ರಾಮ ಮಂದಿರ ವಿಚಾರದಲ್ಲಿ ರಾಜಕೀಯ ಬೇಡ: ಬಿ.ಜನಾರ್ಧನ ಪೂಜಾರಿ
ಮಂಗಳೂರು, ಡಿಸೆಂಬರ್ 02:ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣ ಆಗಿಯೇ ಆಗುತ್ತದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ಧನ ಪೂಜಾರಿ ಹೇಳಿದರು.
ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ರಾಮ ಮಂದಿರ ನಿರ್ಮಾಣಕ್ಕೆ ಎಲ್ಲರ ಒಪ್ಪಿಗೆ ಇದೆ. ರಾಮ ಮಂದಿರ ನಿರ್ಮಾಣವನ್ನು ಮುಸ್ಲಿಮರು, ಕ್ರಿಶ್ಚಿಯನ್ನರು ಇಬ್ಬರೂ ಬಯಸುತ್ತಾರೆ. ಮಂದಿರ ನಿರ್ಮಾಣಕ್ಕೆ ಯಾರೂ ವಿರೋಧ ಮಾಡುವುದಿಲ್ಲ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ರಾಮ ಮಂದಿರ ವಿಚಾರದಲ್ಲಿ ಬಿಜೆಪಿಯವರು ಸುಮ್ಮನೆ ಗೊಂದಲ ಸೃಷ್ಟಿಸುತ್ತಿದ್ದಾರೆ. ದೇಶದಲ್ಲಿ ಈ ರೀತಿ ಗೊಂದಲ ಸೃಷ್ಟಿ ಮಾಡುವುದು ಬೇಡ. ಮಂದಿರ ವಿಚಾರದಲ್ಲಿ ರಾಜಕೀಯ ಬೇಡ ಎಂದು ಅವರು ಹೇಳಿದರು.

ಇತ್ತೀಚೆಗೆ ಮಂಗಳೂರಿನಲ್ಲಿ ವಿಶ್ವ ಹಿಂದೂ ಪರಿಷತ್ ವತಿಯಿಂದ ರಾಮ ಮಂದಿರ ನಿರ್ಮಾಣಕ್ಕೆ ಒತ್ತಾಯಿಸಿ ಆಯೋಜಿಸಲಾಗಿದ್ದ ಬೃಹತ್ ಜನಾಗ್ರಹ ಸಮಾವೇಶದಲ್ಲಿ ಪೇಜಾವರ ಶ್ರೀಗಳು ಮಂದಿರ ನಿರ್ಮಾಣ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ರಾಮ ಮಂದಿರ ನಿರ್ಮಾಣಕ್ಕೆ ಮುಸ್ಲಿಮರೂ ವಿರೋಧ ವ್ಯಕ್ತಪಡಿಸುವುದಿಲ್ಲ ಎಂದು ಹೇಳಿಕೆ ನೀಡಿದ್ದರು.












Click it and Unblock the Notifications