ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವೈದ್ಯರ ಮುಷ್ಕರಕ್ಕೆ ಕರಾವಳಿಯಲ್ಲಿ ಬೆಂಬಲ; ಇಂದು ಒಪಿಡಿ ಸೇವೆ ಇಲ್ಲ

|
Google Oneindia Kannada News

ಮಂಗಳೂರು ಜೂನ್ 17: ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲಿನ ಹಲ್ಲೆ ಪ್ರಕರಣವನ್ನು ವಿರೋಧಿಸಿ ಭಾರತೀಯ ವೈದ್ಯರ ಸಂಘ ಕರೆ ನೀಡಿರುವ ಮುಷ್ಕರಕ್ಕೆ ದೇಶದೆಲ್ಲೆಡೆ ಬೆಂಬಲ ವ್ಯಕ್ತವಾಗಿದೆ. ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ವೈದ್ಯರು ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ.

ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಮರಳಲು ವೈದ್ಯರಿಗೆ ಕುಮಾರಸ್ವಾಮಿ ಮನವಿಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಮರಳಲು ವೈದ್ಯರಿಗೆ ಕುಮಾರಸ್ವಾಮಿ ಮನವಿ

ವೈದ್ಯರ ಮುಷ್ಕರದ ಹಿನ್ನೆಲೆಯಲ್ಲಿ ಮಂಗಳೂರಿನ ಎಲ್ಲ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್ ಮಾಡಲಾಗಿದೆ. ಎಮರ್ಜೆನ್ಸಿ ಹೊರತುಪಡಿಸಿ ಖಾಸಗಿ ವೈದ್ಯರ ಸೇವೆಯನ್ನು ಒಂದು ದಿನಕ್ಕೆ ಸ್ಥಗಿತ ಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚುವರಿ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಮಂಗಳೂರಿನ ಸರ್ಕಾರಿ ವೆನ್ಲಾಕ್ ಮತ್ತು ಲೇಡಿಗೋಷನ್ ಆಸ್ಪತ್ರೆಗಳಲ್ಲಿ ಬದಲಿ ವ್ಯವಸ್ಥೆ ಮಾಡಲಾಗಿದೆ.

ಇಂದು ಕರ್ನಾಟಕದಲ್ಲೂ ವೈದ್ಯರ ಮುಷ್ಕರ, ಯಾವ ಸೇವೆ ಲಭ್ಯ, ಯಾವುದು ಇಲ್ಲ?ಇಂದು ಕರ್ನಾಟಕದಲ್ಲೂ ವೈದ್ಯರ ಮುಷ್ಕರ, ಯಾವ ಸೇವೆ ಲಭ್ಯ, ಯಾವುದು ಇಲ್ಲ?

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಖಾಸಗಿ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ ಒಪಿಡಿ ಸಹಿತ ಯಾವುದೇ ಸೇವೆ ನೀಡಲಾಗುವುದಿಲ್ಲ. ವೈದ್ಯರ ಮುಷ್ಕರಕ್ಕೆ ಜಿಲ್ಲೆಯ ಆಯುಷ್ ಫೌಂಡೇಶನ್ ಕೂಡ ಬೆಂಬಲ ವ್ಯಕ್ತಪಡಿಸಿದೆ. ಮುಷ್ಕರದ ಬಗ್ಗೆ ಹಲವು ಆಸ್ಪತ್ರೆಗಳಲ್ಲಿ ಸೂಚನಾ ಫಲಕವನ್ನು ಅಳವಡಿಸಲಾಗಿದೆ.

Doctors of Dakshina Kannada and Udupi District supported IMA strike call

 ಭಾರತೀಯ ವೈದ್ಯಕೀಯ ಒಕ್ಕೂಟದಿಂದ ಜೂನ್ 17ಕ್ಕೆ ದೇಶಾದ್ಯಂತ ಧರಣಿ ಭಾರತೀಯ ವೈದ್ಯಕೀಯ ಒಕ್ಕೂಟದಿಂದ ಜೂನ್ 17ಕ್ಕೆ ದೇಶಾದ್ಯಂತ ಧರಣಿ

ಉಡುಪಿಯಲ್ಲಿ 20ರಷ್ಟು ಹೈಟೆಕ್ ನರ್ಸಿಂಗ್ ಹೋಂಗಳಿದ್ದು, 100 ಕ್ಲಿನಿಕ್‌ಗಳು ಹೊರರೋಗಿ ವಿಭಾಗ ಸೇವೆ ನೀಡುತ್ತಿಲ್ಲ.ಎಲ್ಲಾ ಆಸ್ಪತ್ರೆಗಳಲ್ಲಿ ಮತ್ತು ಕ್ಲಿನಿಕ್‌ಗಳಲ್ಲಿ ಅಪಘಾತ ಮತ್ತು ತುರ್ತು ಸೇವೆ ಲಭ್ಯವಿದೆ. ವೈದ್ಯರು, ಶುಶ್ರೂಷಕರು ಎಂದಿನಂತೆ ಕಾರ್ಯನಿರ್ವಹಿಸಲಿದ್ದು ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ತೊಂದರೆ ಅಗದಂತೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ.

English summary
Condemning assault on doctors in Kolkata, Doctors of Dakshina kannada and Udupi have been on one day long strike in support of IMA strike call
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X