ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಕ್ಷಿಣ ಕನ್ನಡ ಜೆಡಿಎಸ್ ಪಾಳಯದಲ್ಲಿ ಭುಗಿಲೆದ್ದ ಭಿನ್ನಮತ

|
Google Oneindia Kannada News

ಮಂಗಳೂರು, ಏಪ್ರಿಲ್ 02:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣಾ ಹೊತ್ತಲ್ಲೇ ಜಿಲ್ಲೆಯ ಜೆಡಿಎಸ್ ಪಾಳಯದಲ್ಲಿ ಭಿನ್ನಮತ ಭುಗಿಲೆದ್ದಿದೆ. ಜೆಡಿಎಸ್ ಜಿಲ್ಲಾಧ್ಯಕ್ಷ ಮುಹಮ್ಮದ್ ಕುಂಇ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.ಈ ಹಿನ್ನೆಲೆಯಲ್ಲಿ ಜೆಡಿಎಸ್ ನ ಒಂದು ಬಣ ಚುನಾವಣೆ ಸಂದರ್ಭದಲ್ಲಿ ತಿರುಗಿ ಬೀಳುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಜಿಲ್ಲಾಧ್ಯಕ್ಷ ಮುಹಮ್ಮದ್ ಕುಂಇ್ ವಿರುದ್ಧ ಜೆಡಿಎಸ್ ಮುಖಂಡ ಕೈಲಾಸ್ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಹಮ್ಮದ್ ಕುಂಇ್ ವಿರುದ್ಧ ಕಿಡಿಕಾರಿದ ಐಸಿ ಕೈಲಾಸ್ ಗೌಡ, ಜಿಲ್ಲಾಧ್ಯಕ್ಷ ಮುಹಮ್ಮದ್ ಕುಂಇ್ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ. ಒಕ್ಕಲಿಗರ ಪಕ್ಷದಲ್ಲೇ ಇದ್ದು, ಒಕ್ಕಲಿಗರ ಬಗ್ಗೆ ಹಗುರವಾಗಿ ಮಾತಾಡುತ್ತಿದ್ದಾರೆ ಎಂದು ದೂರಿದ್ದಾರೆ.

ದಕ್ಷಿಣ ಕನ್ನಡದಲ್ಲಿ ಬಿಜೆಪಿ ಕಟ್ಟಿಹಾಕಲು ಕೈ-ತೆನೆ ಜಂಟಿ ಚುನಾವಣಾ ಸಮಿತಿ ರಚನೆದಕ್ಷಿಣ ಕನ್ನಡದಲ್ಲಿ ಬಿಜೆಪಿ ಕಟ್ಟಿಹಾಕಲು ಕೈ-ತೆನೆ ಜಂಟಿ ಚುನಾವಣಾ ಸಮಿತಿ ರಚನೆ

ಮುಹಮ್ಮದ್ ಕುಂಇ್ ಜಿಲ್ಲೆಯಲ್ಲಿ ಪಕ್ಷದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಮೈತ್ರಿ ಧರ್ಮದ ವಿರುದ್ಧ ನಡೆದುಕೊಳ್ಳುತ್ತಿದ್ದಾರೆ. ಒಕ್ಕಲಿಗರ ಬಗ್ಗೆ ಹಗುರವಾಗಿ‌ ಮಾತನಾಡಿರುವ ಮುಹಮ್ಮದ್ ಕುಂಇ್ ಅವರನ್ನು ಈ ಕೂಡಲೇ ಪಕ್ಷದಿಂದ ವಜಾ ಮಾಡಬೇಕು ಎಂದು ಜೆಡಿಎಸ್ ಹೈಕಮಾಂಡ್ ಗೆ ಆಗ್ರಹಿಸಿದ್ದಾರೆ. ಅವರನ್ನು ವಜಾ ಗೊಳಿಸದಿಂದ್ದರೆ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಕೈಲಾಸ್ ಗೌಡ ಎಚ್ಚರಿಸಿದ್ದಾರೆ.

Dispute in the Dakshina Kannada JDS

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಯುವ ಅಭ್ಯರ್ಥಿ ಮಿಥುನ್ ರೈ ಅವರನ್ನು ಗೆಲ್ಲಿಸಲು ಕಾಂಗ್ರೆಸ್ ಹಾಗೂ ಜೆಡಿಎಸ್ ಜಂಟಿ ಚುನಾವಣಾ ಸಮಿತಿ ರಚಿಸಿದೆ. ಈ ಸಮಿತಿಯ ನೇತೃತ್ವವನ್ನು ಮಾಜಿ ಸಚಿವ ರಮಾನಾಥ್ ರೈ ಅವರ ಹೆಗಲಿಗೇರಿಸಲಾಗಿದೆ.

 ಜನಾರ್ದನ ಪೂಜಾರಿ ವಿರುದ್ಧ ಕ್ರಮಕ್ಕೆ ಜೆಡಿಎಸ್ ಒತ್ತಾಯ ಜನಾರ್ದನ ಪೂಜಾರಿ ವಿರುದ್ಧ ಕ್ರಮಕ್ಕೆ ಜೆಡಿಎಸ್ ಒತ್ತಾಯ

ಈ ಹಿನ್ನೆಲೆಯಲ್ಲಿ ಮೈತ್ರಿ ನಿಯಮದಂತೆ ಎರಡೂ ಪಕ್ಷಗಳ ಮುಖಂಡರು, ಕಾರ್ಯಕರ್ತರು ಜಂಟಿ ಸಭೆ, ಸಮಾವೇಶ ಹಾಗೂ ಮತಯಾಚನೆ ಮಾಡಬೇಕು ಎಂದಿದೆ. ಆದರೆ ಈ ನಡುವೆ ಜೆಡಿಎಸ್ ನಲ್ಲಿ ಭುಗಿಲೆದ್ದಿರುವ ಭಿನ್ನಮತ ಕಾಂಗ್ರೆಸ್ ಕಂಗೆಡಿಸಿದೆ. ಜೆಡಿಎಸ್ ನಲ್ಲಿ ಸ್ಪೋಟಗೊಂಡಿರುವ ಭಿನ್ನಮತವನ್ನು ಪಕ್ಷದ ಹಿರಿಯರು ಶಮನಗೊಳಿಸದಿದ್ದರೆ ಇದು ಚುನಾವಣೆಯ ಫಲಿತಾಂಶದ ಮೇಲೆ ಪರಿಣಾಮ ಬೀರಲಿದೆ ಎಂದು ಅಂದಾಜಿಸಲಾಗುತ್ತಿದೆ.

English summary
Political parties kick stared their Campaign in Dakshina Kannada lok Sabha constituency.In between this there is a dispute came up in district JDS committee. JDS leader Kailash Gowda urged JDS senior leaders to dismiss district president Mohammad Kunhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X