ವಿದ್ಯುತ್ ಬಿಲ್ ಕಟ್ಟಬೇಡಿ, ನಿಮಗೆ ತೊಂದರೆಯಾದ್ರೆ ನಾನಿದ್ದೇನೆ: ಜನರಿಗೆ ಕಟೀಲ್ ಭರವಸೆ

ಮಂಗಳೂರು, ಮೇ, 26: ಜನತೆ ಕಾಂಗ್ರೆಸ್‌ನ ಆಶ್ವಾಸನೆಯನ್ನು ನಂಬಿ ಮತ ಹಾಕಿದ್ದಾರೆ. ಆದರೆ ಕಾಂಗ್ರೆಸ್ ರಾಜ್ಯದಲ್ಲಿ ಗೆದ್ದು ಇಂದಿಗೆ 20 ದಿನ ಕಳೆದರೂ ಯಾವುದೇ ಯೋಜನೆಗಳ ಬಗ್ಗೆ ಮಾತುಗಳಿಲ್ಲ. ಕರೆಂಟ್ ಬಿಲ್ ನೀಡಲು ಬರುವ ಸಿಬ್ಬಂದಿ ಮೇಲೆ ಹಲ್ಲೆಗಳಾಗುತ್ತಿದೆ‌. ರಾಜ್ಯದ ಜನತೆ ಸರಿ ಇದ್ದಾರೆ. ಹಾಗಾಗಿ ಬಿಲ್ ಕಟ್ಟಬಾರದೆಂದು ನಾನು ಕರೆ ಕೊಡುತ್ತೇನೆ ಎಂದು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.‌

ಚುನಾವಣೆ ಪೂರ್ವದಲ್ಲಿ ಐದು ಉಚಿತ ಭರವಸೆ ನೀಡುತ್ತೇವೆ ಎಂದು ಹೇಳುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಸರ್ಕಾರ ಬಂದ 24 ಗಂಟೆಯಲ್ಲಿ ಗ್ಯಾರಂಟಿ ಭರವಸೆಗಳನ್ನು ಅನುಷ್ಠಾನಕ್ಕೆ ತರುತ್ತೇವೆ ಅಂದಿದ್ದರು. ಸುಳ್ಳು ಆಶ್ವಾಸನೆ ಕೊಟ್ಟು ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೇರಿದೆ. ಯಾವುದೇ ಮಾನದಂಡಗಳಿಲ್ಲದೆ ಭಾಗ್ಯಗಳು ಸಿಗುತ್ತದೆಂದು ಹೇಳಿದ್ದರು. ಆದರೆ ಗ್ಯಾರಂಟಿ ಭರವಸೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ. ಎಲ್ಲಾದರೂ ಜನರಿಗೆ ತೊಂದರೆಯಾದಲ್ಲಿ ನಾವು ಸಮ್ಮುನಿರುವುದಿಲ್ಲ ಎಂದು ಹೇಳಿದರು.

Dont pay electricity bill, I am support for you: Nalin Kumar Kateel promises people

ಆರ್.ಎಸ್.ಎಸ್ ನಿಷೇಧದ ಬಗ್ಗೆ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ನಳಿನ್ ಕುಮಾರ್ ಕಟೀಲ್, ನೆಹರೂ, ಇಂದಿರಾ ಗಾಂಧಿ ಎಲ್ಲರೂ ನಿಷೇಧಕ್ಕೆ ಕೈ ಹಾಕಿ ಕೈ ಸುಟ್ಟುಕೊಂಡಿದಾರೆ. ಯಾವಾಗೆಲ್ಲಾ ಕಾಂಗ್ರೆಸ್ ಸರ್ಕಾರ ಇತ್ತೋ ಆಗೆಲ್ಲಾ ಇದಾಗಿದೆ ಎಂದು ವಾಗ್ದಾಳಿ ನಡೆಸಿದರು.

ಹಾಗೆಯೆ ನಿಷೇಧದ ಕೆಲಸ ಮಾಡಿದಾಗಲೆಲ್ಲಾ ದೇಶದಲ್ಲಿ ಕಾಂಗ್ರೆಸ್ ಸರ್ಕಾರವೇ ಬಂದಿಲ್ಲ. ಸಿದ್ದರಾಮಯ್ಯ‌ ಬಜರಂಗದಳ, ಆರ್.ಎಸ್.ಎಸ್ ನಿಷೇಧಕ್ಕೆ ಕೈ ಹಾಕಿದರೆ ಅವರ ರಾಜಕೀಯ ಮುಗಿಯುತ್ತದೆ. ಸಿದ್ದರಾಮಯ್ಯ ಮತ್ತು ಪ್ರಿಯಾಂಕ್ ಖರ್ಗೆಗೆ ತಾಕತ್ ಇದ್ದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರನ್ನು ಬಂಧಿಸಲಿ ಎಂದು ಸವಾಲೆಸಿದರು.

ಇವತ್ತು‌ ಕಾಂಗ್ರೆಸ್‌ನ ರಾಜನೀತಿಯಿಂದ ರಾಜ್ಯದಲ್ಲಿ ಅರಾಜಕತೆ ಪ್ರಾರಂಭವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ದ್ವೇಷದ ರಾಜಕಾರಣ ಪ್ರಾರಂಭ ಮಾಡಿದೆ. ಅಶ್ವತ್ಥ್‌ ನಾರಾಯಣ್ ಯಾವುದೋ ಸಂದರ್ಭದಲ್ಲಿ ತಪ್ಪಾಗಿ ಮಾತನಾಡಿದ್ದಾರೆ. ಅದಕ್ಕೆ ಕ್ಷಮೆ ಕೂಡ ಕೇಳಿದ್ದಾರೆ. ಈಗ ಅವರ ಮೇಲೆ ಎಫ್ಐಆರ್ ಹಾಕಿದ್ದಾರೆ. ಹಾಗೆಯೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿಕೆ ಇಟ್ಟುಕೊಂಡು ಕೇಸ್ ಮಾಡಿದ್ದಾರೆ. ಬಂಟ್ವಾಳದ ಮಾಣಿಯಲ್ಲಿ ನಮ್ಮ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ. ಆದರೆ ಹಲ್ಲೆ ಮಾಡಿದವರ ಬದಲು ಹಲ್ಲೆಗೊಳಗಾದವರ ಮೇಲೆ ಕೇಸ್ ಹಾಕಿದ್ದಾರೆಂದು ಗುಡುಗಿದರು.

ಕಾಂಗ್ರೆಸ್ ಗೂಂಡಾಗಿರಿ ಹಾಗೂ ದ್ವೇಷದ ರಾಜಕಾರಣದ ಮೂಲಕ ವಿರೋಧ ಪಕ್ಷವನ್ನು ಮೆಟ್ಟಿ ನಿಲ್ಲಬಹುದು ಅಂದುಕೊಂಡಿದೆ. ಸಿದ್ದರಾಮಯ್ಯರ ತಾತಾ, ಮುತ್ತಾತನೂ ಈ ಕೆಲಸ ಮಾಡಿ ಯಶಸ್ವಿ ಆಗಿಲ್ಲ. ಸಂವಿಧಾನಿಕ ಸರ್ಕಾರ ಕೆಲಸ ಮಾಡಬೇಕು, ಅದು ಬಿಟ್ಟು ದ್ವೇಷ ರಾಜಕಾರಣ ಬೇಡ. ಈ ಸರ್ಕಾರ ಹೆಚ್ಚು ದಿನ ಬಾಳಲ್ಲ, ಉಳಿಯೋದಿಲ್ಲ. ಅಧಿಕಾರಿಗಳಿಗೆ ಒತ್ತಡ ಮತ್ತು ಭಯದ ವಾತಾವರಣದ ಮೂಲಕ ನಿಯಂತ್ರಣ ಹೇರುತ್ತಾ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಸರ್ಕಾರ 20 ಸಾವಿರ ಕೋಟಿಯ ಟೆಂಡರ್ ವಾಪಾಸ್ ಪಡೆದಿದೆ. 80% ಕಮಿಷನ್‌ಗೆ ಡಿಮ್ಯಾಂಡ್ ಇಡಲು ಈ ರೀತಿ ಮಾಡಿದ್ದಾರೆ. ಕಾಮಗಾರಿ ಪ್ರಾರಂಭವಾದ ಪ್ರಕ್ರಿಯೆಯನ್ನು ನಿಲ್ಲಿಸಲಾಗಿದೆ. ಪರ್ಸೆಂಟೇಜ್‌ಗಾಗಿ ಕಾಮಗಾರಿ ನಿಲ್ಲಿಸಿದ್ದಾರೆ. ಇದು 80% ಸರ್ಕಾರ. ನಮ್ಮ ಸರ್ಕಾರದ ಯಾವುದೇ ವಿಚಾರವನ್ನು ತನಿಖೆ ಮಾಡಿ. ಜೊತೆಗೆ ಲೋಕಾಯುಕ್ತದ ಸಿದ್ದರಾಮಯ್ಯ ಕೇಸ್ ಕೂಡ ತನಿಖೆ ಆಗಲಿ. ನಮ್ಮ‌ ಕಾಲಘಟ್ಟದ ಯಾವುದು ಬೇಕಾದ್ರೂ ತನಿಖೆ‌ಯಾಗಲಿ. ಆದರೆ 20 ಸಾವಿರ ಕೋಟಿ ಬಗ್ಗೆ ಬಹಿರಂಗಪಡಿಸಿ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+