ರಕರಣಗಳ ಸಂಖ್ಯೆ

  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 4,370 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಇವರಲ್ಲಿ ಕೆಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲವರು ಹೋಂ ಐಸೊಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

  English summary
  In Dakshina Kannada district discharged number is more than new COVID 19 cases. on Monday total 404 patients recovered and new cases is 233.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X