Get Updates
Get notified of breaking news, exclusive insights, and must-see stories!

ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶ:ಡಾ.ಹೆಗ್ಗಡೆ ಅಸಮಾಧಾನ

ಮಂಗಳೂರು, ಜನವರಿ 02: ಶಬರಿಮಲೆಯ ಅಯ್ಯಪ್ಪ ದೇವಾಲಯಕ್ಕೆ ಇಂದು ಬುಧವಾರ ಮುಂಜಾನೆ ಇಬ್ಬರು ಮಹಿಳೆಯರು ಪ್ರವೇಶಿಸಿದ್ದಾರೆ. ಸುಪ್ರೀಂ ಕೋರ್ಟ್ ದೇವಾಲಯ ಪ್ರವೇಶಕ್ಕೆ ನಿರ್ಬಂಧವನ್ನು ತೆರವುಗೊಳಿಸಿದ ಮೇಲೆ ಮೊದಲ ಬಾರಿಗೆ ಇಬ್ಬರು ಮಹಿಳೆಯರು ದೇವಾಲಯ ಪ್ರವೇಶಿಸಿದ್ದು ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ.

ಬೆಳಗಿನ ಜಾವ 3:45ರ ಸುಮಾರಿಗೆ ಬಿಂದು ಮತ್ತು ಕನಕದುರ್ಗಾ ಎಂಬ 40 ವರ್ಷ ವಯಸ್ಸಿನ ಇಬ್ಬರು ಮಹಿಳೆಯರು ದೇವಾಲಯ ಪ್ರವೇಶಿಸುತ್ತಿರುವ ಮತ್ತು ಸುತ್ತ ಪೊಲೀಸ್ ರಕ್ಷಣೆ ಇರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ನಡುವೆ ಶಬರಿಮಲೆ ಸನ್ನಿಧಾನಕ್ಕೆ ಮಹಿಳೆಯರ ಪ್ರವೇಶ ವಿಚಾರವಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಧರ್ಮಸ್ಥಳದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಶಬರಿಮಲೆಗೆ ಮಹಿಳೆಯರು ಪ್ರವೇಶಿಸಿದ್ದು ಒಳ್ಳೆದಾಯ್ತಲ್ಲ. ಹಠ ತೊಟ್ಟವರಿಗೆ ಸಮಧಾನ ಆಯ್ತಲ್ಲವೇ ? ಎಂದು ಅವರು ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Dr D Veerendra Heggade unhappy over development in Sabarimala

ಶಬರಿಮಲೆ ಕ್ಷೇತ್ರದ ಆಚಾರ, ಸಂಪ್ರದಾಯ ಪಾಲಿಸುವುದು ಮುಖ್ಯ . ಬ್ರಹ್ಮಚರ್ಯ, ಸಂಯಮ ಸಾಧಿಸಿ ವ್ರತಾಚರಣೆ ಮಾಡಿ ಕ್ಷೇತ್ರಕ್ಕೆ ತೆರಳುತ್ತಾರೆ . ಈಗೆಲ್ಲ ಬೆಳಗ್ಗೆ ಮಾಲೆ ಹಾಕಿ ಮಧ್ಯಾಹ್ನ ಸನ್ನಿಧಾನಕ್ಕೆ ಹೋಗುವ ಆಚಾರ ಇದೆ . ಹೀಗಾಗಿ ಇಂತಹ ಅಪಚಾರಗಳಾಗುತ್ತಿವೆ ಎಂದು ಡಾ. ಡಿ ವೀರೇಂದ್ರ ಹೆಗ್ಗಡೆ ಬೇಸರ ವ್ಯಕ್ತಪಡಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+